ಹಿಂದೂ ಮಹಾಸಭಾ ಗಣೇಶ ಮೂರ್ತಿಯ ಭವ್ಯ ಮೆರವಣಿಗೆ

ganesh

ಶಿವಮೊಗ್ಗ: ನಗರದಲ್ಲಿ ಹಿಂದೂ ಮಹಾಸಭಾ ಗಣೇಶ ಮೂರ್ತಿಯನ್ನು ಅದ್ಧೂರಿ ರಾಜಬೀದಿ ಉತ್ಸವದೊಂದಿಗೆ ಮಂಗಳವಾರ ವಿಸರ್ಜಿಸಲಾಯಿತು. ಕೋಟೆ ರಸ್ತೆಯ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾಪೂರ್ವ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ಬೆಳಗ್ಗೆ 11.30ರ ಸುಮಾರಿಗೆ ಆರಂಭವಾದ ಮೆರವಣಿಗೆ ಎಸ್‌ಪಿಎಂ ರಸ್ತೆ, ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ, ನೆಹರೂ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಡರಾತ್ರಿ ಭೀಮನ ಮಡುವಿನಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.
ಗಣೇಶ ಮೂರ್ತಿಯ ಭವ್ಯ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಸಡಗರ ಹಾಗೂ ಸಂಭ್ರಮದಿಂದ ಹೆಜ್ಜೆ ಹಾಕಿದರು. ಹಣೆಗೆ ಕೆಂಪು ಪಟ್ಟಿ, ತಿಲಕ ಧರಿಸಿದ್ದ ಯುವಕರ ತಂಡಗಳು ದೇಶಭಕ್ತಿಯನ್ನು ಸಾರುವ ಘೋಷಣೆಗಳನ್ನು ಕೂಗುತ್ತಾ ಸಾಗಿಬಂದರು. ಗಾಂಧಿ ಬಜಾರ್ ಹಾಗೂ ಎಸ್‌ಪಿಎಂ ರಸ್ತೆಯ ಇಕ್ಕೆಲಗಳ ಕಟ್ಟಡದ ಮೇಲೆ ನಿಂತು ಸಾರ್ವಜನಿಕರು ವಿನಾಯಕನಿಗೆ ಹೂಗಳ ಸಿಂಚನಗೈದರು. ಕೆಲವೆಡೆ ರಸ್ತೆಗೆ ನೀರು ಹಾಕಿ ರಂಗೋಲಿ, ತಳಿರು-ತೋರಣಗಳಿಂದ ಸಿಂಗರಿಸಿದ್ದ ದೃಶ್ಯವೂ ಕಂಡು ಬಂದಿತು.
ರಾಜಬೀದಿ ಉತ್ಸವದಲ್ಲಿ ಭಾಗವಹಿಸಿದವರಿಗೆ ಕೆಲ ಸಂಘ ಸಂಸ್ಥೆಗಳು ನೀರು, ಮಜ್ಜಿಗೆ, ಪಾನಕ ಹಾಗೂ ಲಘು ಉಪಹಾರದ ವ್ಯವಸ್ಥೆಯನ್ನೂ ಮಾಡಿದ್ದರು. ಎಸ್‌ಪಿಎಂ ರಸ್ತೆ, ಗಾಂಧಿ ಬಜಾರ್ ಹಾಗೂ ಎ.ಎ.ವೃತ್ತದಲ್ಲಿ ಧ್ವನಿ ವರ್ಧಕಗಳ ಮೂಲಕ ಭಕ್ತಿ ಗೀತೆ ಹಾಗೂ ದೇಶಭಕ್ತಿ ಗೀತೆಗಳು ಮೆರವಣಿಗೆ ವೇಳೆ ಪ್ರತಿಧ್ವನಿಸಿದವು. ಬಿಸಿಲಿನ ತಾಪಕ್ಕೂ ಜಗ್ಗದೇ ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು.

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…