More

    ಅಭಿವೃದ್ಧಿಗೆ ಅನುದಾನ ತರುವೆ

    ಗೋಣಿಕೊಪ್ಪ: ಕ್ಷೇತ್ರದ ಪ್ರತಿ ಪಂಚಾಯಿತಿಯ ಅಭಿವೃದ್ಧಿಗಾಗಿ ಸರ್ಕಾರದ ವತಿಯಿಂದ ಮೊದಲ ಹಂತದಲ್ಲಿ ಅನುದಾನ ಒದಗಿಸಿದ್ದೇನೆ. ಮುಂದೆ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ತರುವ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದರು.

    ಕೊಣಂಜಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ದೇವಸ್ಥಾನ ಹಾಗೂ ಆಟದ ಮೈದಾನದ ಅಭಿವೃದ್ಧಿಗೆ 40 ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದು, ಈ ಕಾಮಗಾರಿಗಳಿಗೆ ಶಾಸಕ ಪೊನ್ನಣ್ಣ ಗುದ್ದಲಿ ಪೂಜೆ ನೆರವೇರಿಸಿದರು.

    ಈ ಸಂದರ್ಭದಲ್ಲಿ ಗ್ರಾಮದ ಮುಖ್ಯಸ್ಥರಾದ ಬೊಳ್ಳಂಡ ಗಿರೀಶ್, ಬಲ್ಯಾಂಟಂಡ ಕುಟ್ಟಯ್ಯ, ನಾಯಕಂಡ ಕುಂಞಣ್ಣ, ಕಾದಿರ ಉಮೇಶ್, ಬೊಳಕಾರಂಡ ಕುಟುಂಬಸ್ಥರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪ್ರಮುಖರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts