More

    ಗ್ರಾಪಂ ಮಟ್ಟದಲ್ಲಿ ಆಯುಷ್ಮಾನ್ ಭಾರತ್ ನೋಂದಣಿ : ಡಾ.ನಂದಿತಾ ಮಾಹಿತಿ

    ರಾಯಚೂರು: ಜಿಲ್ಲೆಯ ಎಲ್ಲ ಗ್ರಾಪಂ ಮಟ್ಟದಲ್ಲಿ ಬಿಪಿಎಎಲ್ ಕಾರ್ಡ್‌ದಾರರಿಗೆ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಮಾಡಲಿಸಲಾಗುತ್ತಿದ್ದು, ಫೆ.6 ಮತ್ತು 7ರಂದು ನೋಂದಣಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಆಯುಷ್ಮಾನ್ ಭಾರತ ಜಿಲ್ಲಾ ನೋಡಲ್ ಅಧಿಕಾರಿ ಡಾ.ನಂದಿತಾ ತಿಳಿಸಿದರು.

    ಸ್ಥಳೀಯ ಡಿಎಚ್‌ಒ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಗ್ರಾಪಂ ಮಟ್ಟದಲ್ಲಿ ನೋಂದಣಿ ಕಾರ್ಯ ಮುಂದಿನ ದಿನಗಳಲ್ಲಿ ನಿರಂತರವಾಗಿ ನಡೆಯಲಿದ್ದು, ಬಿಪಿಎಲ್ ಕಾರ್ಡ್‌ದಾರರು ಆಧಾರ್ ಕಾರ್ಡ್, ಪಡಿತರ ಚೀಟಿ ನಕಲು ಪ್ರತಿ ನೀಡಿದರೆ ಪರಿಶೀಲಿಸಿ ತಕ್ಷಣ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸಲಾಗುವುದು ಎಂದರು.

    ಈಗಾಗಲೇ ಜಿಲ್ಲೆಯ 197 ಗ್ರಾಪಂಗಳಲ್ಲಿ ಈ ಕುರಿತಂತೆ ತಳಮಟ್ಟದಿಂದ ಕಾರ್ಯಕ್ರಮ ರೂಪಿಸಲಾಗಿದ್ದು, ಎಲ್ಲ ಗ್ರಾಪಂಗಳಿಗೆ ಬಯೋಮೆಟ್ರಿಕ್ ಯಂತ್ರಗಳನ್ನು ವಿತರಿಸಲಾಗಿದೆ. ಬಿಪಿಎಲ್ ಕಾರ್ಡ್‌ದಾರರು ಬೇರೆಡೆ ಹೋಗಿದ್ದಲ್ಲಿ ಹತ್ತಿರದ ಗ್ರಾಪಂಗಳಿಗೆ ತೆರಳಿ ತಮ್ಮ ದಾಖಲೆ ನೀಡಿ ನೋಂದಣಿ ಮಾಡಿಸಬಹುದಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ 1.30 ಲಕ್ಷ ಬಿಪಿಎಲ್ ಹಾಗೂ 14 ಸಾವಿರ ಎಪಿಎಲ್ ಕಾರ್ಡ್‌ದಾರರಿಗೆ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸಲಾಗಿದ್ದು, ಆರೋಗ್ಯ ರಕ್ಷಣಾ ಸಮಿತಿಗೆ 13.08 ಕೋಟಿ ರೂ. ಬಿಡುಗಡೆಯಾಗಿದೆ. 10,326 ಜನರು ಯೋಜನೆಯ ಪ್ರಯೋಜನ ಪಡೆದಿದ್ದಾರೆ ಎಂದರು.

    ಜಿಲ್ಲೆಯಲ್ಲಿ ರಿಮ್ಸ್ ಸೇರಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಹೊಂದಿದವರಿಗೆ ಉಚಿತ ಚಿಕಿತ್ಸೆ ಲಭ್ಯವಿದ್ದು, ಜಿಲ್ಲಾ ಮಟ್ಟದಲ್ಲಿ ಚಿಕಿತ್ಸೆ ಲಭ್ಯವಿಲ್ಲದಿದ್ದಲ್ಲಿ ಬೇರೆಡೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗುತ್ತಿದೆ ಎಂದು ಡಾ.ನಂದಿತಾ ತಿಳಿಸಿದರು. ಪ್ರಭಾರ ಡಿಎಚ್‌ಒ ಡಾ.ಗಣೇಶ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts