More

    ಗ್ರಾ.ಪಂ. ಚುನಾವಣೆ ಮುಂದೂಡಿದ್ದಕ್ಕೆ ಆಯೋಗ, ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

    ಬೆಂಗಳೂರು: ಕರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಅನಿರ್ದಿಷ್ಟ ಅವಧಿಗೆ ಮುಂದೂಡಿದ್ದು, ಆಯೋಗದ ಕ್ರಮ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

    ಇದನ್ನೂ ಓದಿ: ಬಿಎಸ್‌ವೈ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್ ನೇಮಕ ಸಾಧ್ಯತೆ

    ಟ್ವೀಟ್​ ಮೂಲಕ ಆಕ್ರೋಶ ಹೊರಹಾಕಿರುವ ಸಿದ್ದರಾಮಯ್ಯ, ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ‌ ಮುಂದೂಡಿರುವುದು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993ಕ್ಕೆ ಬಗೆದ ಅಪಚಾರ. ಈ ಪ್ರಜಾಪ್ರಭುತ್ವ ವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ನ್ಯಾಯಾಲಯದಲ್ಲಿ‌ ಪ್ರಶ್ನಿಸಲಿದೆ ಎಂದಿದ್ದಾರೆ.

    ಚುನಾವಣೆಯನ್ನು ಮುಂದೂಡುವ ಮೂಲಕ ರಾಜ್ಯ ಚುನಾವಣಾ ಆಯೋಗ ಆಡಾಳಿತರೂಢ ಬಿಜೆಪಿ ಹಾಕಿದ ತಾಳಕ್ಕೆ ತಕ್ಕ ಹಾಗೆ ಕುಣಿದಿದೆ. ಇದೊಂದು ಕೆಟ್ಟ ಸಂಪ್ರದಾಯ. ರಾಜ್ಯ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ. ಚುನಾವಣೆ ಎದುರಿಸಲಾಗದ ಪುಕ್ಕಲು ಸರ್ಕಾರ ನಾಮನಿರ್ದೇಶನದ ಸದಸ್ಯರ ಮೂಲಕ ಅಡ್ಡಮಾರ್ಗದಲ್ಲಿ ಗ್ರಾಮಪಂಚಾಯಿತಿ ಮೇಲೆ ಸ್ವಾಮ್ಯ ಸ್ಥಾಪಿಸಲು ಹೊರಟಿರುವುದು ನಾಚಿಕೆಗೇಡಿನ ನಡವಳಿಕೆ ಎಂದು ಟೀಕಿಸಿದ್ದಾರೆ.

    ಇದನ್ನೂ ಓದಿ: ಪೊಲೀಸರ ಶ್ರಮದ ದುಡ್ಡು ದೋಚಿದ ಸಿಬ್ಬಂದಿ!

    ಚುನಾವಣೆ ಮುಂದೂಡಿಕೆ ನಮಗೆ ಅನಿರೀಕ್ಷಿತವೇನಲ್ಲ. ಇಂತಹದ್ದೊಂದು ಅನುಮಾನದಿಂದಲೇ ನಾವು ಚುನಾವಣಾ ಆಯುಕ್ತರನ್ನು ಭೇಟಿಯಾಗಿ ಮನವಿ ಮಾಡಿದ್ದೆವು. ನಮ್ಮ ಅನುಮಾನ‌ ಈಗ ನಿಜವಾಗಿದೆ. ಇದರ ವಿರುದ್ಧ ಗ್ರಾಮಪಂಚಾಯಿತಿ ಮಟ್ಟದಲ್ಲಿಯೇ ಕಾಂಗ್ರೆಸ್​ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಕರ್ನಾಟಕ ಪಂಚಾಯತ್ ಕಾಯ್ದೆಯ ಸೆಕ್ಷನ್ 8ರ ಪ್ರಕಾರ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ ಆಡಳಿತ ಸಮಿತಿ ರಚಿಸುವಂತಿಲ್ಲ. ಈ ಅಕ್ರಮವನ್ನು ನ್ಯಾಯಾಲಯದ ಗಮನಕ್ಕೆ ತರುತ್ತೇವೆ. ಅಲ್ಲಿ ನ್ಯಾಯ ಸಿಗುವ ಸಂಪೂರ್ಣ ಭರವಸೆ ನಮಗಿದೆ ಎಂದು ತಿಳಿಸಿದ್ದಾರೆ.

    ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿದ ಆಯೋಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts