More

    ರೆಡ್‌ಕ್ರಾಸ್‌ನಿಂದ ಸಮಾಜಮುಖಿ ಸೇವೆ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಶ್ಲಾಘನೆ

    ಸುಳ್ಯ: ಮಾನವೀಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಸಮಾಜಕ್ಕೆ ಮಾದರಿ. ರಕ್ತದಾನ, ವಿಪತ್ತು ನಿರ್ವಹಣೆ ಮುಂತಾದ ಸಮಾಜಮುಖಿ ಕಾರ್ಯಕ್ರಮ ಆಯೋಜಿಸುವ ಮೂಲಕ ರೆಡ್‌ಕ್ರಾಸ್ ಸಂಸ್ಥೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

    ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ತಾಲೂಕು ಘಟಕ ವತಿಯಿಂದ ವರ್ತಕ ಸಮುದಾಯ ಭವನದಲ್ಲಿ ಗುರುವಾರ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

    ರಕ್ತದಾನಿ ಹಾಗೂ ರಕ್ತದಾನ ಶಿಬಿರ ಸಂಘಟಿಸಿದ ಸಾಧನೆಗೆ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯಿಂದ ಪುರಸ್ಕೃತರಾದ ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಸಂಜೀವ ಕುದ್ಪಾಜೆ ಅವರನ್ನು ಸನ್ಮಾನಿಸಲಾಯಿತು. ರೆಡ್‌ಕ್ರಾಸ್ ಸಂಸ್ಥೆಯ ದ.ಕ. ಜಿಲ್ಲಾ ಸಮಿತಿ ನಿರ್ದೇಶಕ ಪಿ.ಬಿ.ಹರೀಶ್ ರೈ ಅಭಿನಂದನಾ ಭಾಷಣ ಮಾಡಿದರು. ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಮತ್ತು ರೆಡ್‌ಕ್ರಾಸ್ ಕ್ರಾಸ್ ಸೊಸೈಟಿ ಸುಳ್ಯ ಘಟಕದ ಸಭಾಪತಿ ಪಿ.ಬಿ.ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾದ ಪಿ.ರಾಮಚಂದ್ರ, ಆದಂ ಕಮ್ಮಾಡಿ, ಪ್ರಭಾಕರ ನಾಯರ್, ಪ್ರಧಾನ ಕಾರ್ಯದರ್ಶಿ ಡಿ.ಎಸ್.ಗಿರೀಶ್, ಖಜಾಂಚಿ ಹೇಮಂತ ಕಾಮತ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ, ರೆಡ್‌ಕ್ರಾಸ್ ಕ್ರಾಸ್ ಸೊಸೈಟಿ ಸುಳ್ಯ ಘಟಕದ ಜಿಲ್ಲಾ ಪ್ರತಿನಿಧಿ ಸಿಎ ಗಣೇಶ್ ಭಟ್, ಉಪಸಭಾಪತಿ ಕೆ.ಎಂ.ಮುಸ್ತಫಾ ಉಪಸ್ಥಿತರಿದ್ದರು. ಕಾರ್ಯದರ್ಶಿ ತಿಪ್ಪೇಶಪ್ಪ ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts