More

    ಅನುದಾನದ ಸಂಪೂರ್ಣ ಸದ್ವಿನಿಯೋಗ, ಸಚಿವ ಆನಂದ್ ಸಿಂಗ್ ಹೇಳಿಕೆ

    ಹೊಸಪೇಟೆ: ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಸ್ಪರ್ಧೆ ಸಾಮಾನ್ಯ. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಜಿಲ್ಲೆಯ ಅಭಿವೃದ್ಧಿಗಾಗಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ವಿಜಯನಗರ ಜಿಲ್ಲೆಯ ಭವಿಷ್ಯ ಕ್ಷೇತ್ರದ ಮತದಾರರ ಕೈಯಲ್ಲಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಹೇಳಿದರು.

    ಜಿಲ್ಲಾಡಳಿತ, ಜಿಪಂ., ನಗರಸಭೆ ಹಾಗೂ ಮತ್ತಿತರ ಇಲಾಖೆಗಳ ಸಹಯೋಗದಲ್ಲಿ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಳ್ಳಲಾದ 294.04 ಕೋಟಿ ರೂ. ಮೊತ್ತದ ಒಟ್ಟು 241 ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದರು.

    ಹೊಸಪೇಟೆಯಲ್ಲಿ ಮುಂದಿನ 15 -20 ದಿನಗಳಲ್ಲಿ ಹಂಪಿ ಶುಗರ್ಸ್‌ ಕಾರ್ಖಾನೆಗೆ ಶಂಕು ಸ್ಥಾಪನೆ ನೆರವೇರಿಸಲಾಗುವುದು. ಅಲ್ಲದೇ, ನೂತನ ಜಿಲ್ಲಾ ಕೇಂದ್ರವಾದ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಮೆಡಿಕಲ್, ನಸಿರ್ಂಗ್, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜು, ಕೃಷಿ ವಿಶ್ವವಿದ್ಯಾಲಯ ಸೇರಿ ಸಣ್ಣ ಕೈಗಾರಿಕೆ ಕ್ಲಸ್ಟರ್ ಸ್ಥಾಪನೆಗೆ ಮುಂದಿನ ದಿನಗಳಲ್ಲಿ ಯೋಜನೆ ರೂಪಿಸಲಾಗುತ್ತದೆ.

    ಇದನ್ನೂ ಓದಿ: ಅನುದಾನದ ಸಂಪೂರ್ಣ ಸದ್ವಿನಿಯೋಗ, ಸಚಿವ ಆನಂದ್ ಸಿಂಗ್ ಹೇಳಿಕೆ

    ಸಮ್ಮಿಶ್ರ ಸರ್ಕಾರ, ಕೋವಿಡ್ ಕಾರಣಕ್ಕೆ 48 ತಿಂಗಳು ವ್ಯರ್ಥ್ಯವಾಗಿದೆ. ಅದನ್ನು ಹೊರತುಪಡಿಸಿ ಉಳಿದ 18 ತಿಂಗಳ ಅವಧಿಯಲ್ಲಿಯೇ ವಿಜಯನಗರ ಜಿಲ್ಲೆ ಸ್ಥಾಪನೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಸಾವಿರ ಕೋಟಿ ರೂ. ವರೆಗೆ ಅನುದಾನ ಒದಗಿಸಿ ಜಿಲ್ಲೆಯ ಮತ್ತು ವಿಧಾನಸಭಾ ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.

    ಆರ್ಥಿಕ ಇಲಾಖೆ ಅನುಮೋದನೆ ಸಿಕ್ಕ ಬಳಿಕ ನೂತನ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ವೇಗ ಸಿಕ್ಕಿತು. ಗ್ರಾಮೀಣ ಪ್ರದೇಶಗಳಲ್ಲಿ ಸಹ ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ, ಕೃಷಿಗೆ ಏತನೀರಾವರಿ ಹಾಗೂ ವಿವಿಧ ಅಗತ್ಯ ಸೌಲಭ್ಯಗಳನ್ನು ಆಯಾ ಇಲಾಖೆಗಳ ವತಿಯಿಂದ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಾವಿರಾರು ಕೋಟಿ ರೂ. ಅನುದಾನ ಬರಲಿದ್ದು, ಅದರ ಸದ್ವಿನಿಯೋಗಕ್ಕಾಗಿ ಮತ್ತೊಮ್ಮೆ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

    ಸಂಸದ ವೈ.ದೇವಂದ್ರಪ್ಪ ಮಾತನಾಡಿ, ವಿಜಯನಗರ ಸೇರಿದಂತೆ ಇತರೆ ನಾಲ್ಕೂ ಕ್ಷೇತ್ರಗಳನ್ನೂ ಅಭಿವೃದ್ಧಿಗೊಳಿಸಬೇಕಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಇತರೆ ಐದೂ ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡುತ್ತಿದ್ದೇನೆ. ಉಸಿರು ನಿಲ್ಲುವ ಮುನ್ನವೇ ಆನಂದ ಸಿಂಗ್ ಹೆಸರು ಮಾಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

    ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಕಾಮಗಾರಿ ಏಕಕಾಲದಲ್ಲಿ ಪ್ರಗತಿಯಲ್ಲಿವೆ. ನೂತನ ಜಿಲ್ಲೆಯಾಗಿ ಘೋಷಣೆಯಾದ ನಂತರ ಅತಿ ವೇಗವಾಗಿ ಅಭಿವೃದ್ಧಿ ಕಾಣುತ್ತಿರುವ ಜಿಲ್ಲೆಗಳ ಪಟ್ಟಿಯಲ್ಲಿ ವಿಜಯನಗರ ಮೊದಲ ಸ್ಥಾನದಲ್ಲಿದೆ. ಜಿಲ್ಲಾ ಕೇಂದ್ರದ ಹೃದಯ ಭಾಗದಲ್ಲಿ 85ಎಕರೆ ಪ್ರದೇಶದಲ್ಲಿ ಜಿಲ್ಲಾಡಳಿತ ಭವನ, ಜಿಲ್ಲಾ ಪಂಚಾಯತ್, ನ್ಯಾಯಾಲಯ ಸೇರಿ ಸಾರ್ವಜನಿಕರಿಗೆ ಅನುಕೂಲವಾಗುವ ವಿವಿಧ ಇಲಾಖೆಗಳ ಕಟ್ಟಡಗಳು ಕಾರ್ಯನಿರ್ವಹಿಸುತ್ತವೆ. ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಸಚಿವ ಆನಂದ ಸಿಂಗ್ ಖುದ್ದಾಗಿ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ಕೈಗೊಳ್ಳುತ್ತಿದ್ದಾರೆ. ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ವೇಗವಾಗಿ ಸ್ಪಂದಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.

    ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿ ಬಾಬು ಬಿ.ಎಲ್., ಜಿ.ಪಂ. ಸಿಇಒ ಸದಾಶಿವ ಪ್ರಭು ಬಿ., ಉಪವಿಭಾಗಾಧಿಕಾರಿ ಸಿದ್ಧರಾಮೇಶ್ವರ, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಎಲ್.ಎಸ್.ಆನಂದ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ ಜೀರೆ, ಕಮಲಾಪುರ ಪುರಸಭೆ ಅಧ್ಯಕ್ಷ ಸೈಯದ್ ಅಮಾನುಲ್ಲಾ ಇತರರಿದ್ದರು.

    ಹಳೆ ನೆನಪುಗಳ ಮೆಲುಕು

    15 ವರ್ಷಗಳಲ್ಲಿ ತಮ್ಮ ರಾಜಕೀಯ ಏಳುಬೀಳುಗಳನ್ನು ಸಚಿವ ಆನಂದ ಸಿಂಗ್ ಮೆಲುಕು ಹಾಕಿದರು. ಸಮಾಜ ಸೇವೆ ಮೂಲಕ ಸಾರ್ವಜನಿಕ ಜೀವನ ಆರಂಭಿಸಿದ ತಮಗೆ 2008, 2013ರಲ್ಲಿ ಬಿಜೆಪಿ ಸ್ಪರ್ಧೆಗೆ ಅವಕಾಶ ನೀಡಿ, ಚುನಾವಣೆಯಲ್ಲಿ ಗೆಲ್ಲಿಸಿತು. ಆದರೆ, 2018ರಲ್ಲಿ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸೇರಿದ್ದೆ. ಆದರೆ, ಆಗ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದರಿಂದ ಎಲ್ಲರೂ ಕಿತ್ತಾಟದಲ್ಲಿ ತೊಡಗಿದ್ದರು. ಅದರಲ್ಲಿ ನಾವೇನಾದರೂ ಕಿತ್ತಿಕೊಳ್ಳಬೇಕೆಂದು ಯೋಚಿಸಿ, ಪ್ರತ್ಯೇಕ ಜಿಲ್ಲೆಯ ಬೇಡಿಕೆ ಇರಿಸಿದ್ದೆ. ಅದಕ್ಕೆ ಆ ಪಕ್ಷದ ನಾಯಕರು ಸ್ಪಂದಿಸಲಿಲ್ಲ.

    ಇದನ್ನು ಅರಿತು ಮತ್ತೆ ಬಿಜೆಪಿಗರು ಮತ್ತೆ ಸೇರಿಕೊಂಡೆ. ಅದಾದ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ವಿಜಯನಗರ ಜಿಲ್ಲೆಯೂ ಉದಯಿಸಿತು. ಸದ್ಯ ಡಿಎಂಎಫ್ ಸೇರಿದಂತೆ ಕೆಎಂಇಆರ್‌ಸಿಯಿಂದ ಸಾವಿರಾರು ಕೋಟಿ ರೂ. ಹರಿದು ಬರಲಿದೆ. ವಿಜಯನಗರ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ಹೇಳಿದರು.

    ಅಭಿವೃದ್ಧಿಗೆ ನೆರವಾದವರನ್ನು ನೆನೆದ ಸಿಂಗ್

    2008ರಲ್ಲಿ ಆರಂಭಗೊಂಡ ರಾಜಕೀಯ ಜೀವನವನ್ನು ಸ್ಮರಿಸಿ ಸಚಿವ ಆನಂದ ಸಿಂಗ್, ತಮ್ಮ ಏಳಿಗೆಗೆ ತಂದೆಯ ಪಾತ್ರ ಮಹತ್ವದ್ದಾಗಿದೆ. ತಮ್ಮ ಅಂತಿಮ ದಿನಗಳಲ್ಲಿ ಭಾಷೆ ಪಡೆದಿದ್ದ ಅವರು, ನೀನು ರಾಜಕೀಯದಲ್ಲಿ ಪ್ರಾಮಾಣಿಕವಾಗಿ ಇರುವವರೆಗೆ ಕ್ಷೇತ್ರದ ಜನರು ಕೈಬಿಡುವುದಿಲ್ಲ ಎಂದಿದ್ದರು. ಕಳೆದ 15 ವರ್ಷಗಳಲ್ಲಿ ನಾಲ್ಕು ಚುನಾವಣೆಗಳಲ್ಲಿ ಕ್ಷೇತ್ರದ ಮತದಾರರು ಕೈಹಿಡಿದಿದ್ದಾರೆ ಎಂದರು.

    ಲಾಂಛನ ಬಿಡುಗಡೆ

    ಹೊಸಪೇಟೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಮಾರ್ಚ್ 11 ರಂದು ಆಯೋಜಿಸಿರುವ ತಾಲೂಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts