ಮಲೇಷ್ಯಾದಲ್ಲಿ ಮಂಡ್ಯದ ಪ್ರತಿಭೆಯ ಖದರ್: ಟೂರ್ನಿ ಚಾಂಪಿಯನ್‌ಗೆ ಗ್ರಾಮದಲ್ಲಿ ಅದ್ಧೂರಿ ಸ್ವಾಗತ

grand welcome to the Khokho Tournament Champion mandya
Published on

ಪಾಂಡವಪುರ: ಮಲೇಷ್ಯಾಯಾದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಖೋಖೋ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಪಡೆದ ತಂಡದ ಸದಸ್ಯ ವರುಣ್ ಸ್ವಗ್ರಾಮ ಕ್ಯಾತನಹಳ್ಳಿಗೆ ಆಗಮಿಸಿದಾಗ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಕ್ರೀಡಾಪಟು ವರುಣ್ ಅ.12 ರಿಂದ 15ರವರೆಗೆ ನಡೆದ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ ದೇಶ ಹಾಗೂ ಗ್ರಾಮಕ್ಕೆ ಕೀರ್ತಿ ಹೆಚ್ಚಿಸಿದ್ದಾರೆಂದ ಗ್ರಾಮದಲ್ಲಿರುವ ದಿ.ಕೆ.ಎಸ್.ಪುಟ್ಟಣ್ಣಯ್ಯ ಪುತ್ಥಳಿ ಮುಂದೆ ಅಭಿನಂದನೆ ಸಲ್ಲಿಸಲಾಯಿತು.

ಜಿ.ಪಂ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ ಮಾತನಾಡಿ, ನಮ್ಮೂರಿನ ಯುವಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ. ದಿ.ಕೆ.ಎಸ್.ಪುಟ್ಟಣ್ಣಯ್ಯ ಅವರ ಆಶಯದಂತೆ ಗ್ರಾಮದ ಕ್ರೀಡಾಪಟು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದರು.

ಗ್ರಾಮದ ಗೋವಿಂದೇಗೌಡ, ದಯಾನಂದ, ರವಿಕುಮಾರ್, ಯುವರಾಜು, ರಶ್ಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net