More

    ಖರೀದಿಸಿದ ವಸ್ತುಗಳಿಗೆ ಕಡ್ಡಾಯವಾಗಿ ರಸೀದಿ ಪಡೆಯಿರಿ

    ಹಾವೇರಿ: ಗ್ರಾಹಕರು ಖರೀದಿಸಿದ ಪ್ರತಿ ವಸ್ತುಗಳಿಗೆ ಕಡ್ಡಾಯವಾಗಿ ರಸೀದಿ ಪಡೆಯಬೇಕು. ಖರೀದಿಸಿದ ವಸ್ತುಗಳಲ್ಲಿ ನ್ಯೂನ್ಯತೆ ಕಂಡುಬಂದಲ್ಲಿ ಗ್ರಾಹಕರ ವ್ಯಾಜ್ಯಗಳ ಆಯೋಗದಲ್ಲಿ ದೂರು ದಾಖಲಿಸುವ ಮೂಲಕ ಪರಿಹಾರ ಪಡೆದುಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಸಲಹೆ ನೀಡಿದರು.
    ನಗರದ ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್‌ನಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
    ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಈಶ್ವರಪ್ಪ ಬಿ.ಎಸ್. ಮಾತನಾಡಿ, ಜಗತ್ತಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಖರೀದಿದಾರರಾಗಿದ್ದಾರೆ. ವಿದ್ಯಾರ್ಥಿಗಳು ಹಾಗೂ ಮಕ್ಕಳನ್ನು ಕೇಂದ್ರಿಕರಿಸಿ ಜಾಹೀರಾತುಗಳನ್ನು ಮಾಡಲಾಗುತ್ತದೆ. ಹಾಗಾಗಿ, ವಿದ್ಯಾರ್ಥಿಗಳಿಗೆ ಗ್ರಾಹಕ ಹಕ್ಕು ಹಾಗೂ ಕರ್ತವ್ಯಗಳ ಕುರಿತು ಜಾಗೃತಿ ಮೂಡಿಸುವುದು ಅತ್ಯವಶ್ಯವಾಗಿದೆ ಎಂದರು.
    ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಡಾ.ನಾಗರಾಜ ಎಲ್. ಪ್ರಾಸ್ತಾವಿಕವಾಗಿ ಮಾತನಾಡಿದರು.
    ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಪಿ.ಸಿ.ಬಣಕಾರ, ಕಾರ್ಯದರ್ಶಿ ಈಶ್ವರ ನಂದಿ, ಜಿಲ್ಲಾ ನ್ಯಾಯಾಲಯ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಪ್ರಕಾಶ ಸುಂಕದ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಉಮಾದೇವಿ ಎಸ್.ಹಿರೇಮಠ, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿರ್ದೇಶಕ ಡಿ.ಆರ್.ಚೌಗಲಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್, ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಬಿ.ಬಿ.ಎಸ್.ಕುಮಾರ, ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts