18.1 C
Bangalore
Saturday, December 7, 2019

ಸಂಬಳ 3 ತಿಂಗಳಿಗೊಮ್ಮೆ!

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಅವಿನ್ ಶೆಟ್ಟಿ, ಉಡುಪಿ

ಮಾಸಿಕ ವೇತನ ಸಿಗಬೇಕಿದ್ದರೆ ಕನಿಷ್ಠ ಮೂರು ತಿಂಗಳಾದರೂ ಕಾಯಬೇಕು.
– ಇದು ದ.ಕ. ಹಾಗೂ ಉಡುಪಿ ಗ್ರಾಮ ಪಂಚಾಯಿತಿ ನೌಕರರ ಸ್ಥಿತಿ.
ಸಾರ್ವಜನಿಕ ಹಣಕಾಸು ನಿರ್ವಹಣಾ ವ್ಯವಸ್ಥೆ (ಪಿಎಫ್‌ಎಂಎಸ್) ಮೂಲಕ ನೇರವಾಗಿ ಖಾತೆಗೆ ವೇತನ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ, ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡದಿರುವ ಕಾರಣ, ಕ್ಲಪ್ತ ಸಮಯಕ್ಕೆ ವೇತನ ಸಿಗುತ್ತಿಲ್ಲ. ಹೀಗಾಗಿ, ಬಹುತೇಕ ಪಂಚಾಯಿತಿಗಳಲ್ಲಿ ನೌಕರರು ಆರ್ಥಿಕ ಸಂಕಷ್ಟದಲ್ಲೇ ದಿನ ಕಳೆಯುವಂತಾಗಿದೆ.

ಈ ಹಿಂದೆ, ಅಭಿವೃದ್ಧಿ ಕೆಲಸಗಳಿಗಾಗಿ ಗ್ರಾ.ಪಂ.ಗಳಿಗೆ ಸರ್ಕಾರ ವಾರ್ಷಿಕವಾಗಿ 4 ಕಂತುಗಳಲ್ಲಿ 10 ಲಕ್ಷ ರೂ.ಅನುದಾನ ನೀಡುತ್ತಿತ್ತು. ಬಳಿಕ ಇದನ್ನು 4 ಲಕ್ಷ ಸಿಬ್ಬಂದಿ ವೇತನಕ್ಕೆ, 6 ಲಕ್ಷ ರೂ, ವಿದ್ಯುತ್ ಬಿಲ್ ಪಾವತಿಗೆಂದು ವಿಭಜಿಸಲಾಯಿತು. ಜತೆಗೆ, ಗ್ರಾ.ಪಂ.ತೆರಿಗೆಯಲ್ಲಿ ಶೇ.40ಅನ್ನು ಸಿಬ್ಬಂದಿ ವೇತನಕ್ಕೆ ಬಳಸಿಕೊಳ್ಳುವಂತೆಯೂ ಸರ್ಕಾರ ಸೂಚಿಸಿತು. ಆದರೆ, ಸಿಬ್ಬಂದಿ ವೇತನಕ್ಕೆ ಪ್ರತೀ ತಿಂಗಳು ನೇರ ಅನುದಾನ ನೀಡುವಂತೆ ನೌಕರರು ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ ತ್ರೈಮಾಸಿಕ ಅನುದಾನದಿಂದಲೇ ಗ್ರಾಪಂ ನೌಕರರಿಗೆ ವೇತನ ಪಾವತಿಯಾಗುತ್ತಿದೆ. ಕೆಲವೆಡೆ, 4 ತಿಂಗಳು ಕಳೆದರೂ ವೇತನ ಪಾವತಿ ಆಗುವುದಿಲ್ಲ. ಗ್ರಾಪಂ ನೌಕರರ ಇ-ಹಾಜರಾತಿ ಮೇಲೆ ಸಮರ್ಪಕ ವೇತನ ನೀಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ. ಆದರೆ, ಇ ಹಾಜರಾತಿಯಲ್ಲಿ ಪ್ರಥಮ ಸ್ಥಾನದಲ್ಲಿರುವ ಉಡುಪಿ ಜಿಲ್ಲೆಯ ಸಿಬ್ಬಂದಿಗೆ ಇದರಿಂದ ಯಾವುದೇ ಪ್ರಯೋಜನವಿಲ್ಲ.

ಕರ ಸಂಗ್ರಹ ಕರಾವಳಿ ಮುಂದೆ: 2018-19ರ ಸಾಲಿನ ಮಾರ್ಚ್, ಏಪ್ರಿಲ್, ಮೇ ತಿಂಗಳ ವೇತನ ಜೂನ್‌ಗೆ, ಜೂನ್, ಜುಲೈ, ಆಗಸ್ಟ್ ತಿಂಗಳ ವೇತನ ಅಕ್ಟೋಬರ್‌ಗೆ, ಸೆಪ್ಟಂಬರ್, ಅಕ್ಟೋಬರ್, ನವಂಬರ್ ತಿಂಗಳ ವೇತನ ಡಿಸೆಂಬರ್‌ಗೆ, 2019 ಜನವರಿ, ಫೆಬ್ರವರಿ ವೇತನ ಇನ್ನೂ ಕೈಸೇರಿಲ್ಲ. ಉಡುಪಿ ಹಾಗೂ ದ.ಕ ಜಿಲ್ಲೆಯ ಗ್ರಾ.ಪಂ.ಗಳಲ್ಲಿ ತೆರಿಗೆ ವಸೂಲಿ ಶೇ.90ರಷ್ಟಿದೆ. ಉತ್ತಮ ಸಾಧನೆಯ ಹೊರತಾಗಿಯೂ, ಕೆಲ ಪಂಚಾಯಿತಿಗಳಲ್ಲಿ ಅನುದಾನ ಸಮಸ್ಯೆ ಹೆಚ್ಚಿದೆ. ತೆರಿಗೆ ಹಣ ಬಳಸಿ ಸಿಬ್ಬಂದಿಗೆ ವೇತನ ನೀಡುವಷ್ಟು ಶಕ್ತಿ ಕೆಲ ಗ್ರಾಪಂಗಳಿಗಿಲ್ಲ. ಆದರೆ, ಕೆಲ ಪಂಚಾಯಿತಿ ಗಳಲ್ಲಿ ಸರ್ಕಾರದ ತ್ರೈಮಾಸಿಕ ಅನುದಾನಕ್ಕೆ ಕಾಯದೆ ತೆರಿಗೆ ಸಂಗ್ರಹ ಶೇ.40 ಅನುದಾನದಿಂದಲೇ ಸಿಬ್ಬಂದಿಗೆ ಪ್ರತೀ ತಿಂಗಳು ಅನುದಾನ ನೀಡಲಾಗುತ್ತದೆ. ಆದರೆ, ಕೆಲವು ಗ್ರಾ.ಪಂಗಳಲ್ಲಂತೂ ನೌಕರರು ವೇತನಕ್ಕೆ ಮೂರು, ನಾಲ್ಕು ತಿಂಗಳು ಕಾಯಬೇಕು.

ಭವಿಷ್ಯನಿಧಿ, ವೈದ್ಯಕೀಯ ಸೌಲಭ್ಯ ಇಲ್ಲ: ಭವಿಷ್ಯನಿಧಿ, ವೈದ್ಯಕೀಯ ಸೌಲಭ್ಯವನ್ನೂ ತಮಗೆ ಸರ್ಕಾರ ಕಲ್ಪಿಸಿಲ್ಲ ಎಂಬುದು ಗ್ರಾಪಂ ನೌಕರರ ಅಳಲು. 10 ವರ್ಷಗಳ ಹಿಂದೆ ನೌಕರಿಗೆ ಸೇರಿದವರಿಗೂ, ಸದ್ಯ ನೇಮಕಗೊಂಡವರಿಗೂ ಸಮಾನ ವೇತನ ಶ್ರೇಣಿ. ನೌಕರರನ್ನು ಸಿ ಮತ್ತು ಡಿ ದರ್ಜೆ ಎಂದು ಪರಿಗಣಿಸಿ ವೇತನ ಶ್ರೇಣಿ ನಿಗದಿಪಡಿಸಬೇಕು. ಪ್ರತೀ ತಿಂಗಳು 5ನೇ ತಾರೀಕಿನೊಳಗೆ ಗ್ರಾಪಂಗೆ ವೇತನ ಅನುದಾನ ನೀಡುವಂತೆ ನೌಕರರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗ್ರಾ.ಪಂ. ನೌಕರರ ಸಂಖ್ಯೆ
ದ.ಕ.- 1,700
ಉಡುಪಿ- 900

ಸಮಸ್ಯೆ ಸುಳಿಯಲ್ಲಿ: ಬಿಲ್ ಕಲೆಕ್ಟರ್, ಗುಮಾಸ್ತ, ಡೇಟಾ ಎಂಟ್ರಿ ಆಪರೇಟರ್, ಪಂಪು ಚಾಲಕ, ವಾಟರ್‌ಮೆನ್, ಜವಾನ ಮತ್ತು ಶುಚಿತ್ವ ನೌಕರರು ಈ ಸಮಸ್ಯೆ ಎದುರಿಸುತ್ತಿರುವವರು.

ಈ ಸಮಸ್ಯೆ ಡುಪಿ ಜಿಲ್ಲೆಗಷ್ಟೇ ಅಲ್ಲ, ದ.ಕ. ಜಿಲ್ಲೆಯಲ್ಲಿಯೂ ಇದೆ. ಅನೇಕ ಗ್ರಾ.ಪಂ.ಸಿಬ್ಬಂದಿಗೆ ದ.ಕ.ದಲ್ಲಿ 2-3 ತಿಂಗಳು ತನಕ ವಿಳಂಬವಾಗಿ ವೇತನ ಸಿಗುತ್ತಿದೆ. ಆದರೆ ಹಿರಿಯ ಅಧಿಕಾರಿಗಳು ಹಾಗೂ ಆಡಳಿತ ವ್ಯವಸ್ಥೆಗೆ ಹೆದರಿ ಸಿಬ್ಬಂದಿ ಬಹಿರಂಗವಾಗಿ ದೂರು ನೀಡಲು ಮುಂದಾಗುತ್ತಿಲ್ಲ. ರಹಸ್ಯವಾಗಿ ಅಳಲು ತೋಡಿಕೊಳ್ಳುತ್ತಿದ್ದಾರೆ. ಸರ್ಕಾರದಿಂದ ದುಡ್ಡು ಬಿಡುಗಡೆಯಾದರೂ, ಸಿಬ್ಬಂದಿಗೆ ಸಕಾಲದಲ್ಲಿ ಪಾವತಿ ಆಗುತ್ತಿಲ್ಲ. ಸರ್ಕಾರವೇ ನಿಗದಿಪಡಿಸಿದ ಕನಿಷ್ಠ ಕೂಲಿ ವಿಚಾರದಲ್ಲೂ ಸಿಬ್ಬಂದಿಗೆ ಅನ್ಯಾಯವಾಗುತ್ತಿದೆ. ಆದರೆ, ಇತರ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಿತಿ ಚೆನ್ನಾಗಿದೆ.
|ದೇವಿ ಪ್ರಸಾದ್ ಬೊಳ್ಮ, ರಾಜ್ಯಾಧ್ಯಕ್ಷ, ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಶ್ರೇಯೋಭಿವೃದ್ಧಿ ಸಂಘ

ಹೆಚ್ಚಿನ ಪಂಚಾಯಿತಿಗಳಲ್ಲಿ ನೌಕರರಿಗೆ ಪ್ರತೀ ತಿಂಗಳು ಸಕಾಲಕ್ಕೆ ವೇತನ ಸಿಗುತ್ತಿಲ್ಲ. ವೇತನಕ್ಕಾಗಿ ಮೂರ್ನಾಲ್ಕು ತಿಂಗಳು ಕಾಯಬೇ ಕಾಗುತ್ತದೆ. ಪ್ರತೀ ತಿಂಗಳ ವೇತನ ಪಾವತಿಗೆ ಸರ್ಕಾರ ಗ್ರಾಪಂಗೆ ನೇರ ಅನುದಾನ ನೀಡಬೇಕು. ನೌಕರರಿಗೆ 5ನೇ ತಾರೀಕಿನೊಳಗೆ ವೇತನ ಸಿಗುವಂತಾಗಬೇಕು. ಗ್ರಾ.ಪಂ.ನೌಕರರನ್ನು ಸಿ ಮತ್ತು ಡಿ ದರ್ಜೆ ಎಂದು ಪರಿಗಣಿಸಿ ವೇತನ ಶ್ರೇಣಿ ನಿಗದಿಪಡಿಸಬೇಕು.
|ಪದ್ಮನಾಭ ಆರ್.ಕುಲಾಲ್, ಪ್ರ.ಕಾರ್ಯದರ್ಶಿ, ರಾಜ್ಯ ಗ್ರಾ.ಪಂ ನೌಕರರ ಶ್ರೇಯೋಭಿವೃದ್ಧಿ ಸಂಘ

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...