More

    VIDEO| ಜೆಎನ್ ಯು ಕ್ಯಾಂಪಸ್‍ನ ಗೋಡೆಗಳ ಮೇಲೆ ವಿವಾದಾತ್ಮಕ ಬರಹ

    ನವದೆಹಲಿ: ದೇಶದ ಪ್ರತಿಷ್ಠಿತ ಯೂನಿವರ್ಸಿಟಿಗಳಲ್ಲಿ ಒಂದಾದ ಜವಾಹರ್​ಲಾಲ್​ ನೆಹರೂ ವಿಶ್ವವಿದ್ಯಾಲಯ ಒಂದಿಲ್ಲೊಂದು ವಿಚಾರಕ್ಕೆ ದೇಶದ ಜನರ ಗಮನ ಸೆಳೆಯುತ್ತಿರುತ್ತದೆ. ಇದೀಗ ಘಟನೆ ಒಂದರಲ್ಲಿ ಕೆಲವು ಕಿಡಿಗೇಡಿಗಳು ಕ್ಯಾಂಪಸ್​ನ ಆವರಣದಲ್ಲಿ ಪ್ರಚೋದನಕಾರಿ ಗೋಡೆ ಬರಹಗಳನ್ನು ಬರೆದು ವಿಕೃತಿ ಮೆರೆದಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ವೈರಲ್​ ಆಗಿದ್ದು, ಭಾಗವ ಜಲೇಗಾ (ಕೇಸರಿ ಉರಿಯುತ್ತದೆ), ಫ್ರೀ ಕಾಶ್ಮೀರ, ನಿಮ್ಮ ಗುಂಡಿಯನ್ನು ತೋಡಲಾಗಿದೆ ಎಂದು ಪ್ರಚೋದನಕಾರಿ ಬರಹಗಳನ್ನು ಗೋಡೆಗಳ ಮೇಲೆ ಗೀಚಲಾಗಿದೆ.

    ಇದನ್ನೂ ಓದಿ: ಏಷ್ಯನ್​ ಗೇಮ್ಸ್; ಟ್ರ್ಯಾಪ್​ ಶೂಟಿಂಗ್ ಪುರುಷರ ವಿಭಾಗದಲ್ಲಿ ಚಿನ್ನ ಗೆದ್ದ ಭಾರತ

    ಘಟನೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. 2022ರಲ್ಲೂ ಬ್ರಾಹ್ಮಣ ವಿರೋಧಿ ಹೇಳಿಕೆಗಳನ್ನು ಕ್ಯಾಂಪಸ್​ನ ಆವರಣದಲ್ಲಿರುವ ಗೋಡೆಗಳ ಮೇಲೆ ಬರೆಯಲಾಗಿತ್ತು. ವ್ಯಾಪಕ ಆಕ್ರೋಶ ಹಾಗೂ ಪ್ರತಿಭಟನೆಗಳು ನಡೆದ ಬೆನ್ನಲ್ಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು.

    ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ತಪ್ಪಿತಸ್ಥರ ವಿರುದ್ಧ ನೆಟ್ಟಿಗರು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪದೇ ಪದೇ ಈ ರೀತಿ ಆಕ್ಷೇಪಾರ್ಹಾ ಗೋಡೆ ಬರಹಗಳ ಮೂಲಕ ಹಿಂದೂಗಳ ಭಾವನೆಗೆ ಯಾಕೆ ಧಕ್ಕೆ ಉಂಟು ಮಾಡಲಾಗುತ್ತಿದೆ ಎಂದು ಹಲವರು ಕಿಡಿಕಾರಿದ್ದಾರೆ. ಇತ್ತೀಚಿಗೆ ನಡೆದ ಚುನಾವಣೆಯ ಬಳಿಕ ಈ ಘಟನೆ ನಡೆದಿದ್ದು, ಸೋಲಿನ ಹತಾಶೆಯಿಂದ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts