More

  ಗ್ರಾಪಂ ಹಣ ದುರುಪಯೋಗ ಮಾಡಿದ ಆರೋಪ: 15 ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಪಂಚಾಯತ್ ರಾಜ್ ಇಲಾಖೆ

  ರಾಯಚೂರು: ಗ್ರಾಮ ಪಂಚಾಯಿತಿಗೆ ಸೇರಿದ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ 15 ಜನ ಸದಸ್ಯರ ಸದಸ್ಯತ್ವವನ್ನ ರಾಜ್ಯ ಸರ್ಕಾರ ರದ್ದುಗೊಳಿಸಿದೆ.

  ರಾಯಚೂರು ತಾಲೂಕಿನ ಎಲೆ ಬಿಚ್ಚಾಲಿ ಗ್ರಾ. ಪಂ ಸದಸ್ಯರ ಸದಸ್ಯತ್ವವನ್ನು ರದ್ದುಪಡಿಸಿ ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. 14ನೇ ಹಣಕಾಸು ಯೋಜನೆ ಅನುದಾನ ಹಣವನ್ನು ವೈಯಕ್ತಿಕವಾಗಿ ಬಳಕೆ ಮಾಡಿಕೊಂಡ ಆರೋಪದ ಮೇಲೆ ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷೆ ಸೇರಿ ಒಟ್ಟು 15 ಜನ ಸದಸ್ಯರ ಸದಸ್ಯತ್ವ ರದ್ದುಗೊಳಿಸುವ ಮೂಲಕ ಆದೇಶ ಹೊರಡಿಸಲಾಗಿದೆ.

  2016-2017ನೇ ಸಾಲಿನಲ್ಲಿ 14ನೇ ಹಣಕಾಸು ಯೋಜನೆಯಡಿ ಅನುದಾನದ ಚೆಕ್​ಗಳನ್ನು ಸದಸ್ಯರು ತಮ್ಮ ಪತಿ, ಮಾವನ ಹೆಸರಲ್ಲಿ ವೈಯಕ್ತಿಕವಾಗಿ ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.

  ಈ ಬಗ್ಗೆ ತನಿಖೆ ನಡೆಸಿ ಆರೋಪ‌ ಸಾಬೀತು ಹಿನ್ನೆಲೆ ಸಿಇಒ ಲಕ್ಷ್ಮೀಕಾಂತರಡ್ಡಿ ಡಿ.14ರಂದು ವರದಿಯನ್ನ ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಿದ್ದಾರೆ.
  ಈ ವರದಿ ಆಧರಿಸಿ ಪ್ರಾದೇಶಿಕ ಆಯುಕ್ತರು 15 ಜನರ ಸದಸ್ಯತ್ವ ರದ್ದುಗೊಳಿಸು ವಂತೆ ಸರಕಾರಕ್ಕೆ ಶಿಫಾರಸು ಮಾಡಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts