More

    ಗ್ರಾಪಂ ಚುನಾವಣೆ ಘೋಷಣೆ ; ಡಿ.22, 27ರಂದು ಎರಡು ಹಂತದಲ್ಲಿ ಚುನಾವಣೆ

    ಬೆಂಗಳೂರು ಗ್ರಾಮಾಂತರ : ಜಿಲ್ಲೆಯ 102 ಗ್ರಾಮ ಪಂಚಾಯಿತಿಗಳ ಪೈಕಿ ಅವಧಿ ಪೂರ್ಣಗೊಳ್ಳದಿರುವ 9 ಗ್ರಾಪಂ ಹೊರತುಪಡಿಸಿ 93 ಪಂಚಾಯಿತಿಗಳಿಗೆ ಚುನಾವಣಾ ವೇಳಾ ಪಟ್ಟಿ ಪ್ರಕಟವಾಗಿದ್ದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

    ನ. 30 ರಿಂದ ಡಿ.31ರ ಸಂಜೆ 5 ಗಂಟೆಯವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಪಪಂ, ಪುರಸಭೆ, ನಗರಸಭೆ, ನಗರ ಪಾಲಿಕೆ, ಮಹಾನಗರ ಪಾಲಿಕೆ ಪ್ರದೇಶಗಳಿಗೆ ನೀತಿ ಸಂಹಿತೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

    ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಹೊಸಕೋಟೆ ತಾಲೂಕಿನ 26 ಗ್ರಾಪಂ ಹಾಗೂ ನೆಲಮಂಗಲ 21 ಪಂಚಾಯಿತಿಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಡಿ.7ರಂದು ಅಧಿಸೂಚನೆ ಹೊರಡಲಿದ್ದು, ಡಿ.11 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 12 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 14 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೇ ದಿನವಾಗಿದೆ. ಡಿ.22 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯವಿದ್ದಲ್ಲಿ ಡಿ.24 ರಂದು ನಡೆಯಲಿದೆ. ಡಿ.30 ರಂದು ಬೆಳಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಡಿ.31 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.

    2ನೇ ಹಂತದಲ್ಲಿ ದೇವನಹಳ್ಳಿ, ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲೂಕಿನ 26 ಗ್ರಾಪಂ, ದೇವನಹಳ್ಳಿ ತಾಲೂಕಿನ 20 ಪಂಚಾಯಿತಿಗಳಲ್ಲಿ ಎರಡನೇ ಹಂತದ ಚುನಾವಣೆ 27ರಂದ ನಡೆಯಲಿದೆ. ಡಿ.11ರಂದು ಚುನಾವಣಾ ಅಧಿಸೂಚನೆ ಹೊರಡಿಸುವ ದಿನವಾಗಿದ್ದು, ಡಿ.16 ರಂದು ನಾಮಪತ್ರ ಸಲ್ಲಿಸಲು ಕೊನೇ ದಿನವಾಗಿದೆ. ಡಿ.17 ರಂದು ನಾಮಪತ್ರ ಪರಿಶೀಲನೆ, 19ರಂದು ಉಮೇದುವಾರಿಕೆ ಹಿಂಪಡೆಯಲು ಕಡೇ ದಿನವಾಗಿದೆ. 27ರಂದು ಮತದಾನ ನಡೆಯಲಿದೆ. ಮರು ಮತದಾನ ಅಗತ್ಯವಿದ್ದಲ್ಲಿ ಡಿ.29 ರಂದು ನಡೆಯಲಿದೆ. ಡಿ.30 ರಂದು ಬೆಳಗ್ಗೆ 8ರಿಂದ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಡಿ.31 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.

    ಜಿಲ್ಲೆಯಲ್ಲಿ 799 ಮೂಲ ಮತಗಟ್ಟೆಗಳಿದ್ದು, 87 ಆಕ್ಸಿಲರಿ ಮತಗಟ್ಟೆ ಸೇರಿ ಒಟ್ಟು 886 ಮತಗಟ್ಟೆಗಳಿವೆ. 2,61,776 ಪುರುಷ ಮತದಾರರು, 2,58,831 ಮಹಿಳಾ ಮತದಾರರು ಹಾಗೂ ಇತರ ವರ್ಗಕ್ಕೆ ಸೇರಿದ 42 ಮತದಾರರು ಇದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts