

ಕಡಬ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ, ಬಿಳಿನೆಲೆ ಕೈಕಂಬ ಯುವಕ ಮಂಡಲದ ಕಟ್ಟಡ ದುರಸ್ತಿ ಕಾಮಗಾರಿಗೆ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಯೋಜನೆಯ ವತಿಯಿಂದ 1 ಲಕ್ಷ ರೂ. ಅನುದಾನ ಇತ್ತೀಚೆಗೆ ಹಸ್ತಾಂತರಿಸಲಾಯಿತು.
ಮಂಜೂರಾತಿ ಪತ್ರವನ್ನು ಯುವಕಮಂಡಲದ ಪದಾಧಿಕಾರಿಗಳಿಗೆ ಬಿಳಿನೆಲೆ ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ವಿತರಿಸಿದರು.
ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಧರ್ಮಪಾಲ ಗೌಡ, ಒಕ್ಕೂಟದ ಕೋಶಾಧಿಕಾರಿ ವಿಶ್ವನಾಥ ಗೌಡ ಕೈಕಂಬ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನವೀನ್ ನಡುತೋಟ, ಯುವಕಮಂಡಲದ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ವಿಜಯಕುಮಾರ್ ನಡುತೋಟ, ಬಿಳಿನೆಲೆ ಕೈಕಂಬ ಯುವಕ ಮಂಡಲದ ಅಧ್ಯಕ್ಷ ಶಿವಪ್ರಸಾದ್ ನಡುತೋಟ, ಬಿಳಿನೆಲೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಓಡಿಯಪ್ಪ ಎರ್ಮೈಲ್, ಕೈಕಂಬ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಭವ್ಯಶ್ರೀ, ಸ್ಥಳೀಯ ಸೇವಾಪ್ರತಿನಿಧಿಗಳಾದ ವಿನೋದ್ ಕೆ.ಸಿ., ರೇಖಾ ಕೈಕಂಬ ಮೊದಲಾದವರು ಉಪಸ್ಥಿತರಿದ್ದರು.