More

    ಕಾಂಗ್ರೆಸ್ ಮುಕ್ತ ಗ್ರಾಪಂ ಬಿಜೆಪಿ ಗುರಿ: ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು

    ಕುಂದಾಪುರ: ಮಹಾತ್ಮ ಗಾಂಧಿ ಕಂಡಿದ್ದ ಗ್ರಾಮ ಸ್ವರಾಜ್ ಕನಸನ್ನು ಕಾಂಗ್ರೆಸ್ ಮಣ್ಣುಪಾಲು ಮಾಡಿದ್ದು, ಗಾಂಧಿ ಕನಸು ಮೋದಿ ಮೂಲಕ ಸಾಕಾರಗೊಳ್ಳುತ್ತಿದೆ. ಓಟಿಗಾಗಿ ಕಾಂಗ್ರೆಸ್ ಗಾಂಧಿ ಆಶಯ ಬಳಸಿಕೊಂಡಿದ್ದು ಬಿಟ್ಟರೆ ಕುಟುಂಬ ರಾಜಕಾರಣದ ಮೂಲಕ ಗ್ರಾಮಾಭಿವೃದ್ಧಿ ಮಣ್ಣುಪಾಲು ಮಾಡಿದೆ. ಮೋದಿ ಗ್ರಾಮಗಳ ಅಭಿವೃದ್ಧಿ ಮೂಲಕ ರಾಷ್ಟ್ರೋತ್ಥಾನ ಗುರಿ ಹೊಂದಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
    ಉಡುಪಿ ಜಿಲ್ಲಾ ಬಿಜೆಪಿ, ಕುಂದಾಪುರ ಮಂಡಲ ಆಶ್ರಯದಲ್ಲಿ ಕೋಟೇಶ್ವರದಲ್ಲಿ ಶುಕ್ರವಾರ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಮುಂಬರುವ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರೇ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಮುಕ್ತ ಗ್ರಾಪಂ ನಮ್ಮ ಗುರಿ ಎಂದು ಹೇಳಿದರು.

    ರಾಜ್ಯದಲ್ಲಿ ಶಾಂತಿ ನೆಲೆ
    ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಗೋಭಕ್ಷಕರಿಗೆ, ಕೊಲೆ, ಹಲ್ಲೆಗಳಿಗೆ ಪ್ರೇರಣೆ ನೀಡುವ ಮೂಲಕ ಪಕ್ಷಪಾತಿ ಧೋರಣೆ ಅನುಸರಿಸಿದರೆ, ಬಿಜೆಪಿ ಸರ್ಕಾರ ಸರ್ವಜನ ಹಿತದ ಕೆಲಸ ಮಾಡುತ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

    ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್, ಸಂಸದರಾದ ಶೋಭಾ ಕರಂದ್ಲಾಜೆ, ಎಸ್.ಮುನಿಸ್ವಾಮಿ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ.ಸುಕುಮಾರ ಶೆಟ್ಟಿ, ಕೆ.ರಘುಪತಿ ಭಟ್, ಉಮಾನಾಥ ಕೋಟ್ಯಾನ್, ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ನಾಯಕ್, ಹಿರಿಯ ಮುಖಂಡ ಉದಯ ಕುಮಾರ್ ಶೆಟ್ಟಿ ಇದ್ದರು.
    ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಸ್ವಾಗತಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ‌್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿದರು. ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ವಂದಿಸಿದರು.

    ಸಮರ್ಥ ದೇಶ ಕಟ್ಟುವ ಸಲುವಾಗಿ ಬಿಜೆಪಿ ಬೆಂಬಲಿತರು ಗ್ರಾಪಂ ಅಧಿಕಾರ ಪಡೆಯಬೇಕು ಎಂಬ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಕೇಂದ್ರ ಸರ್ಕಾರ ಮನೆಮನೆಗೆ ಗಂಗೆ ಎಂಬ ವಿನೂತನ ಯೋಜನೆ ಮೂಲಕ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರದ ಜತೆ, ಉಜ್ವಲ್ ಗ್ಯಾಸ್ ಸಂಪರ್ಕ, ಸ್ವಚ್ಛ ಭಾರತ ಗ್ರಾಮ ನೈರ್ಮಲ್ಯಕ್ಕೆ ಒತ್ತು ಕೊಡಲಾಗುತ್ತಿದೆ. ಎಲ್ಲ ಸೇವೆಯನ್ನೂ ಗ್ರಾಮದಲ್ಲೇ ನೀಡುವ ಉದ್ದೇಶವಿದ್ದು, 15ನೇ ಹಣಕಾಸು ಯೋಜನೆಯಲ್ಲಿ ಗ್ರಾಮಗಳಿಗೆ ಕೇಂದ್ರ ಸರ್ಕಾರ 1 ಕೋಟಿ ರೂ. ನೀಡಲಿದ್ದು, ಇದರಿಂದ ಗ್ರಾಮಗಳ ಅಭಿವೃದ್ಧಿಗೆ ವೇಗ ಸಿಗಲಿದೆ.
    ಅಶ್ವತ್ಥನಾರಾಯಣ್, ಉಪಮುಖ್ಯಮಂತ್ರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts