More

  ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಗ್ರಾಜುಯೇಷನ್ ಡೇ

  ವಿರಾಜಪೇಟೆ: ಇಲ್ಲಿನ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಶಾಲಾ ಮಕ್ಕಳ ಗ್ರಾಜುಯೇಷನ್ ಡೇ ಹಾಗೂ ಸಾಧಕ ಮಕ್ಕಳಿಗೆ ಸನ್ಮಾನ ಸಮಾರಂಭ ಇತ್ತೀಚೆಗೆ ನಡೆಯಿತು.

  ಅಕಾಡೆಮಿ ಮುಖ್ಯಸ್ಥೆ ಪೂಜಾ ರವೀಂದ್ರ ಮಾತನಾಡಿ, ನಮ್ಮ ವಿದ್ಯಾಸಂಸ್ಥೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಸಂಸ್ಥೆಯಿಂದ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಆಧುನಿಕ ತಂತ್ರಾಂಶದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.
  ವಿರಾಜಪೇಟೆ ತಹಸೀಲ್ದಾರ್ ಎಚ್.ಎನ್.ರಾಮಚಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ನೃತ್ಯ ಸ್ಪರ್ಧೆ ಹಾಗೂ ಭರತನಾಟ್ಯದಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳಾದ ಆದ್ಯಾ, ವಿಹಾ ಮುತ್ತಮ್ಮ, ಇಂಟೊಪಿಸ್ ಶಾಲೆಯ ನೃತ್ಯ ಶಿಕ್ಷಕರಾದ ವಿಷ್ಣು, ಮದನ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾಸಂಸ್ಥೆ ಕಾರ್ಯದರ್ಶಿ ಪ್ರತಿಮಾ ರಂಜನ್, ವ್ಯವಸ್ಥಾಪಕ ಪ್ರಜೇಶ್, ಮುಖ್ಯ ಶಿಕ್ಷಕಿ ಮೀರಾ ಪೂಣಚ್ಚ ಉಪಸ್ಥಿತರಿದ್ದರು. ತಹಸೀಲ್ದಾರ್ ರಾಮಚಂದ್ರ ಅವರು ಮಕ್ಕಳಿಗೆ ನೆನಪಿನ ಕಾಣಿಕೆ ವಿತರಿಸಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts