ಧರ್ಮಸ್ಥಳದಿಂದ ಅನುದಾನ ಹಸ್ತಾಂತರ

5
Published on

ಬೆಳ್ತಂಗಡಿ: ಪಿಲಿಗೂಡು ಬಾರ್ಯಾ ಬನ್ನೆಂಗಳದಲ್ಲಿ ನಿರ್ಮಾಣವಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂದ ನೂತನ ಕಟ್ಟಡಕ್ಕೆ ಧರ್ಮಸ್ಥಳದಿಂದ ಧರ್ವಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕೊಡವಾಡಿದ 2 ಲಕ್ಷ ರೂ. ಅನುದಾನವನ್ನು ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಬಲ ಕುಲಾಲ್ ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಬನ್ನೆಂಗಳ ಹಾಲು ಉತ್ಪಾದಕರ ಸಹಕಾರಿ ಸಂದ ಅಧ್ಯಕ್ಷ ಗುಣಕರ್ ಅಗ್ನಾಡಿ, ಕಾರ್ಯದರ್ಶಿ ಚಂದ್ರಶೇಖರ್ ಬಾರ್ಯ, ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ, ಸೇವಾಪ್ರತಿನಿಧಿ ವಿಶಾಲಾಕ್ಷಿ, ಒಕ್ಕೂಟದ ಅಧ್ಯಕ್ಷ ಮೋಹನ್ ಗೌಡ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net