

ಗಂಗೊಳ್ಳಿ: ಗುಜ್ಜಾಡಿ ಗ್ರಾಪಂನ ಪ್ರಥಮ ಸುತ್ತಿನ ಗ್ರಾಮಸಭೆ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಗ್ರಾಪಂ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಇಂಜಿನಿಯರ್ ರವಿಶಂಕರ್ ಮಾರ್ಗದರ್ಶಿ ಅಧಿಕಾರಿಗಳಾಗಿ ಪಾಲ್ಗೊಂಡಿದ್ದರು. ಗ್ರಾಮದ ರಸ್ತೆಗಳ ಕುರಿತು, ನರೇಗಾ ಕಾಮಗಾರಿ, ಮಳೆ ಹಾನಿ, ಕಡಲ್ಕೊರೆತ ಇನ್ನಿತರ ವಿಚಾರ ಕುರಿತಂತೆ ಗ್ರಾಮಸ್ಥರು ಪ್ರಸ್ತಾಪಿಸಿದರು. ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಿಂದ ಸಿಗುವ ಸವಲತ್ತುಗಳ ಕುರಿತಂತೆ ಮಾಹಿತಿ ನೀಡಿದರು.
ಗ್ರಾಪಂ ಉಪಾಧ್ಯಕ್ಷೆ ನಾಗರತ್ನ ಖಾರ್ವಿ, ಗ್ರಾಪಂ ಸದಸ್ಯರು, ಶಿಶು ಅಭಿವೃದ್ಧಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ಮೀನುಗಾರಿಕೆ ಇಲಾಖೆ, ಕೆಸಿಡಿಸಿ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.
ಗ್ರಾಪಂ ಕಾರ್ಯದರ್ಶಿ ಶಕುಂತಲಾ ಸ್ವಾಗತಿಸಿದರು. ಅಭಿವೃದ್ಧಿ ಅಧಿಕಾರಿ ಶೋಭಾ ಮಾಹಿತಿ ನೀಡಿದರು.