ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ಬಂದ ಮೊಮ್ಮಗ, ಸೊಸೆ

leelavathi
Published on

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.  ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನಿಂದ ಲೀಲಾವತಿ ಅವರ ಸೊಸೆ, ಅಂದರೆ ವಿನೋದ್ ರಾಜ್ ಅವರ ಪತ್ನಿ ಅನು ಮತ್ತು ಲೀಲಾವತಿ  ಮೊಮ್ಮಗ  ಯುವರಾಜ್ ಆಗಮಿಸಿದ್ದಾರೆ.

ನಿನ್ನೆ ರಾತ್ರಿಯೇ ಅವರು ಚೆನ್ನೈನಿಂದ ಹೊರಟು ನೆಲಮಂಗಲ ತಲುಪಿದ್ದಾರೆ. ಇಂದು ಲೀಲಾವತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ.

ವಿನೋದ್ ರಾಜ್ ಮದುವೆ ವಿಚಾರವಾಗಿ ಹಲವಾರು ಗೊಂದಲಗಳು ಇದ್ದವು. ತಾಯಿಗಾಗಿ ವಿನೋದ್ ಮದುವೆ ಆಗದೇ, ತಾಯಿಯ ಸೇವೆಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇತ್ತೀಚೆಗಷ್ಟೇ ವಿನೋದ್ ರಾಜ್ ಮದುವೆ ಆಗಿರುವ ಸುದ್ದಿಯನ್ನು ನಿರ್ದೇಶಕರೊಬ್ಬರು ಫೋಟೋ ಸಮೇತ ವಿವರಿಸಿದ್ದರು. ವಿನೋದ್ ರಾಜ್ ಮದುವೆ ವಿಚಾರವನ್ನು ಸ್ವತಃ ಲೀಲಾವತಿ ಮತ್ತು ವಿನೋದ್ ರಾಜ್ ಕೂಡ ಒಪ್ಪಿಕೊಂಡಿದ್ದರು.

85 ವರ್ಷದ ನಟಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್​ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net