More

    ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿ

    ಬೆಳಗಾವಿ: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು.

    ದೇಶವನ್ನು ಒಗ್ಗೂಡಿಸಿ ಸ್ವಾತಂತ್ರ್ಯದ ಕಿಚ್ಚು ಹಚ್ಚಲು ಬಾಲಗಂಗಾಧರ ತಿಲಕ್ ಅವರು ಗಣೇಶೋತ್ಸವವನ್ನು ಸಾರ್ವಜನಿಕಗೊಳಿಸಿದ್ದರು. ಅಂದಿನಿಂದ ಜಾತಿ-ಮತ, ಭಾಷೆ, ಪಕ್ಷ ಮರೆತು ಏಕತೆಯ ಸೂತ್ರದಲ್ಲಿ ಹಬ್ಬ ಆಚರಣೆ ಮಾಡಲಾಗುತ್ತಿದೆ. 125 ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಈ ಸಂಪ್ರದಾಯ ದೇಶದ ಮೂಲೆ ಮೂಲೆಗಳಲ್ಲಿ ಪಸರಿಸಿದೆ. ಹೀಗಾಗಿ, ಜಿಲ್ಲಾಡಳಿತ ಸಾರ್ವಜನಿಕ ಗಣೇಶೋತ್ಸವ ಆಚರಿಸದಂತೆ ಆದೇಶಿಸಿರುವುದು ಸರಿಯಾದ ಕ್ರಮವಲ್ಲ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

    ಧಾರ್ಮಿಕ ಭಾವನೆಗೆ ಧಕ್ಕೆ: ರಾಜ್ಯ ಸರ್ಕಾರ ದೇವಸ್ಥಾನ, ಮನೆಯಲ್ಲಿ ಗಣೇಶೋತ್ಸವ ಆಚರಣೆ ಮಾಡಬೇಕು ಎಂದು ಸೂಚಿಸಿದೆ. ಆದರೆ, ಪಕ್ಕದ ಮಹಾರಾಷ್ಟ್ರದಲ್ಲಿ ಕರೊನಾ ಮಧ್ಯೆಯೇ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿದೆ. ಹಾಗಾಗಿ, ಕರೊನಾ ಕಾರಣದಿಂದಾಗಿ ನೂರಾರು ವರ್ಷಗಳ ಪರಂಪರೆ, ಧಾರ್ಮಿಕ ಭಾವನೆ, ಶ್ರದ್ಧೆ, ಏಕತೆ ಘಾಸಿಗೊಳಿಸುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ. ತಕ್ಷಣ ಸುತ್ತೋಲೆ ಹೊರಡಿಸಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

    ಶ್ರೀರಾಮ ಸೇನೆ ಮುಖಂಡ ವಿನಯ ಅಂಗ್ರಾಳಿ, ಶಿವರಾಜ ನಾಯಕ, ರಮೇಶ ಗುಡಗುಡಿಗೆ, ಲಕ್ಕಿ ಕುರಂಗಿ, ಬಾಳು ಪವಾರ್, ಸತೀಶ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts