More

    ಶೀಘ್ರ ಮಲ್ಟಿ ಸ್ಪೆಷಾಲಿಟಿ ಮಂಜೂರು ಮಾಡಿ

    ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಗೆ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಬೇಕು ಹಾಗೂ ಕೂಡಲೆ ಆಸ್ಪತ್ರೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಸಿದ್ದಾಪುರ ತಾಲೂಕಿನ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ ಅವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಸಂತೋಷ ಬಂಡಾರಿ ಅವರ ಮೂಲಕ ಬುಧವಾರ ಸಲ್ಲಿಸಿದರು.

    ಉತ್ತರ ಕನ್ನಡ ಜಿಲ್ಲೆ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಇಂದಿನವರೆಗೂ ತ್ಯಾಗ ಮಾಡುತ್ತಲೇ ಬಂದಿದೆ. ಆದರೆ, ಇಲ್ಲಿಯ ಜನರಿಗೆ ಉತ್ತಮ ದರ್ಜೆಯ ಆಸ್ಪತ್ರೆ ಇಲ್ಲದೇ ಸಣ್ಣ ಪುಟ್ಟ ಚಿಕಿತ್ಸೆಗಾಗಿ ಹೊರ ಜಿಲ್ಲೆಯನ್ನು ಅವಲಂಭಿಸಬೇಕಾಗಿದೆ. ಕೂಡಲೆ ಜಿಲ್ಲೆಯ ಜನರ ಆರೋಗ್ಯದ ರಕ್ಷಣೆಗಾಗಿ ಹಾಗೂ ಗುಣಮಟ್ಟದ ಚಿಕಿತ್ಸೆಗಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಬೇಕು. ಇದೊಂದು ಪಕ್ಷಾತೀತ ಹೋರಾಟವಾಗಿದೆ. ನಮಗೆ ನ್ಯಾಯಸಿಗುವವರೆಗೂ ಹೋರಾಟ ಮುಂದುವರಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

    ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಗೌಡರ್ ತಹಸೀಲ್ದಾರ ಸಂತೋಷ ಭಂಡಾರಿ ಅವರಿಗೆ ಮನವಿ ಸಲ್ಲಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಆರ್.ಎಂ.ಪಾಟೀಲ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಸತೀಶ ಗೌಡರ್, ದೈವಜ್ಞ ಯುವಕ ಸಂಘದ ಅಧ್ಯಕ್ಷ ಪ್ರಶಾಂತ ಶೇಟ್, ಎಂ.ವಿ. ಹೆಗಡೆ, ಅಣ್ಣಪ್ಪ ಶಿರಳಗಿ, ಎ.ಜಿ. ನಾಯ್ಕ, ಇತರರು ಇದ್ದರು.

    ಸಚಿವರಿಗೆ ಮನವಿ: ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ಸಿದ್ದಾಪುರದ ಮೂಲಕ ಬೇರೆಡೆ ತೆರಳುವ ಸಂದರ್ಭದಲ್ಲಿ ಸಿದ್ದಾಪುರದ ಪ್ರವಾಸಿಮಂದಿರದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ವಿುಸುವಂತೆ ಆಗ್ರಹಿಸಿ ಸಂಘಟಕರು ಮನವಿ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts