More

    ಗ್ರಾಮಗಳಿಗೆ ಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಯತ್ನ: ಮಂಟಪ ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಕುಮಾರ್ ಅಭಿಮತ

    ಆನೇಕಲ್: ಮಂಟಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ಬೀದಿ ದೀಪ ಸೇರಿ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಮಂಟಪ ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಕುಮಾರ್ ಹೇಳಿದರು.

    ತಾಲೂಕಿನ ಮಂಟಪ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿ, ಕುಡಿಯುವ ನೀರು, ಗ್ರಾಮ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಅಗತ್ಯ ಇರುವ ಕಡೆ ಶುದ್ಧ ಕುಡಿಯುವ ನೀರಿ ಘಟಕ ತೆರೆಯಲಾಗಿದೆ. ಅಂಗನವಾಡಿ ಕಟ್ಟಡಗಳನ್ನು ಕಸವನಹಳ್ಳಿ, ಶಿಕಾರಿಪುರದಲ್ಲಿ ತೆರೆಯಲಾಗಿದ್ದು, ಕಸ ವಿಲೇವಾರಿಗೆ ಹೊಸ ಆಟೋ ಖರೀದಿ ಮಾಡಲಾಗುತ್ತಿದೆ ಎಂದರು.

    ತಲಾ 5 ಸಾವಿರ ರೂ. ಗಳಂತೆ 35 ಅಂಗವಿಕಲರಿಗೆ ಸಾಹಯ ಧನ ನೀಡಲಾಗಿದ್ದು, 15 ಹಣಕಾಸು ಯೋಜನೆಯಲ್ಲಿ 1.7 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಚರಂಡಿ, ಗ್ರಾಮದಲ್ಲಿ ಸ್ಮಶಾನ, ಕಾಂಪೌಂಡ್ ನಿರ್ಮಾಣ ಮಾಡಲು ಮೀಸಲಿಡಲಾಗಿದೆ. ನಮ್ಮ ಅಧಿಕಾರಾವಧಿಯಲ್ಲಿ ಪಕ್ಷಭೇದ ಮರೆತು ಪ್ರತಿ ಪಂಚಾಯಿತಿ ವ್ಯಾಪ್ತಿಯ ಮೂಲೆಮೂಲೆಗೂ ಮೂಲ ಸೌಕರ್ಯ ಕಲ್ಪಿಸಲು ಶ್ರಮಪಟ್ಟು ಕೆಲಸ ಮಾಡಿದ್ದೇನೆ ಎಂದು ಹೇಳಿದರು.

    ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ನರೇಂದ್ರಬಾಬು ಮಾತನಾಡಿ, ಜನಪ್ರತಿನಿಧಿಗಳಿಗೆ ಬದ್ಧತೆ ಇದ್ದಾಗ ಅಭಿವೃದ್ಧಿ ಸಾಧ್ಯವಾಗುತ್ತದೆ. ಪಕ್ಷಭೇದ ಮರೆತು ಕೆಲಸಮಾಡಬೇಕು. ಚುನಾವಣೆ ಸಂದರ್ಭದಲ್ಲಿ ರಾಜಕಾರಣ ಮಾಡಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಒತ್ತು ನೀಡಿದಾಗ ಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತದೆ. ತೆರಿಗೆಯನ್ನು ಸರಿಯಾಗಿ ಸಾರ್ವಜನಿಕರು ಕಟ್ಟುವ ಮೂಲಕ ಇನ್ನಷ್ಟು ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಹೇಳಿದರು.

    ಗ್ರಾಪಂ ಉಪಾಧ್ಯಕ್ಷೆ ಸೌಮ್ಯ ಶ್ರೀನಿವಾಸ್, ತಾಲೂಕು ಪಂಚಾಯಿತಿ ಸದಸ್ಯ ರಘುರಾಮ್, ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣೇಗೌಡ, ನಾರಾಯಣಸ್ವಾಮಿ, ವೆಂಕಟೇಶ್, ರಾಜಪ್ಪ, ಮುನಿರಾಜು, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರಾಜಣ್ಣ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನರೇಂದ್ರಬಾಬು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಸಿನಿಮಾ

    Latest Posts