ಗ್ರಾಪಂ ನೌಕರರ ಪ್ರತಿಭಟನೆ

blank

ಕಾರವಾರ: ನಗರ ಸ್ಥಳೀಯ ಸಂಸ್ಥೆಗಳ ನೌಕರರ ವೇತನ ಶ್ರೇಣಿಯನ್ನು ಗ್ರಾಪಂ ನೌಕರರಿಗೂ ಜಾರಿಗೆ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಅಂಬೇಡ್ಕರ್ ವೇದಿಕೆ ಬಣದ ಸದಸ್ಯರು ನಗರದ ಜಿಲ್ಲಾಽಕಾರಿ ಕಚೇರಿಯ ಆವರಣದಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಽ ಧರಣಿ ಪ್ರಾರಂಭಿಸಿದ್ದು, ಮಂಗಳವಾರ ಧರಣಿ 2 ನೇ ದಿನಕ್ಕೆ ಕಾಲಿರಿಸಿದೆ.
ರಾಜ್ಯದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಬಿಲ್ ಕಲೆಕ್ಟರ್, ವಾಟರ್ ಮ್ಯಾನ್, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್, ಸಿಪಾಯಿ, ಸ್ವಚ್ಚತಾಗಾರ ಹೀಗೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರನ್ನು ಗ್ರಾಪಂ ನೌಕರರು ಎಂದು ಪರಿಗಣಿಸಲಾಗಿದೆ. ಆದರೆ, ಈಗ ನೀಡುತ್ತಿರುವ ವೇತನದಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಅಲ್ಲದೇ ಪ್ರತಿ ತಿಂಗಳು ಸರಿಯಾಗಿ ವೇತನ ಪಾವತಿ ಆಗದ ಕಾರಣ ಸಮಸ್ಯೆ ಉಂಟಾಗಿದೆ ಎಂದು ನೌಕರರ ತಮ್ಮ ಸಮಸ್ಯೆಯನ್ನು ತೋಡಿಕೊಂಡಿದ್ದಾರೆ.
ಗ್ರಾಪಂ ನೌಕರರು ನಿವೃತ್ತರಾದ ನಂತರ ಅವರಿಗೆ ನಿವೃತ್ತಿ ಉಪಧನ, ಬಾಕಿ ಉಳಿದ ವೇತನ ಹಾಗೂ ಮಾಸಿಕ 9 ಸಾವಿರ ರೂ. ಪಿಂಚಣಿ ಸಿಗುವಂತೆ ನೋಡಿಕೊಳ್ಳಬೇಕು. ಎಲ್ಲ ಸಿಬ್ಬಂದಿಗೆ ಪ್ರತಿ ತಿಂಗಳು 5 ನೇ ತಾರೀಕಿನ ಒಳಗೆ ವೇತನ ಪಾವತಿಯಾಗುವಂತೆ ನೋಡಿಕೊಳ್ಳಬೇಕು. ಇದುವರೆಗೆ ಬಾಕಿ ಇರುವ ವೇತನವನ್ನು 1 ತಿಂಗಳ ಒಳಗೆ ಪಾವತಿಸಬೇಕು ಎಂಬ ಬೇಡಿಕೆಗಳ ಪಟ್ಟಿಯನ್ನು ನೌಕರರು ಜಿಲ್ಲಾಽಕಾರಿ ಅವರಿಗೆ ಸಲ್ಲಿಸಿದ್ದಾರೆ.
ಸಂಘಟನೆಯ ಅಧ್ಯಕ್ಷ ಮಂಜುನಾಥ ಭೋವಿ, ಉಪಾಧ್ಯಕ್ಷ ವೀರೇಶ ಕಲ್ಮಟ್ಲೇರ್, ಪ್ರಧಾನ ಕಾರ್ಯದರ್ಶಿ ಮಾದೇಶ ಹುಲ್ಲೂರ, ಪರಮೇಶ್ವರ ಪಾಟೀಲ, ಸಂಘಟನಾ ಕಾರ್ಯದರ್ಶಿ ಕೃಷ್ಣಸ್ವಾಮಿ, ಜಾರ್ಜ್ ಥಾಮಸ್ ಬೆಂಜಮಿನ್ ಇತರರು ಇದ್ದರು.

Share This Article

ಈ ಗುಣಗಳನ್ನು ಹೊಂದಿರುವ ಜನರು ತಮ್ಮ ಜೀವನದುದ್ದಕ್ಕೂ ಶ್ರೀಮಂತರಾಗಿರುತ್ತಾರೆ..ಯಾಕೆ ಗೊತ್ತಾ?Chanakya Niti

Chanakya Niti: ಆಚಾರ್ಯ ಚಾಣಕ್ಯ ಅವರನ್ನು ಅವರ ಕಾಲದ ಅತ್ಯಂತ ಬುದ್ಧಿವಂತ ವ್ಯಕ್ತಿ ಎಂದೂ ಕರೆಯಲಾಗುತ್ತದೆ.…

ಬೇಸಿಗೆಯಲ್ಲಿ ತೆಂಗಿನಕಾಯಿ ನೀರು ಅಥವಾ ಕಬ್ಬಿನ ಜ್ಯೂಸ್​ ಯಾವುದು ಉತ್ತಮ! | Better In Summer

Better In Summer ; ಈ ಬಿರು ಬೇಸಿಗೆಯಲ್ಲಿ ಸಾಮಾನ್ಯವಾಗಿ ತಂಪಾದ ಅಥವಾ ಅಹ್ಲಾದಕಾರ ಆಹಾರ…

ಈ ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯಬೇಡಿ! ಅಕಸ್ಮಾತ್​ ನೀರು ಕುಡಿದ್ರೆ ಏನಾಗುತ್ತದೆ ಗೊತ್ತಾ? Fruits

Fruits: ಕೆಲವು ಸಂದರ್ಭಗಳಲ್ಲಿ, ಕೆಲವು ಹಣ್ಣುಗಳನ್ನು ತಿಂದ ನಂತರ ನೀರು ಕುಡಿಯುವುದರಿಂದ ಅತಿಸಾರದ ಅಪಾಯ ಹೆಚ್ಚಾಗುತ್ತದೆ.…