More

    ಗ್ರಾಪಂ ಚುನಾವಣೆ ದ್ವೇಷಕ್ಕೆ ರಾತ್ರೋರಾತ್ರಿ ಬಲಿಯಾಯ್ತು ಲಕ್ಷಾಂತರ ರೂ. ಮೌಲ್ಯದ ಮೆಣಸಿನಕಾಯಿ!

    ರಾಯಚೂರು: ಕೊಯ್ಲಿಗೆ ಬಂದಿದ್ದ ಬ್ಯಾಡಗಿ ಮೆಣಸಿನಕಾಯಿಯನ್ನು ರಾಜಕೀಯ ದ್ವೇಷದ ಹಿನ್ನೆಲೆ ಜಮೀನಿನಲ್ಲೇ ಕಿಡಿಗೇಡಿಗಳು ನಾಶ ಮಾಡಿದ್ದಾರೆ.

    ದೇವದುರ್ಗ ತಾಲೂಕಿನ ಹೊನ್ನಕಾಟಮಳ್ಳಿ ಗ್ರಾಮದಲ್ಲಿ ರೈತ ಕಾಸಿಂಸಾಬ್ ಪಿಲಿಗುಂದ ಎಂಬುವವರು ಎರಡು ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆದಿದ್ದರು. ಮೆಣಸಿನಕಾಯಿಗೆ ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ದರ ಇದೆ. ಲಾಭದ ನಿರೀಕ್ಷೆಯಲ್ಲಿ ರಾತ್ರಿ ಮಲಗಿದ್ದ ರೈತ ಬೆಳಗ್ಗೆ ಎದ್ದೇಳುವಷ್ಟರಲ್ಲಿ ಬೆಳೆ ನೆಲಸಮವಾಗಿತ್ತು! ಇಷ್ಟೆಲ್ಲ ಅವಾಂತರಕ್ಕೆ ಕಾರಣ ಗ್ರಾಪಂ ಚುನಾವಣೆ. ಇದನ್ನೂ ಓದಿರಿ ಗ್ರಾಪಂ ಚುನಾವಣೆಯಲ್ಲಿ ಗೆದ್ದವರನ್ನು ನಮ್ಮ ಪಕ್ಷದ ಬೆಂಬಲಿತರು ಎಂದು ಹೇಳಿದ್ರೆ ಬೀಳುತ್ತೆ ಕೇಸ್​!

    ಕಾಸಿಂಸಾಬ್ ಅವರ ಮಾವ ಬಾಬು ಸೈಯದ್ ಖಾನ್ ಎಂಬುವವರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಮಾವನ ಪರ ಖಾಸಿಂಸಾಬ್ ಚುನಾವಣೆ ಪ್ರಚಾರ ನಡೆಸಿದ್ದರು. ಬುಧವಾರ ಫಲಿತಾಂಶ ಪ್ರಕಟವಾಗಿದ್ದು, ಚುನಾವಣೆಯಲ್ಲಿ ಬಾಬು ಸೈಯದ್ ಖಾನ್ ಗೆಲುವು ಸಾಧಿಸಿದ್ದಾರೆ. ಇದಾದ ಮರುದಿನವೇ ಅಂದರೆ ಗುರುವಾರ ರಾತ್ರಿ ದುಷ್ಕರ್ಮಿಗಳು ಮೆಣಸಿನಕಾಯಿ ಬೆಳೆ ನಾಶ ಮಾಡಿದ್ದಾರೆ. ಇದನ್ನೂ ಓದಿರಿ ಗ್ರಾಪಂ ಚುನಾವಣೆ ಸೋಲಿಂದ ಕಂಗೆಟ್ಟವ ರಾತ್ರೋರಾತ್ರಿ ರಸ್ತೆಯನ್ನೇ ಬಂದ್​ ಮಾಡಿದ!

    5 ಲಕ್ಷ ರೂ. ವೆಚ್ಚದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆದಿದ್ದೆ. ರಾಜಕೀಯ ದ್ವೇಷಕ್ಕೆ ಕಿಡಿಗೇಡಿಗಳು ಬೆಳೆಯನ್ನು ನಾಶ ಮಾಡಿದ್ದು, ಸುಮಾರು 12 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಸಂತ್ರಸ್ತ ರೈತ ಅಳಲು ತೋಡಿಕೊಂಡಿದ್ದಾರೆ.

    ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳೆ ನಾಶವಾದ ಸ್ಥಳಕ್ಕೆ ಪೊಲೀಸರು ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?

    ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

    ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts