ತುಮಕೂರು: ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರು, ಚರಂಡಿ, ಅಂಗನವಾಡಿ, ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲು ಪ್ರಧಾನಿ ಮೋದಿ ಸರ್ಕಾರ ಬದ್ಧವಾಗಿದೆ. ಇದೇ ಪ್ರೇರಣೆಯಿಂದ ತಾವು ತುಮಕೂರು ನಗರ ಸುತ್ತಲಿನ ಐದು ಗ್ರಾಮ ಪಂಚಾಯಿತಿಗಳನ್ನು ದತ್ತು ಪಡೆದಿದ್ದು, ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಬೆಳಗುಂಬ, ಸ್ವಾಂದೇನಹಳ್ಳಿ, ಗೂಳೂರು, ಹೆಗ್ಗೆರೆ, ಹೆತ್ತೇನಹಳ್ಳಿ ಗ್ರಾಪಂಗಳನ್ನು ದತ್ತು ಪಡೆದಿರುವುದಾಗಿ ಸಚಿವ ವಿ.ಸೋಮಣ್ಣ ಪ್ರಕಟಿಸಿದರು.
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಸಾರಿ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವಂತೆ ಪ್ರಧಾನಿ ಮೋದಿ ಮಾಡಿದ್ದಾರೆ. ಮೋದಿ ಜನ್ಮದಿನದ ಅಂಗವಾಗಿ, ನಗರದಲ್ಲಿ ಸ್ವಚ್ಛತೆ, ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ತಪಾಸಣೆ ಸೇರಿ ವಿವಿಧ ಸೇವಾ ಕಾರ್ಯಕ್ರಗಳನ್ನು ಹಮ್ಮಿಕೊಳ್ಳಲಾಗಿದೆ. ಅವರ ಆಯಸ್ಸು ಇನ್ನಷ್ಟು ಗಟ್ಟಿಯಾಗಬೇಕೆಂಬುದು ನಮ್ಮೆಲ್ಲರ ಪ್ರಾರ್ಥನೆ.
ಜಿ.ಬಿ.ಜ್ಯೋತಿಗಣೇಶ್
ನಗರ ಶಾಸಕ