ಸಾರಿಗೆ ಸಂಧಾನ ಸಭೆ ಸಕ್ಸಸ್​, ಮುಷ್ಕರ ವಾಪಸ್​

transport-workers-strike
Published on

ಬೆಂಗಳೂರು: ಸಾರಿಗೆ ನೌಕರರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದ್ದು, ಮೂರು ದಿನಗಳ ಬಳಿಕ ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್​ ಬಿದ್ದಿದೆ.

ತಮ್ಮನ್ನೂ ಸರ್ಕಾರಿ ಸಿಬ್ಬಂದಿಯನ್ನಾಗಿ ಪರಿಗಣಿಸಬೇಕು ಎಂಬುದರ ಜತೆಗೆ ಹಲವು ಬೇಡಿಕೆ ಈಡೇರಿಸುವಂತೆ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಭಾನುವಾರ ಸಂಜೆ ನಡೆದ ಸಂಧಾನ ಸಭೆ ಸಕ್ಸಸ್​ ಆಗಿದ್ದು, ಮುಷ್ಕರ ಕೈ ಬಿಡುವ ಬಗ್ಗೆ ಫ್ರೀಡಂ ಪಾರ್ಕ್​ನಲ್ಲಿ ಘೋಷಣೆ ಮಾಡುವುದಾಗಿ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದ್ದಾರೆ.

ಸರ್ಕಾರಿ ನೌಕರರ ಆರನೇ ವೇತನ ಜಾರಿ ಮಾಡಲು ಒಪ್ಪಿಗೆ ನೀಡಿದೆಯಾದರೂ ಸರ್ಕಾರಿ ನೌಕರರು ಅಂತ ಪರಿಗಣಿಸಲ್ಲ ಎಂದು ಸರ್ಕಾರ ಸ್ಪಷ್ಟನೆ ಕೊಟ್ಟಿದೆ. ಕೋವಿಡ್​ನಿಂದ ಮೃತಪಟ್ಟ ಸಾರಿಗೆ ಸಿಬ್ಬಂದಿ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ, ಸಿಬ್ಬಂದಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ.

ಇನ್ನು ಇಂದು(ಭಾನುವಾರ) ರಾತ್ರಿಯಿಂದಲೇ ಸಾರಿಗೆ ಬಸ್​ ಸಂಚಾರ ಆರಂಭ ಆಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net