ಮೂಲ್ಕಿ: ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆ, ಮೂಲ್ಕಿ ಪರಿಸರದಲ್ಲಿನ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡುತ್ತಾ ಬರುತ್ತಿರುವುದು ಅಭಿನಂದನೀಯ ಎಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಚಂದ್ರಶೇಖರ ನಾನಿಲ್ ಹೇಳಿದರು.
ಲೀಲಾವತಿ ಜಯ ಸುವರ್ಣ ತೆರೆದ ಸಭಾಂಗಣದಲ್ಲಿ ನಡೆದ ಮೂಲ್ಕಿ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಗಳ ಯು.ಕೆ.ಜಿ. ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆಯ ಪ್ರಾಥಮಿಕ ವಿಭಾಗದ ನಿವೃತ್ತ ಮುಖ್ಯ ಶಿಕ್ಷಕ ಪ್ರೊ.ಕೇಶವ ಎಚ್.ಮಾತನಾಡಿ, ವಿದ್ಯಾರ್ಥಿಗಳ ಬದುಕಿಗೆ ಶಿಕ್ಷಣ ಒಂದೇ ಪೂರಕವಲ್ಲ, ಶಿಕ್ಷಣೇತರ ವಿಚಾರಗಳು ಮಕ್ಕಳ ಬದುಕಿನಲ್ಲಿ ಬಹಳ ಪರಿಣಾಮ ಬೀರುತ್ತದೆ ಎಂದರು.
ಮುಖ್ಯ ಅತಿಥಿಗಳು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ, ಕಾರ್ಯದರ್ಶಿ ಬಾಲಚಂದ್ರ ಸನಿಲ್, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು, ಶ್ರೀ ನಾರಾಯಣ ಗುರು ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಶರತ್, ಆಡಳಿತ ಮಂಡಳಿ ಸದಸ್ಯರಾದ ಯೋಗೀಶ್ ಕೋಟ್ಯಾನ್, ಅವಿನಾಶ್ ಕೋಟ್ಯಾನ್, ಪ್ರಜ್ಞಾ ಎ.ಕೋಟ್ಯಾನ್, ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಮಂಜುಳಾ, ಪ್ರಾಂಶುಪಾಲ ಯತೀಶ್ ಅಮೀನ್, ಮುಖ್ಯ ಶಿಕ್ಷಕಿ ಗೀತಾ ಶೆಟ್ಟಿ, ಹಳೆ ವಿದ್ಯಾರ್ಥಿಗಳಾದ ಪ್ರತಿಕ್ಷ್ ಹಾಗೂ ವರುಣ್ ಉಪಸ್ಥಿತರಿದ್ದರು.
ಕಾರ್ಯದರ್ಶಿಗಳಾದ ಬಾಲಚಂದ್ರ ಸನಿಲ್ ಸ್ವಾಗತಿಸಿದರು. ಶಿಕ್ಷಕಿ ತೇಜಾಕ್ಷಿ ವಂದಿಸಿದರು. 7ನೇ ತರಗತಿ ವಿದ್ಯಾರ್ಥಿನಿಯರಾದ ವಂದಿತಾ ಹಾಗೂ ನಿರ್ವಿ ನಿರೂಪಿಸಿದರು. ಬಳಿಕ ಪ್ರಾಥಮಿಕ ಪ್ರೌಢ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸಂಯೋಜಿತ ಕಾರ್ಯತಂತ್ರದಿಂದ ಶಾಶ್ವತ ಪರಿಹಾರ : ಸುರತ್ಕಲ್‌ನ ಎನ್‌ಐಟಿಕೆಯ ನಿರ್ದೇಶಕ ಪ್ರೊ.ಬಿ.ರವಿ ಅನಿಸಿಕೆ