More

    ಶೋಕಿಗಾಗಿ ಮೊಬೈಲ್ ಅಂಗಡಿಗೆ ಕನ್ನ ಹಾಕಿ ಜೈಲು ಸೇರಿದ ಪದವಿ ವಿದ್ಯಾರ್ಥಿಗಳು

    ಬೆಂಗಳೂರು: ಶೋಕಿ ಜೀವನಕ್ಕಾಗಿ ಮೊಬೈಲ್ ಅಂಗಡಿಯ ಕಳ್ಳತನ ಪ್ರಕರಣದಲ್ಲಿ ಟ್ರಾಫಿಕ್ ೈನ್ ಆಧಾರದ ಮೇಲೆ ಮೂವರು ಪದವಿ ವಿದ್ಯಾರ್ಥಿಗಳನ್ನು ಸಂಜಯನಗರ ಪೊಲೀಸರು ಬಂಧಿಸಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಾದ ಪ್ರಭು (20), ಮೌನೇಶ (19) ಹಾಗೂ ಅಜಯ್ (19) ಬಂಧಿತರು.

    ಆರೋಪಿಗಳು ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಾಗಿದ್ದು, ಸಂಜಯನಗರದ ನ್ಯೂ ಬಿಇಎಲ್ ರಸ್ತೆಯ ಗ್ಯಾಜೆಟ್ ಕ್ಲಬ್ ಮೊಬೈಲ್ ಅಂಗಡಿಯಲ್ಲಿ ಕಳ್ಳತನ ಮಾಡಿದ್ದರು. ಬಂಧಿತರಿಂದ 50 ಲಕ್ಷ ರೂ. ಮೌಲ್ಯದ ದುಬಾರಿ ಮೊಬೈಲ್, ಕೈಗಡಿಯಾರ, ಲ್ಯಾಪ್‌ಟಾಪ್, ಕ್ಯಾಮರಾ, ಸ್ಮಾರ್ಟ್ ವಾರ್ಚ್ ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ.

    ಪ್ರಭು, ಮೌನೇಶ್ ಮತ್ತು ಅಜಯ್ ಸ್ನೇಹಿತರು. ಪ್ರಭು ಶೋಕಿಗಾಗಿ ಸಾಲ ಮಾಡಿಕೊಂಡಿದ್ದ. ಇದನ್ನು ತೀರಿಸಲು ಕಳ್ಳತನದ ಪ್ಲ್ಯಾನ್ ಮಾಡಿ ತನ್ನ ಸ್ನೇಹಿತರ ಜತೆಗೆ ಚರ್ಚೆ ನಡೆಸಿದ್ದ. ಗ್ಯಾಜೆಟ್ ಕ್ಲಬ್ ಮೊಬೈಲ್ ಅಂಗಡಿ ಮಾಲೀಕ ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಾನಿಕ್ ವಸ್ತುಗಳನ್ನು ಬಿಲ್ ಸಮೇತ ಖರೀದಿಸಿ ರಿಪೇರಿ ಮಾಡಿ ಮಾರಾಟ ಮಾಡುತ್ತಿದ್ದ. ಕೆಲ ದಿನಗಳ ಹಿಂದೆ ಈ ಅಂಗಡಿಗೆ ಪ್ರಭು, ಹೋಗಿ ಐೆನ್ ಖರೀದಿಸಿ ವಿಡಿಯೋ ಮಾಡಿಕೊಂಡು ಬಂದಿದ್ದ. ಅಂಗಡಿ ಬಗ್ಗೆ ತಿಳಿದಿದ್ದ ಪ್ರಭು, ಸ್ನೇಹಿತರೊಂದಿಗೆ ಕಳ್ಳತನ ಕುರಿತು ಚರ್ಚೆ ನಡೆಸಿದ್ದ.

    ಮಸ್ರೂಮ್ ವ್ಯಾಪಾರ ಮಾಡುತ್ತಿದ್ದ ಅಜಯ್ ತಂದೆ ಬಳಿ ಇಕೋ ಗೂಡ್ಸ್ ವಾಹನ ಇತ್ತು. ಸೆ.28ರ ರಾತ್ರಿ ಅಜಯ್ ತನ್ನ ತಂದೆಯ ಗೂಡ್ಸ್ ವಾಹನ ತೆಗೆದುಕೊಂಡು ಸ್ನೇಹಿತರೊಂದಿಗೆ ಗ್ಯಾಜೆಟ್ ಕ್ಲಬ್ ಮೊಬೈಲ್ ಅಂಗಡಿಗೆ ತೆರಳಿ, ಶಟರ್ ಮೀಟಿ ಒಳನುಗ್ಗಿ ಐೆನ್, ಓನ್ ಪ್ಲಸ್,ಸ್ಯಾಮ್‌ಸಾಂಗ್,ಓಪೋ, ಲ್ಯಾಪ್‌ಟಾಪ್, ಹ್ಯಾಂಡಿ ಕ್ಯಾಮರಾ, ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ವಸ್ತುಗಳನ್ನು ಬಾಕ್ಸ್‌ಗೆ ತುಂಬಿಕೊಂಡು ಗೂಡ್ಸ್ ವಾಹನದಲ್ಲಿ ತಂದು ಅಜಯ್ ಅವರ ತಂದೆ ಗೋದಾಮಿನಲ್ಲಿ ಬಚ್ಚಿಟ್ಟಿದ್ದರು. ಈ ಬಗ್ಗೆ ಅಂಗಡಿ ಮಾಲೀಕ ಕೊಟ್ಟ ದೂರಿನ ಮೇರೆಗೆ ಇನ್‌ಸ್ಪೆಕ್ಟರ್ ಭಾಗ್ಯವತಿ ಜೆ. ಬಂಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, 36 ಗಂಟೆಗಳ ಒಳಗಾಗಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಳವು ಮಾಡಿದ್ದ ಎಲ್ಲ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ ಎಂದು ದಯಾನಂದ್ ಮಾಹಿತಿ ನೀಡಿದ್ದಾರೆ.

    ಸುಳಿವು ಕೊಟ್ಟ ಟ್ರಾಫಿಕ್ ದಂಡ

    ಕಳವು ಮಾಡಿದ ವಸ್ತುಗಳನ್ನು ಇಕೋ ವಾಹನದಲ್ಲಿ ತುಂಬಿಕೊಂಡು ಎಚ್‌ಎಸ್‌ಆರ್ ಲೇಔಟ್‌ಗೆ ಬರುವಾಗ ಮಾರ್ಗಮಧ್ಯೆ ಭಯದಲ್ಲಿ ಎರಡು ಸಿಗ್ನಲ್ ಜಂಪ್ ಮಾಡಿದ್ದರು. ಅದರಲ್ಲಿ ಇಕೋ ಗೂಡ್ಸ್ ವಾಹನಕ್ಕೆ ಸ್ವಯಂ ಚಾಲಿತವಾಗಿ ದಂಡ ವಿಧಿಸಲಾಗಿತ್ತು. ತನಿಖೆ ಕೈಗೊಂಡ ಪೊಲೀಸರಿಗೆ ಅಂಗಡಿ ಸಮೀಪದ ಸಿಸಿ ಕ್ಯಾಮರಾದಲ್ಲಿ ವಾಹನದ ನಂಬರ್ ಪ್ಲೇಟ್ ದೃಶ್ಯ ಸೆರೆಯಾಗಿತ್ತು. ಸಿಸಿ ಕ್ಯಾಮರಾಗಳ ಸಹಾಯದಿಂದ ಗೂಡ್ಸ್ ವಾಹನ ಜಾಡು ಹಿಡಿಯುತ್ತಾ ಸಾಗಿದಾಗ ಸಿಗ್ನಲ್ ಜಂಪ್ ಮಾಡಿರುವುದು ಗೊತ್ತಾಗಿತ್ತು. ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಗೂಡ್ಸ್ ವಾಹನ ನಂಬರ್ ಪರಿಶೀಲನೆ ಮಾಡಿದಾಗ ಸ್ವಯಂ ಚಾಲಿತವಾಗಿ ದಂಡ ಜನರೇಟ್ ಆಗಿತ್ತು. ಅದರಲ್ಲಿನ ವಿಳಾಸ ಹುಡುಕಿ ಹೋದಾಗ, ಮನೆ ಸಮೀಪದ ಮೈದಾನದಲ್ಲಿ ಗೂಡ್ಸ್ ವಾಹನ ಲಭ್ಯವಾಗಿತ್ತು. ಸ್ವಲ್ಪ ಹೊತ್ತಿಗೆ ಬಂದ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅಜಯ್ ಮಾಹಿತಿ ಸಿಕ್ಕಿದೆ. ಆತನನ್ನು ವಶಕ್ಕೆ ಪಡೆದಾಗ, ಇತರರು ಸೆರೆ ಸಿಕ್ಕರು. ಗೋದಾಮಿನಲ್ಲಿ ಬಚ್ಚಿಟ್ಟಿದ್ದ ಕದ್ದ ವಸ್ತುಗಳ ಬಗ್ಗೆ ಸಹ ಬಾಯ್ಬಿಟ್ಟರು ಎಂದು ಬಿ.ದಯಾನಂದ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts