More

    ಕೇಂದ್ರದ ಗ್ರಾಮೀಣ ಯೋಜನೆ ಮನವರಿಕೆ ಮಾಡಿಕೊಡಲು ಫೆ.12ರಿಂದ ಗ್ರಾಮ ಪರಿಕ್ರಮ ಯಾತ್ರೆ: ಎ.ಎಸ್.ನಡಹಳ್ಳಿ

    ಬೆಂಗಳೂರು:
    ಪ್ರಧಾನಿ ನರೇಂದ್ರ ಮೋದಿಜೀ ನೇತೃತ್ವದ ಸರ್ಕಾರ ಗ್ರಾಮೀಣ ಜನರಿಗಾಗಿ ಅನುಷ್ಠಾನಕ್ಕೆ ತಂದ ಯೋಜನೆಗಳನ್ನು ಮನವರಿಕೆ ಮಾಡಿಕೊಡಲು ೆ.12ರಿಂದ ರಾಜ್ಯದಾದ್ಯಂತ ಗ್ರಾಮ ಪರಿಕ್ರಮ ಯಾಥ್ರೆ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ ತಿಳಿಸಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆ ದೃಷ್ಟಿಯಿಂದಲೂ ದೇಶದಾದ್ಯಂತ ರೈತ ಮೋರ್ಚಾ ವತಿಯಿಂದ ಗ್ರಾಮ ಪರಿಕ್ರಮ ಯಾತ್ರೆ ನಡೆಯಲಿದೆ ಎಂದರು.
    ಫೆ. 12ರಂದು ಮಧ್ಯಾಹ್ನ 12.30ಕ್ಕೆ ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ಯಾತ್ರೆ ಉದ್ಘಾಟಿಸಲಿದ್ದು, ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಜ್ಕುಮಾರ್ ಚಾಹರ್ ಹಾಜರಿರಲಿದ್ದಾರೆ. ದೇಶದ ಎಲ್ಲ ಬಿಜೆಪಿ ಸಂಘಟನಾತ್ಮಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಉದ್ಘಾಟನೆ ನೆರವೇರಲಿದ್ದು, ಎಲ್ಲ ಜಿಲ್ಲೆಗಳಲ್ಲಿ ಎಲ್ಇಡಿ ಮುಖಾಂತರ ಈ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಮಾಡಲಾಗುವುದು ಎಂದರು.
    ರಾಜ್ಯದ 32 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರೈತ ಮೋರ್ಚಾದ ಪದಾಧಿಕಾರಿಗಳು ಸೇರಿ ಎಲ್ಲ ಹಂತದ ಜನಪ್ರತಿನಿಧಿಗಳು ಪಾಲ್ಗೊಳ್ಳುತ್ತಾರೆ ಎಂದರು.
    ಕಾರ್ಯಕ್ರಮ ಮೊದಲು ಗೋಪೂಜೆ ಮಾಡಲಾಗುವುದು. 30 ದಿನಗಳ ಕಾಲ ಪರಿಕ್ರಮ ಯಾತ್ರೆ ನಡೆಯಲಿದೆ. ಪ್ರತಿದಿನ ಪ್ರತಿ ಜಿಲ್ಲೆಯ 5 ಹಳ್ಳಿಗಳಿಗೆ ಪ್ರವಾಸ ಮಾಡಲಾಗುವುದು. ರೈತರ ಸಮಸ್ಯೆ ಆಲಿಸುವುದು ಮತ್ತು ಅವರ ಬೇಕು ಬೇಡಗಳನ್ನು ಪಟ್ಟಿ ಮಾಡಿ ರೈತ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರ ಮುಖಾಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ತಲುಪಿಸಲಾಗುವುದು. ಸರಕಾರದ ಯೋಜನೆ ಮತ್ತು ಪಕ್ಷದ ಪ್ರಣಾಳಿಕೆ ರೂಪಿಸುವಲ್ಲಿ ರೈತರ ಸಲಹೆಗಳನ್ನು ಅಳವಡಿಸಿಕೊಳ್ಳುವುದಕ್ಕೆ ಪ್ರಯತ್ನಿಸಲಾಗುವುದು ಎಂದರು.
    ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಿದ ರೈತಪರ ಕಾರ್ಯಕ್ರಮಗಳ ಕುರಿತು ಎಲ್ಲ ರೈತರು ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಜಾಗೃತಿ ಮೂಡಿಸಲಿದ್ದೇವೆ ಎಂದು ವಿವರ ನೀಡಿದರು.
    ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ರುದ್ರೇಶ್, ರಾಜ್ಯ ಮಾಧ್ಯಮ ವಕ್ತಾರರಾದ ವೆಂಕಟೇಶ್, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಮಹಾಲಿಂಗಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts