25.9 C
Bengaluru
Wednesday, January 22, 2020

ಕಮಿಷನ್ ದಂಧೆಕೋರರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಬೆಂಗಳೂರು:  ಸರ್ಕಾರಿ ಆಸ್ಪತ್ರೆಗಳ ಕಮಿಷನ್ ದಂಧೆಯಲ್ಲಿ ಭಾಗಿಯಾಗಿರುವ ಏಜೆಂಟರು ಹಾಗೂ ವೈದ್ಯರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಎಚ್ಚರಿಕೆ ಕೊಟ್ಟಿದ್ದಾರೆ.

ಹಣ ಪಡೆದು ಹೊರರಾಜ್ಯದ ಹಾಗೂ ಹೊರ ದೇಶದ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ಕಲ್ಪಿಸುತ್ತಿರುವ ಕುರಿತು ‘ಸರ್ಕಾರಿ ಆಸ್ಪತ್ರೆಗಳಲ್ಲಿ ಕಮಿಷನ್ ಚಿಕಿತ್ಸೆ ದಂಧೆ’ ಶೀರ್ಷಿಕೆಯಡಿ ಶುಕ್ರವಾರ ವಿಜಯವಾಣಿ ಮುಖಪುಟದಲ್ಲಿ ಪ್ರಕಟವಾಗಿದ್ದ ತನಿಖಾ ವರದಿಗೆ ಪ್ರತಿಕ್ರಿಯಿಸಿರುವ ಸಚಿವರು, ಸರ್ಕಾರಿ ವ್ಯವಸ್ಥೆ ಇರುವುದು ಜನರ ಸೇವೆಗಾಗಿ. ಅದರಲ್ಲಿ ಯಾವುದೇ ಲೋಪ ಹಾಗೂ ಭ್ರಷ್ಟಾಚಾರ ಕಂಡುಬಂದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರದಿಂದ ವೇತನ ಪಡೆದೂ ಸರಿಯಾಗಿ ಕೆಲಸ ಮಾಡಲಿಲ್ಲ ಎಂದರೆ ಯಾವುದೇ ಕನಿಕರ ತೋರುವುದಿಲ್ಲ. ಬಹಳಷ್ಟು ವೈದ್ಯರು ಉತ್ತಮ ಸೇವೆ ನೀಡುವ ಮೂಲಕ ಆಸ್ಪತ್ರೆಗೆ ಒಳ್ಳೆಯ ಹೆಸರು ತಂದಿದ್ದಾರೆ. ಆದರೆ ಕೆಲವರು ಮಾಡುವ ತಪ್ಪಿನಿಂದ ಇಂತಹ ಕೆಟ್ಟ ಹೆಸರು ಬರುತ್ತದೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹ ರೋಗಿಗಳನ್ನು ಕಾಡಿಸದೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.

ಲೋಪಗಳು ಮರುಕಳಿಸದಂತೆ ಮೇಲ್ವಿಚಾರಣೆ ನಡೆಸಲು ಆಡಳಿತಾಧಿಕಾರಿಗಳು, ವೈದ್ಯಕೀಯ ಅಧೀಕ್ಷಕರು, ಸ್ಥಾನಿಕ ವೈದ್ಯರುಗಳಿಗೆ ಸೂಚನೆ ನೀಡಲಾಗುವುದು. ಸಂಬಂಧಿಸಿದ ವೈದ್ಯಾಧಿಕಾರಿಗಳನ್ನು ವಿಚಾರಿಸುವುದಾಗಿ ತಿಳಿಸಿದ್ದಾರೆ. ಸೌಲಭ್ಯಗಳು ಜನಸಾಮಾನ್ಯರಿಗೆ ಸರಿಯಾಗಿ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಸಿಗಬೇಕೆಂಬ ಉದ್ದೇಶದಿಂದ ಸೇವೆ, ಸೌಲಭ್ಯ ವಿಸ್ತರಿಸಲಾಗುತ್ತಿದೆ. ಆದರೆ ಕೆಲವರಿಂದ ತಪು್ಪ ಸಂದೇಶ ರವಾನೆಯಾಗುತ್ತಿದ್ದು. ಮೇಲಧಿಕಾರಿಗಳ ಜತೆ ರ್ಚಚಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

| ಡಾ. ಜಯಂತಿ ಡೀನ್ ಮತ್ತು ನಿರ್ದೇಶಕಿ, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ

ವೃದ್ಧಾಶ್ರಮವಾದ ವಿಶ್ರಾಂತಿಧಾಮ..!

ಬೆಂಗಳೂರು: ರೋಗಿಗಳು ಮತ್ತು ಅವರ ಪೋಷಕರಿಗೆ ಅನುಕೂಲವಾಗಲಿ ಎಂದು ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ನಿರ್ವಿುಸಿರುವ ‘ವಿಶ್ರಾಂತಿ ಧಾಮ‘ ವೃದ್ಧಾಶ್ರಮವಾಗಿ ಪರಿವರ್ತನೆಯಾಗಿದ್ದು, ಕೆಲ ವೈದ್ಯ ವಿದ್ಯಾರ್ಥಿಗಳಿಗೆ ಪೇಯಿಂಗ್ ಗೆಸ್ಟ್ ರೀತಿಯೂ ಬಳಕೆಯಾಗುತ್ತಿದೆ!

ಆಸ್ಪತ್ರೆ ಆವರಣದಲ್ಲಿ ನಿರ್ವಣವಾಗಿರುವ 4 ಅಂತಸ್ತಿನ ವಿಶ್ರಾಂತಿಧಾಮದಲ್ಲಿ 400ಕ್ಕೂ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಇದೆ. ಹೊರ ಜಿಲ್ಲೆಗಳಿಂದ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಬರುವ ರೋಗಿಗಳು ಹೆಚ್ಚು ದಿನ ಇಲ್ಲೇ ಉಳಿಯಬೇಕಾದ ಸಂದರ್ಭದಲ್ಲಿ ಅನುಕೂಲವಾಗಲಿ ಎಂದು ಈ ವಿಶ್ರಾಂತಿಧಾಮ ನಿರ್ವಿುಸಲಾಗಿದೆ. ಆದರೆ, ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ದೊರೆಯುತ್ತಿಲ್ಲ ಎಂಬುದು ‘ವಿಜಯವಾಣಿ’ ತಂಡ ಪರಿಶೀಲಿಸಿದಾಗ ಬಯಲಾಗಿದೆ.

ಏಜೆಂಟ್​ಗಳು ಕರೆ ತರುವ ಬೇರೆ ರಾಜ್ಯದ ಕೆಲ ರೋಗಿಗಳು ವರ್ಷಗಳ ಕಾಲ ಇಲ್ಲೇಯಿದ್ದ ಹಣ ಇರುವವರೆಗೂ ಚಿಕಿತ್ಸೆ ಪಡೆಯುತ್ತಾರೆ. ಕೊನೆಗೆ ವಿಶ್ರಾಂತಿಧಾಮದಲ್ಲೇ ಅಸುನೀಗುತ್ತಿದ್ದಾರೆ. ಕೊನೆಗೆ ಸಿಬ್ಬಂದಿ, ಅನಾಥ ಶವವೆಂದು ಸಂಬಂಧಪಟ್ಟವರಿಗೆ ವಿಷಯ ತಿಳಿಸಿ ಅಲ್ಲಿಂದ ಸಾಗಿಸುತ್ತಿದ್ದಾರೆ. ಕೆಲ ಶ್ರೀಮಂತರು ವೃದ್ಧ ಪಾಲಕರಿಗೆ ಚಿಕಿತ್ಸೆ ಕೊಡಿಸಲು ಕರೆತಂದು ವಿಶ್ರಾಂತಿ ಧಾಮದಲ್ಲೇ ಬಿಡುತ್ತಿದ್ದಾರೆ.

ವೈದ್ಯರ ಪೇಯಿಂಗ್ ಗೆಸ್ಟ್

ವೈದ್ಯ ವಿದ್ಯಾರ್ಥಿಗಳು ವಾಸ್ತವ್ಯ ಹೂಡಲು ಅವರಿಗೆ ಸರ್ಕಾರ ಹಾಸ್ಟೆಲ್ ನಿರ್ವಿುಸಿದೆ. ನಿಗದಿತ ಶುಲ್ಕ ಪಾವತಿಸಿ ಅಲ್ಲಿಯೇ ಇರಬೇಕು. ಆದರೆ, ಕೆಲ ವೈದ್ಯರು ಅದಕ್ಕಿಂತ ಕಡಿಮೆ ವೆಚ್ಚವೆಂದೊ ಅಥವಾ ವಸತಿ ಸೌಲಭ್ಯ ಸಿಗದೆ ವಿಶ್ರಾಂತಿಧಾಮದ ಸಿಬ್ಬಂದಿ ಜತೆಗೆ ಚೌಕಾಸಿ ಮಾಡಿ ತಿಂಗಳಿಗೆ ಬಾಡಿಗೆ ಕೊಟ್ಟು ಇಲ್ಲಿಯೇ ವರ್ಷಗಟ್ಟಲೇ ವಾಸ್ತವ್ಯ ಹೂಡಿದ್ದಾರೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...