

ಬೆಂಗಳೂರು: ಮುಜರಾಯಿ ಇಲಾಖೆಗೆ ಸೇರಿದ ಸಿ ವರ್ಗದ ದೇವಾಲಯಗಳಿಗೆ ಹೆಚ್ಚು ಅನುದಾನ, ತಸ್ತಿಕ್ ಹಣ ಹೆಚ್ಚಳ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿರುವುದಾಗಿ(Grants for C category temple renovation; CM Siddaramaiah's appeal) ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ(Ramalinga Reddy) ಹೇಳಿದರು.
ಸಿಎಂ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಜರಾಯಿ ಇಲಾಖೆ ಮತ್ತು ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಹಲವು ಬೇಡಿಕೆ ಮುಖ್ಯಮಂತ್ರಿಗಳ ಮುಂದೆ ಇಟ್ಟಿದ್ದೇನೆ. ತಸ್ತಿಕ್ ಹಣ ಹೆಚ್ಚು ಮಾಡಲು ಬೇಡಿಕೆ ಮಂಡಿಸಿದ್ದೇವೆ.
ಮುಜರಾಯಿ ಇಲಾಖೆಗೆ ಹೆಚ್ಚು ಅನುದಾನ ನೀಡಬೇಕು. ಸಿ ವರ್ಗದ ದೇವಸ್ಥಾನಗಳ ಅಭಿವೃದ್ಧಿಗಾಗಿ ಹೆಚ್ಚು ಅನುದಾನ ಬಿಡುಗಡೆ ಮಾಡಬೇಕು. ಕಾಶಿಯಲ್ಲಿ ಇದ್ದ ಕಟ್ಟಡ ಬಿದ್ದು ಹೋಗಿದ್ದು, ಹೊಸ ಕಟ್ಟಡ ನಿರ್ಮಾಣ ಮಾಡಲು ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
ಸಾರಿಗೆ ಇಲಾಖೆ ಸಂಬಂಧ ಹೊಸದಾಗಿ 3,500 ಬಸ್ ಅವಶ್ಯಕತೆ ಇದೆ. 15 ವರ್ಷ ಓಡಿರುವ ಬಸ್ ಬದಲಾವಣೆ ಮಾಡಬೇಕು. ಹೀಗಾಗಿ ಹೆಚ್ಚು ಅನುದಾನ ನೀಡಬೇಕು. ವಾಯವ್ಯ ಕರ್ನಾಟಕಕ್ಕೆ ಹೆಚ್ಚು ಆದ್ಯತೆ ಕೊಡಬೇಕು ಎಂದು ಬೇಡಿಕೆ ಇಟ್ಟಿರುವುದಾಗಿ ಹೇಳಿದರು.
ಬಿಜೆಪಿ ಅವಧಿಯಲ್ಲಿ ಇದ್ದ ಸಾಲಗಳನ್ನು ತೀರಿಸಲು ಸಹಾಯ ಮಾಡಿ ಎಂದು ಸಿಎಂಗೆ ಮನವಿ ಮಾಡಿದ್ದೇವೆ. ಸಿಎಂ ಕೂಡ ತಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರ ಮನಸಿನಲ್ಲೂ ಮುಜರಾಯಿ ಮತ್ತು ಸಾರಿಗೆ ಇಲಾಖೆಗಳಿಗೆ ಹೆಚ್ಚು ಅನುದಾನ ಕೊಡಬೇಕು ಎಂಬ ಅಭಿಪ್ರಾಯವಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.