More

    ಕೆಲಸ ಕಳೆದುಕೊಂಡಿದ್ದೀರಾ…? ಸರ್ಕಾರವೇ ಕೊಡುತ್ತೆ ಮೂರು ತಿಂಗಳ ಸಂಬಳ; ಅರ್ಹತೆಗಳೇನು?

    ನವದೆಹಲಿ: ಕರೊನಾ ಸಂಕಷ್ಟ ಅಥವಾ ಇತರ ಕಾರಣಗಳಿಂದಾಗಿ ಕೆಲಸ ಕಳೆದುಕೊಂಡವರಿಗೆ ಕೇಂದ್ರ ಸರ್ಕಾರ ನಿರುದ್ಯೋಗ ಭತ್ಯೆಯನ್ನು ನೀಡಲಿದೆ. ಅದಕ್ಕಾಗಿ ನಿಗದಿಪಡಿಸಲಾಗಿದ್ದ ಮಾನದಂಡಗಳಲ್ಲಿ ಕೊಂಚ ವಿನಾಯ್ತಿಯನ್ನು ನೀಡಿದೆ. ಇದರಿಂದ ಅಂದಾಜು 40 ಲಕ್ಷ ಕಾರ್ಮಿಕರು ಪ್ರಯೋಜನ ಪಡೆಯಲಿದ್ದಾರೆ.

    ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುವ, ಇಎಸ್​ಐ ವಿಮಾದಾರರಾಗಿರುವ ನೌಕರರು ಮೂರು ತಿಂಗಳ ಸರಾಸರಿ ಸಂಬಳದ ಶೇ.50 ರಷ್ಟು ಮೊತ್ತವನ್ನು ನಿರುದ್ಯೋಗ ಭತ್ಯೆಯನ್ನಾಗಿ ಪಡೆಯಬಹುದು. ಇದಕ್ಕೆ ನೌಕರರೇ ನೇರವಾಗಿ ಅರ್ಜಿ ಸಲ್ಲಿಸಬಹುದು.

    2020ರ ಮಾರ್ಚ್​ 24ರಿಂದ ಡಿಸೆಂಬರ್​ 31ರ ಅವಧಿಯಲ್ಲಿ ಈಗಾಗಲೇ ಕೆಲಸ ಕಳೆದುಕೊಂಡಿರುವ ಹಾಗೂ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ನೌಕರರು ಇದರ ಪ್ರಯೋಜನ ಪಡೆಯಬಹುದು.

    ಇದನ್ನೂ ಓದಿ; ಸರ್ಕಾರಿ ಉದ್ಯೋಗಕ್ಕೆ ಒಂದೇ ಅರ್ಹತಾ ಪರೀಕ್ಷೆ; ಒಂದೇ ನೇಮಕಾತಿ ಪ್ರಾಧಿಕಾರ; ಕೇಂದ್ರ ಸಂಪುಟ ಸಮ್ಮತಿ 

    ಕೇಂದ್ರ ಕಾರ್ಮಿಕ ಸಚಿವ ಸಂತೋಷ್​ ಗಂಗ್ವಾರ್​ ನೇತೃತ್ವದಲ್ಲಿ ನಡೆದ ಕಾರ್ಮಿಕರ ರಾಜ್ಯ ವಿಮಾ ಸಂಸ್ಥೆಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
    ಈ ಯೋಜನೆಯಡಿ ಕೊನೆಯದಾಗಿ ಪಡೆದ ಸಂಬಳದ ಶೇ.50ಕ್ಕೆ ಸಮಾನವಾಗಿ ಆರ್ಥಿಕ ನೆರವನ್ನು ಮೂರು ತಿಂಗಳ ಅವಧಿಗೆ ನೀಡಲಾಗುತ್ತದೆ ಎಂದು ಇಎಸ್​ಐಸಿ ಮಂಡಳಿ ಸದಸ್ಯೆ ಅಮರ್​ಜೀತ್​ ಕೌರ್​ ಮಾಹಿತಿ ನೀಡಿದ್ದಾರೆ. ವಿನಾಯ್ತಿಯನ್ನು ಕೊಂಚ ಸಡಿಸಿದ್ದರೆ, 75 ಲಕ್ಷಕ್ಕೂ ಅಧಿಕ ನೌಕರರು ಇದರ ಸೌಲಭ್ಯ ಪಡೆಯಬಹುದಿತ್ತು ಎಂಬುದು ಅವರ ಅಭಿಪ್ರಾಯ.

    ಮಾಸಿಕ 21,000 ರೂ.ವರೆಗೆ ಸಂಬಳ ಪಡೆಯುವವರು ಇಎಸ್​ಐ ವಿಮಾ ವ್ಯಾಪ್ತಿಗೆ ಬರುತ್ತಾರೆ. ಪ್ರತಿ ತಿಂಗಳು ಆರೋಗ್ಯ ಸೇವೆಗಾಗಿ ಕಂತುಗಳನ್ನು ಕಟ್ಟುತ್ತಿರುತ್ತಾರೆ. ಇದಕ್ಕಾಗಿ ಇವರನ್ನು ವಿಮಾದಾರರು ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ವಿಮಾದಾರರಾಗಿರುವ ಮಹಿಳೆಯರು ಬಾಣಂತನದ ರಜೆಯಲ್ಲಿದ್ದಾಗ ಆ ಸಂಬಳವನ್ನು ಇಎಸ್​ಐ ಮೂಲಕವೇ ನೀಡಲಾಗುತ್ತದೆ.

    ಇದನ್ನೂ ಓದಿ; ಶುಭಸುದ್ದಿ…! ಮೋದಿ ಬಯಸಿದಲ್ಲಿ ತುರ್ತು ಬಳಕೆಗೆ ಸಜ್ಜಾಗುತ್ತೆ ದೇಶಿಯ ಕರೊನಾ ಲಸಿಕೆ 

    ಎರಡು ವರ್ಷದಿಂದ ಉದ್ಯೋಗದಲ್ಲಿದ್ದು, ಕನಿಷ್ಠ ಮೂರು ತಿಂಗಳ ವಿಮೆ ಪಾವತಿಸಿದವರು ಈ ಯೋಜನೆಗೆ ಅರ್ಹರಾಗಿದ್ದಾರೆ. ಹೆಚ್ಚಿನ ಮಾಹಿತಿಗೆ ಸ್ಥಳೀಯ ಇಎಸ್​ಐ ಕಚೇರಿಯನ್ನು ಸಂಪರ್ಕಿಸಬಹುದು.

    ಅನುಕಂಪ ಆಧಾರದ ಸರ್ಕಾರಿ ಕೆಲಸ; ಗಳಿಸಿದ್ದು ಕೆಜಿಗಟ್ಟಲೇ ಚಿನ್ನ, ಬೆಳ್ಳಿ; ಕೋಟ್ಯಂತರ ಮೌಲ್ಯದ ಸ್ವತ್ತು ವಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts