

ಚಾಮರಾಜನಗರ: ಹಳ್ಳಿ ರಾಜಕಾರಣಕ್ಕೂ ರೆಸಾರ್ಟ್ ಪಾಲಿಟಿಕ್ಸ್ ಕಾಲಿಟ್ಟಿದೆ. ಇದೀಗ ಗ್ರಾಮ ಪಂಚಾಯಿತಿ ಅಧಿಕಾರ ಹಂಚಿಕೆಗೂ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ನಡೆದಿದೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಣ್ಣೂರು ಗ್ರಾಪಂ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಸದಸ್ಯರ ನಡುವೆ ಒಪ್ಪಂದ ಆಗಿದೆ. ನುಡಿದಂತೆ ನಡೆಯುತ್ತೇವೆ. ನುಡಿದಂತೆ ನಡೆಯದಿದ್ದರೆ ಮನೆ ಹಾಳಾಗುತ್ತೆ ಎಂದು ಧರ್ಮಸ್ಥಳದಲ್ಲಿ ಕರ್ಪೂರ ಹಚ್ಚಿ ಆಣೆ-ಪ್ರಮಾಣ ಮಾಡಿರುವ ದೃಶ್ಯ ವೈರಲ್ ಆಗಿದೆ. ಇದನ್ನೂ ಓದಿರಿ ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕುಮಾರಸ್ವಾಮಿ!
ಈ ಹಿಂದೆ ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ 20:20 ಸರ್ಕಾರದ ಅವಧಿಯಲ್ಲಿ ಉಂಟಾಗಿದ್ದ ಘಟನೆ ಮರುಕಳಿಸಬಾರದೆಂದು ಇಲ್ಲಿನ ಗ್ರಾಪಂ ಸದಸ್ಯರು ಶ್ರೀ ಮಂಜುನಾಥ ಸ್ವಾಮಿಯ ಮೊರೆ ಹೋಗಿದ್ದಾರೆ.