More

    ಸುಬ್ರಹ್ಮಣ್ಯ, ಕೊಲ್ಲೂರಿನಲ್ಲಿ ಗೋಮಾಳ

    ಕಾರ್ಕಳ: ರಾಜ್ಯದ 25 ಆಯ್ದ ದೇವಾಲಯಗಳಲ್ಲಿ ಗೋಶಾಲೆಗಳನ್ನು ಆರಂಭಿಸಲಿದ್ದು, ಅದಕ್ಕಾಗಿ 10 ಎಕರೆ ಜಾಗ ಮೀಸಲಿಡಲು ಸೂಚಿಸಲಾಗಿದೆ. ಇದಕ್ಕೆ ಪೂರಕವಾಗಿ ಸುಬ್ರಹ್ಮಣ್ಯದ ಎರಡು ಕಡೆಗಳಲ್ಲಿ ಗೋಮಾಳಕ್ಕಾಗಿ ಜಾಗ ಗುರುತಿಸಲಾಗಿದೆ. ಕೊಲ್ಲೂರಿನಲ್ಲಿ ಜಾಗ ಮೀಸಲಿಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹಿಂದು ಧಾರ್ಮಿಕ ದತ್ತಿ ಇಲಾಖೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮಂಗಳವಾರ ಆಯೋಜಿಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಎಂದರು.
    ಮುಜರಾಯಿ ಇಲಾಖೆಗೆ ಸೇರಿದ ಎ ಗ್ರೇಡ್ 84 ದೇವಾಲಯಗಳ ಆಡಳಿತ ಅವಧಿ ಮುಕ್ತಾಯಗೊಂಡಿದ್ದು, 45ರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಬಿ ಮತ್ತು ಸಿ ಶ್ರೇಣಿಯ ದೇವಸ್ಥಾನಗಳಲ್ಲಿ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
    ರೈತರ ಹಿತ ರಕ್ಷಣೆ ಬಯಸುವವರು ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಲಾರರು. ಈ ಕಾಯ್ದೆ ಮೂಲಕ ಬೆಳೆದ ಬೆಳೆಯನ್ನು ಎಲ್ಲಿಯೂ, ಯಾರಿಗೂ ಬೇಕಾದರೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಮಧ್ಯವರ್ತಿಗಳಿಗೆ ತೊಂದರೆಯಾಗಿದೆ ಎಂದರು.

    34 ಸಾವಿರ ಹೆಕ್ಟೇರ್ ಭೂಮಿ ಡೀಮ್ಡ್ ಫಾರೆಸ್ಟ್‌ನಿಂದ ಹೊರಕ್ಕೆ: ಡೀಮ್ಡ್ ಫಾರೆಸ್ಟ್ ಸಮಸ್ಯೆಯಿಂದ ಬಹಳಷ್ಟು ಮಂದಿಗೆ ಭೂಮಿಯ ಹಕ್ಕುಪತ್ರಗಳನ್ನು ಹಾಗೂ ಹಕ್ಕುಗಳನ್ನು ನೀಡಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ 9 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಇದೆ ಎಂದು ಗುರುತಿಸಲಾಗಿದ್ದು, ಇದೀಗ ನಡೆಸಿರುವ ಪುನರ್ ಪರಿಶೀಲನೆಯಿಂದ 6 ಲಕ್ಷ ಹೆಕ್ಟೇರ್ ಪ್ರದೇಶವನ್ನು ಆ ವ್ಯಾಪ್ತಿಯಿಂದ ಕೈ ಬಿಡಲು ನಿರ್ಧರಿಸಲಾಗಿದೆ. ಇದರಿಂದ ಜನಸಾಮಾನ್ಯರ ಪಾಲಿಗೆ ವರದಾನವಾಗಲಿದೆ. ಉಡುಪಿ ಜಿಲ್ಲೆಯೊಂದರಲ್ಲಿಯೇ 34 ಸಾವಿರ ಹೆಕ್ಟೇರ್ ಪ್ರದೇಶವನ್ನು ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಕೈಬಿಡಲಾಗಿದೆ ಎಂದು ಸಚಿವ ಕೋಟ ತಿಳಿಸಿದರು.

    ಸಿಎಂ ನನ್ನ ಸೇವೆ ಪರಿಗಣಿಸುವ ವಿಶ್ವಾಸ: ಸಂಪುಟ ಪುನಾರಚನೆ ವಿಚಾರದಲ್ಲಿ ನಿರಾಳವಾಗಿದ್ದೇನೆ, ಮುಖ್ಯಮಂತ್ರಿಯವರು ನನ್ನ ಸೇವೆಯನ್ನು ಪರಿಗಣಿಸುವ ಬಗ್ಗೆ ಪೂರ್ಣ ವಿಶ್ವಾಸವಿದೆ ಎಂದು ಸಚಿವ ಕೋಟ ಹೇಳಿದರು. ರಾಜ್ಯದಲ್ಲಿ ಬಿಜೆಪಿಯನ್ನು ಶಕ್ತಿಯುತವಾಗಿ ಕಟ್ಟಿ ಬೆಳೆಸಿದವರು ಬಿ.ಎಸ್.ಯಡಿಯೂರಪ್ಪ. ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಉಪಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಸಾಧಿಸಿದೆ. ಅವರೇ ಪೂರ್ಣ ಪ್ರಮಾಣದಲ್ಲಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts