More

    ಕಣದಲ್ಲಿ 2216 ಅಭ್ಯರ್ಥಿಗಳು

    ಗದಗ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಂತಿಮವಾಗಿ 53 ಗ್ರಾಪಂಗಳ 801 ಸ್ಥಾನಗಳಿಗೆ 2216 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

    801 ಸ್ಥಾನಗಳ ಪೈಕಿ 7 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗಿಲ್ಲ. ಹೀಗಾಗಿ ಖಾಲಿ ಇರುವ 7 ಸ್ಥಾನಗಳ ಜತೆಗೆ ಗದಗ ತಾಲೂಕಿನಲ್ಲಿ 37, ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕಿನಲ್ಲಿ ತಲಾ 7 ಸೇರಿ 51 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 743 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

    ಗದಗ ತಾಲೂಕಿನ 26 ಗ್ರಾಪಂಗಳ 438 ಸ್ಥಾನಗಳಿಗೆ ಅನುಸೂಚಿತ ಜಾತಿ 207, ಅನುಸೂಚಿತ ಪಂಗಡ 77, ಹಿಂದುಳಿದ ಅ ವರ್ಗ 216, ಹಿಂದುಳಿದ ಬ ವರ್ಗ 36, ಸಾಮಾನ್ಯ 653 ಸೇರಿ 1189 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ 13 ಗ್ರಾಪಂಗಳ 174 ಸ್ಥಾನಗಳಿಗೆ ಅನುಸೂಚಿತ ಜಾತಿಯ 144, ಅನುಸೂಚಿತ ಪಂಗಡ 47, ಹಿಂದುಳಿದ ಅ ವರ್ಗ 55, ಹಿಂದುಳಿದ ಬ ವರ್ಗ 9, ಸಾಮಾನ್ಯ 257 ಸೇರಿ 512 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಶಿರಹಟ್ಟಿ ತಾಲೂಕಿನ 14 ಗ್ರಾಪಂಗಳ 189 ಸ್ಥಾನಗಳಿಗೆ ಅನುಸೂಚಿತ ಜಾತಿ 114, ಅನುಸೂಚಿತ ಪಂಗಡ 55, ಹಿಂದುಳಿದ ಅ ವರ್ಗ 62, ಹಿಂದುಳಿದ ಬ ವರ್ಗ 17, ಸಾಮಾನ್ಯ 267 ಸೇರಿ 515 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

    ತುರುಸಿನ ಪೈಪೋಟಿ: ಗ್ರಾಪಂ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳು ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಓಣಿಯ ಹಿರಿಯರ ಮನೆಮನೆಗೆ ತೆರಳಿ ಮತ ಯಾಚಿಸುತ್ತಿದ್ದಾರೆ. ಕಳೆದ ಬಾರಿ ಸೋಲು ಕಂಡಿರುವೆ, ಈ ಸಲವಾದರೂ ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಈ ಚುನಾವಣೆಯಲ್ಲಿ ಪದವಿ ಪೂರೈಸಿರುವ ಅಭ್ಯರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದು, ನಮಗೂ ಒಂದು ಅವಕಾಶ ಕೊಡಿ ಎಂದು ಬೇಡಿಕೊಳ್ಳುತ್ತಿದ್ದಾರೆ. ನಮಗೊಂದು ಅವಕಾಶ ನೀಡಿದರೆ ಗ್ರಾಮಕ್ಕೆ ಮೂಲ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಮತದಾರರ ದುಂಬಾಲು ಬಿದ್ದಿದ್ದಾರೆ.

    ಪ್ರತಿ ವಾರ್ಡ್​ನಲ್ಲಿ 1000ದಿಂದ 2000 ಮತದಾರರಿರುತ್ತಾರೆ. 200-400 ಕುಟುಂಬಗಳಿರುತ್ತವೆ. ಪ್ರತಿ ಮನೆಗಳಿಗೆ ಭೇಟಿ ನೀಡಿ ಮತ ನೀಡುವಂತೆ ಮನವೊಲಿಸುವ ಕಾರ್ಯ ನಡೆದಿದೆ. ಇದರೊಂದಿಗೆ ಹಣ ಹಾಗೂ ಸಾವಿರಾರು ರೂ. ವ್ಯಯಿಸಿ ರೇಷನ್ ಕೊಡಿಸುವ ಪ್ರಕ್ರಿಯೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts