More

    ಬಂಟಕಲ್ಲು ತಾಂತ್ರಿಕ ಕಾಲೇಜು ಪದವಿಪ್ರದಾನ ಸಮಾರಂಭ

    ಶಿರ್ವ: ಕಾರ್ಪೊರೇಟ್ ಜಗತ್ತಿನಲ್ಲಿ ವಿದ್ಯಾರ್ಥಿಗಳನ್ನು ಅವರ ಕೌಶಲ ಮತ್ತು ಜ್ಞಾನಕ್ಕಿಂತ ಹೆಚ್ಚಾಗಿ ಅವರ ಮನೋಭಾವದ ಆಧಾರದ ಮೇಲೆ ಹೆಚ್ಚು ನೇಮಕ ಮಾಡಿಕೊಳ್ಳಲಾಗುತ್ತದೆ. ಕೌಶಲ ಮತ್ತು ಜ್ಞಾನವನ್ನು ಗಳಿಸಿಕೊಳ್ಳಬಹುದು ಆದರೆ ವರ್ತನೆ ಹುಟ್ಟಿನಿಂದ ಬಂದ ವಿಷಯವಾಗಿದೆ ಎಂದು ಮಾನವ ಸಂಪನ್ಮೂಲ ಅಧಿಕಾರಿ, ಬೆಂಗಳೂರಿನ ಮೈಂಡ್‌ಟ್ರೀಯ ಪನೀಶ್‌ರಾವ್ ಹೇಳಿದರು.

    ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ 7ನೇ ವರ್ಷದ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪದವಿ ಪ್ರದಾನ ಸಮಾರಂಭದ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
    ಸಂಸ್ಥೆಯ ಅಧ್ಯಕ್ಷ ಉಡುಪಿ ಶ್ರೀ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರಾಮಾಣಿಕ ಪ್ರಯತ್ನದಿಂದ ಸಮಾಜಕ್ಕೆ ಉಪಯುಕ್ತರಾಗಬೇಕು ಎಂದು ಕರೆ ನೀಡಿದರು.

    ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ.ಡಾ ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಉಪಪ್ರಾಂಶುಪಾಲ ಪ್ರೊ.ಡಾ.ಗಣೇಶ್ ಐತಾಳ್ ಪ್ರಮಾಣವಚನ ಬೋಧಿಸಿದರು. ಡೀನ್ ಡಾ.ಸುದರ್ಶನ್ ರಾವ್, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರೀನ ಕುಮಾರಿ, ಶ್ರೀಶದಾಸ ಪ್ರಾರ್ಥಿಸಿದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಲೊಲಿಟ ಪ್ರಿಯ ಕ್ಯಾಸ್ತಲಿನೊ ವಂದಿಸಿದರು. ಪ್ರಾಧ್ಯಾಪಕರಾದ ಸ್ನೇಹ ಜೋಸ್ವಿಟ ಡಿಸೋಜ, ರೆನಿಟ ಶರೋನ್ ಮೋನಿಸ್ ನಿರೂಪಿಸಿದರು.

    ಚಿನ್ನದ ಪದಕ ಪ್ರದಾನ: ಇದೇ ಸಂದರ್ಭದಲ್ಲಿ ಗಣಕಯಂತ್ರ ವಿಭಾಗದ ವಿದಿಶಾ ಪಿ. ಶೇಟ್, ಸಿವಿಲ್ ವಿಭಾಗದ ನಾಗಾರ್ಜುನ ಎಸ್.ಜಿ., ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ತೇಜಶ್ರೀ ಹಾಗೂ ಯಂತ್ರಶಿಲ್ಪ ವಿಭಾಗದ ದೀಪಕ್ ಆಚಾರ್ ಅವರಿಗೆ ಮಂಗಳೂರಿನ ಎಸ್.ಎಲ್.ಶೇಟ್ ಜ್ಯುವೆಲ್ಲರ್ಸ್‌ನ ಪ್ರಶಾಂತ್ ಶೇಟ್ ಮತ್ತು ಹೇಮಂತ್ ಶೇಟ್ ಅವರಿಂದ ಪ್ರಾಯೋಜಿತವಾದ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ಶ್ರೇಯಸ್ ಪ್ರಭು ಮತ್ತು ಕುಮಾರಿ ರುಷಾಲಿ ನಾಯಕ್ ಅವರಿಗೆ ಉತ್ತಮ ಶೈಕ್ಷಣಿಕ ಸಾಧನೆಗಾಗಿ ಶ್ರೀ ಮಧ್ವ ವಾದಿರಾಜ ಪ್ರಶಸ್ತಿಗಳನ್ನು ನೀಡಿ ಅಭಿನಂದಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts