ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಂದವ ಪಂಚಾಯಿತಿ ಆವರಣದಲ್ಲೇ ಸಾವು!

death
Published on

ಬಾಗಲಕೋಟೆ: ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಂದ ಅಭ್ಯರ್ಥಿಗೆ ಪಂಚಾಯಿತಿ ಆವರಣದಲ್ಲೇ ಹೃದಯಾಘಾತವಾಗಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಇಳಕಲ್ ತಾಲೂಕಿನಲ್ಲಿ ಬುಧವಾರ ಸಂಭವಿಸಿದೆ.

ಯಮನಪ್ಪ ದೋಟಿಹಾಳ(36) ಮೃತ ದುರ್ದೈವಿ. ಇವರು ಗ್ರಾಮದ ವಾರ್ಡ್ ನಂಬರ್ 2ರಿಂದ ಕಂದಗಲ್ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಪಂಚಾಯಿತಿ ಆವರಣಕ್ಕೆ ಬರುತ್ತಿದ್ದಂತೆ ಹೃದಯಾಘಾತವಾಗಿದೆ.

ಗ್ರಾಮದ ಅಭಿವೃದ್ಧಿಗೆ ನೂರಾರು ಕನಸು ಕಟ್ಟಿದ್ದ ಯಮನಪ್ಪ ದೋಟಿಹಾಳ, ಹಳ್ಳಿ ರಾಜಕಾರಣಕ್ಕೆ ಎಂಟ್ರಿ ಕೊಡಲು ಎಲ್ಲ ಸಿದ್ಧತೆಯನ್ನೂ ಮಾಡಿಕೊಂಡಿದ್ದರು. ಅದರಂತೆ ಎರಡನೇ ಹಂತದ ಗ್ರಾಪಂ ಚುನಾವಣೆಗೆ ಸ್ಪರ್ಧಿಸಲು ಬಂದಿದ್ದರು. ಆದರೆ ವಿಧಿಯಾಟ ಬೇರೆಯೇ ಆಗಿತ್ತು. ನಾಮಪತ್ರ ಸಲ್ಲಿಸುವ ಮುನ್ನವೇ ಅವರ ಪ್ರಾಣವನ್ನ ಜವರಾಯ ಹೊತ್ತೊಯ್ದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net