More

    ಮಾದರಿ ನೆಡುತೋಪು ವೀಕ್ಷಿಸಿದ ಜಿಪಂ ಸಿಇಒ

    ವಿಜಯಪುರ: ಅರಣ್ಯ ಇಲಾಖೆಯ ವಿವಿಧ ಯೋಜನೆಗಳಡಿ ನಿರ್ಮಿಸಿದ ಭೂತನಾಳ ಸಸ್ಯ ಕ್ಷೇತ್ರಕ್ಕೆ ಜಿಪಂ ಸಿಇಒ ರಾಹುಲ್ ಶಿಂಧೆ ಭಾನುವಾರ ಭೇಟಿ ನೀಡಿದರು.

    ಅರಣ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಅನುದಾನದಡಿ ವಿವಿಧ ಜಾತಿಯ ಹಾಗೂ ವಿವಿಧ ಅಳತೆಯ ಸಸಿಗಳನ್ನು ಬೆಳೆಸಿ, ನಿರ್ವಹಣೆ ಮಾಡುತ್ತಿರುವ 70 ಸಾವಿರ ಸಸಿಗಳನ್ನು ವೀಕ್ಷಿಸಿದರು.

    2021-22ನೇ ಸಾಲಿನಲ್ಲಿ ಜಿಪಂ ಅಭಿವೃದ್ಧಿ ಅನುದಾನದಡಿ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಪರಿಶೀಲಿಸಿ, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ಬೆಳೆಸಿ, ಮಾದರಿ ನೆಡುತೋಪುಗಳನ್ನು ನಿರ್ಮಾಣ ಮಾಡಲು ಸೂಚಿಸಿದರು.

    ಈಗಾಗಲೇ ಜಿಲ್ಲೆಯ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಪಂ ಮಟ್ಟದ ಒಕ್ಕೂಟಗಳ ಸ್ವಸಹಾಯ ಸಂಘಗಳ ಮಹಿಳೆಯರಿಂದ ನರ್ಸರಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಸ್ವ-ಸಹಾಯ ಸಂಘಗಳ ಸದಸ್ಯರನ್ನು ಸದರಿ ಸಸ್ಯ ಕ್ಷೇತ್ರಕ್ಕೆ ಭೇಟಿ ನೀಡಲು ಜಿಪಂ ಉಪಕಾರ್ಯದರ್ಶಿ ಅವರಿಗೆ ಸೂಚಿಸಿದರು.

    ನಂತರ ಸಸ್ಯ ಕ್ಷೇತ್ರದ ಪಕ್ಕದಲ್ಲಿ ಕೆರೆ ಇದ್ದು, ಕೆರೆಗೆ ಹೊಂದಿಕೊಂಡಿರುವ ನಾಲಾಗಳಿಗೆ ಬಹುಕಮಾನುಗಳ ತಡೆಗೋಡೆ ನಿರ್ಮಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಉಪಕಾರ್ಯದರ್ಶಿ ಡಾ.ವಿಜಯಕುಮಾರ ಆಜೂರ, ಸಾಮಾಜಿಕ ಅರಣ್ಯ ವಲಯ ಅಧಿಕಾರಿ ಗಿರೀಶ್ ಹಲಕುಡೆ, ಪ್ರಾದೇಶಿಕ ಅರಣ್ಯ ವಲಯ ಅಧಿಕಾರಿ ಸಂತೋಷಕುಮಾರ ಅಜೂರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts