More

    30ರಂದು ನಾಲ್ಕೂರಿನಲ್ಲಿ ಡಿಸಿ ಗ್ರಾಮ ವಾಸ್ತವ್ಯ

    ಕೊಕ್ಕರ್ಣೆ: ’ಜಿಲ್ಲಾಧಿಕಾರಿ ಹಳ್ಳಿಯ ಕಡೆಗೆ’ ರಾಜ್ಯದಲ್ಲಿ ಪ್ರಥಮ ಕಾರ್ಯಕ್ರಮ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯಿತಿಯ ಸಮುದಾಯ ಭವನದಲ್ಲಿ ಜ.30ರಂದು ನಡೆಯಲಿದ್ದು, ಗುರುವಾರ ನಾಲ್ಕೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬ್ರಹ್ಮಾವರ ತಹಸೀಲ್ದಾರ್ ಕಿರಣ್ ಗೋರಯ್ಯ ಮತ್ತು ಕಂದಾಯ ನಿರೀಕ್ಷಕ ಲಕ್ಷ್ಮಿನಾರಾಯಣ ಭಟ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.

    ನಾಲ್ಕೂರು ಗ್ರಾಪಂಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಗ್ರಾಮಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಿದ್ದಾರೆ. ನಾಲ್ಕೂರು ಮತ್ತು ನಂಚಾರು ಗ್ರಾಮದಲ್ಲಿ ಜನರ ಕುಂದು ಕೊರತೆಗಳ ದೂರನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ, ಗ್ರಾಮದ ಎಲ್ಲ ಪಹಣಿಯಲ್ಲಿನ ಲೋಪದೋಷಗಳನ್ನು ಗುರುತಿಸುವುದು, ಗ್ರಾಮದ ಅರ್ಹರಿಗೆ ಪಿಂಚಣಿ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಿ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡಲಾಗುವುದು ಎಂದು ತಹಸೀಲ್ದಾರ್ ತಿಳಿಸಿದರು.
    ಈ ಸಂಧರ್ಭದಲ್ಲಿ ಗ್ರಾಮಲೆಕ್ಕಾಧಿಕಾರಿ ರಾಘವೇಂದ್ರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೀತಾರಾಮ ಆಚಾರ್ಯ, ಕಾರ್ಯದರ್ಶಿ ರಮೇಶ್, ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

    ಅಹವಾಲು ಸ್ವೀಕಾರ
    ಜ.30ರಂದು ಬೆಳಗ್ಗೆ 9.30ರಿಂದ ಸಂಜೆ 5.30ರ ತನಕ ಉಡುಪಿ ಜಿಲ್ಲಾಧಿಕಾರಿ ನಾಲ್ಕೂರು ಗ್ರಾಪಂ ಸಮುದಾಯ ಭವನದಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರ ಕುಂದುಕೊರತೆಗಳು, ಅಹವಾಲುಗಳನ್ನು ಸ್ವೀಕರಿಸುವರು. ಸ್ಥಳದಲ್ಲಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಲಿದ್ದಾರೆ.

    ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು ಆಧಾರ್ ಕಾರ್ಡ್ ಅವಶ್ಯಕತೆ ಬಗ್ಗೆ, ಸರ್ಕಾರದಿಂದ ದೊರೆಯುವ ಸವಲತ್ತುಗಳ ಬಗ್ಗೆ ಗ್ರಾಮ ವಾಸ್ತವ್ಯದಲ್ಲಿ ಅರಿವು ಮೂಡಿಸಲಾಗುವುದು. ಈ ಭಾಗದಲ್ಲಿ ಕುಡುಬಿ ಜನಾಂಗ ಸಾಕಷ್ಟು ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಸವಲತ್ತುಗಳನ್ನು ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು.
    ಕಿರಣ್ ಗೋರಯ್ಯ, ಬ್ರಹ್ಮಾವರ ತಹಸೀಲ್ದಾರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts