More

    ಅನುದಾನ ಹಂಚಿಕೆ ತಾರತಮ್ಯ ಸರಿಪಡಿಸದಿದ್ದರೆ ಹೋರಾಟ: ಭಾಗ್ಯನಗರ ಪಪಂ ಸದಸ್ಯರ ಎಚ್ಚರಿಕೆ

    ಕೊಪ್ಪಳ: ನಗರೋತ್ಥಾನ 4ನೇ ಹಂತದಲ್ಲಿ ಭಾಗ್ಯನಗರ ಪಟ್ಟಣ ಪಂಚಾಯಿತಿಗೆ 4 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ವಾರ್ಡ್‌ವಾರು ಹಂಚಿಕೆಯಲ್ಲಿ ತಾರತಮ್ಯವಾಗಿದೆ. ಇದನ್ನು ಸರಿಪಡಿಸದಿದ್ದರೆ ಹೋರಾಟ ಮಾಡುವುದಾಗಿ ಎಂದು ಸದಸ್ಯ ಪರಶುರಾಮ ನಾಯಕ್ ತಿಳಿಸಿದರು.

    ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಎಲ್ಲ ವಾರ್ಡ್ ಅಭಿವೃದ್ಧಿಗೆ ಸಂಬಂಧಿಸಿ ಸದಸ್ಯರಿಂದ ಕ್ರಿಯಾಯೋಜನೆ ಪಡೆಯಲಾಗಿದೆ. ಆದರೆ, ಬೇರೆ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. 12ನೇ ವಾರ್ಡ್‌ಗೆ ಯಾವುದೇ ಅನುದಾನ ಹಂಚಿಕೆಯಾಗಿಲ್ಲ. ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಅನುದಾನದಲ್ಲಿ ಬೇರೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಪ್ರಕಟವಾಗದ ಕಾರಣ ನಾವೆಲ್ಲ ಅಧಿಕಾರ ಇಲ್ಲವಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿಯಲ್ಲಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ಅನುದಾನ ಹಂಚಿಕೆಯಲ್ಲಿ ಸಮಸ್ಯೆ ಮಾಡಿದ್ದಾರೆ. ಚುನಾವಣೆಯಲ್ಲಿ ಪಕ್ಷಭೇದ ಸಾಮಾನ್ಯ. ಆದರೆ, ಪಟ್ಟಣ ಅಭಿವೃದ್ಧಿಯಲ್ಲೂ ರಾಜಕೀಯ ನಡೆಸಲಾಗುತ್ತಿದೆ. ಬಿಜೆಪಿ ಸದಸ್ಯರು ಪ್ರತಿನಿಧಿಸುವ ವಾರ್ಡ್‌ಗಳಿಗೆ ಕಡಿಮೆ ಅನುದಾನ ನಿಗದಿಪಡಿಸಲಾಗಿದೆ ಎಂದು ಆರೋಪಿಸಿದರು.

    ಈ ಸಂಬಂಧ ಜಿಲ್ಲಾಧಿಕಾರಿ, ಸಂಸದ ಸಂಗಣ್ಣ ಕರಡಿಗೆ ಮನವಿ ಸಲ್ಲಿಸಿದ್ದೇವೆ. ಪರಿಶೀಲಿಸಿ ಸರಿಪಡಿಸುವುದಾಗಿ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ಕೂಡಲೇ ನಾವು ನೀಡಿದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಸರಿಯಾಗಿ ಹಂಚಿಕೆ ಮಾಡಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡುತ್ತೇವೆ ಎಂದರು. ಪಪಂ ಸದಸ್ಯರಾದ ಜಯಮಾಲಾ ಶೆಡ್ಮಿ, ಗೌರಮ್ಮ ಉಂಕಿ, ಲಲಿತಾ ಡಂಬಳ್, ಮಂಜವ್ವ ಮ್ಯಾಗಳಮನಿ, ಮಂಜುಳಾ ಶ್ಯಾವಿ, ಜಗದೀಶ ಮಾಲಗಿತ್ತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts