ಶಿವಮೊಗ್ಗ: ಅವಧಿ ಅಂತ್ಯಗೊಳ್ಳಲಿರುವ ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಯುತ್ತದೆಯೋ ಅಥವಾ ಅವುಗಳಿಗೆ ಆಡಳಿತ ಸಮಿತಿಗಳನ್ನು ಸರ್ಕಾರ ರಚನೆ ಮಾಡುತ್ತದೆಯೋ ಎಂಬುದು ಈಗ ಯಕ್ಷಪ್ರಶ್ನೆಯಾಗಿದೆ.
ಇದನ್ನೂ ಓದಿ: ಮದುವೆಯಾಗಲು ಒಲ್ಲೆ ಎಂದವಳಿಗೆ ನಡುರಸ್ತೆಯಲ್ಲಿ ಮಚ್ಚಿನಿಂದ ಹೊಡೆದ ಸೈಕೋ ಪ್ರೇಮಿ…
ಈ ಕುರಿತು ಇಲ್ಲಿ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಚುನಾವಣೆ ನಡೆಸುವುದು ಬಿಡುವುದು ಜಿಲ್ಲಾಧಿಕಾರಿಗಳು ಸಲ್ಲಿಸಲಿರುವ ವರದಿಯನ್ನು ಅವಲಂಬಿಸಿದೆ ಎಂದು ಸ್ಪಷ್ಟಪಡಿಸಿದರು.
ಅವಧಿ ಮುಕ್ತಾಯವಾಗುವ ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸುವ ಸಂಬಂಧ ಚುನಾವಣಾ ಆಯೋಗ ಎಲ್ಲ ಜಿಲ್ಲಾಧಿಕಾರಿಗಳ ಅಭಿಪ್ರಾಯ ಕೇಳಿದೆ. ಅವರು ನೀಡುವ ಅಭಿಪ್ರಾಯದ ಮೇಲೆ ಆಯೋಗ ತೀರ್ಮಾನ ಕೈಗೊಳ್ಳಲಿದೆ. ಒಂದು ವೇಳೆ ಚುನಾವಣೆ ನಡೆಸಲು ಆಯೋಗ ತೀರ್ಮಾನಿಸಿದರೆ ಸರ್ಕಾರ ಅದಕ್ಕೆ ಸಿದ್ಧವಿದೆ ಎಂದು ತಿಳಿಸಿದರು.
ಇದನ್ನೂ ಓದಿ: VIDEO| ಟಿಕ್ಟಾಕ್ನಲ್ಲೂ ಭರ್ಜರಿ ಮನರಂಜನೆ ನೀಡ್ತಿದ್ರು ಮೆಬಿನಾ
ತಾವು ಅಧಿಕಾರದಲ್ಲಿದ್ದಾಗ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸಿದ ಕಾಂಗ್ರೆಸ್ ಮುಖಂಡರು, ಬಿಜೆಪಿ ಸರ್ಕಾರದ ವಿರುದ್ದ ಟೀಕೆ ಮಾಡುತ್ತಿದ್ದಾರೆ. ಗ್ರಾಪಂ ಆಡಳಿತ ಸಮಿತಿ ನಾಮಕರಣದಲ್ಲಿ ಸರ್ಕಾರದ ಪಾತ್ರವೇನೂ ಇಲ್ಲ. ಆಯಾ ಜಿಲ್ಲಾಧಿಕಾರಿಗಳೇ ಸಮಿತಿ ರಚನೆ ಮಾಡುತ್ತಾರೆ. ಇಷ್ಟಕ್ಕೂ ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದರು.