ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು

blank

ಮದ್ದೂರು: ಗ್ರಾಮೀಣ ಭಾಗದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಬೇಕೆಂಬ ಸದುದ್ದೇಶದಿಂದ ಕ್ಷೇತ್ರದಾದ್ಯಂತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದಾಗಿ ಶಾಸಕ ಕೆ.ಎಂ.ಉದಯ ತಿಳಿಸಿದರು.
ತಾಲೂಕಿನ ಬೆಸಗರಹಳ್ಳಿ ಗ್ರಾಮದಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಕಾಮಗಾರಿಯನ್ನು ಗುರುವಾರ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ತಾಲೂಕಿನ ನವಿಲೆ, ಮಲ್ಲನಕುಪ್ಪೆ, ಕೆಸ್ತೂರು, ಹೆಮ್ಮನಹಳ್ಳಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಸರ್ಕಾರಿ ಶಾಲೆಗಳ ಹೆಚ್ಚುವರಿ ಕೊಠಡಿಗಳಿಗೆ ಚಾಲನೆ ನೀಡಿ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ಯಾರೊಬ್ಬರೂ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶ ಹೊಂದಿರುವ ತಾವುಗಳು ಅಗತ್ಯವಿರುವ ಗ್ರಾಮಗಳಿಗೆ ಕೊಠಡಿ ಹಾಗೂ ಶಾಲೆಗಳ ದುರಸ್ತಿ ಕಾರ್ಯಕ್ಕೆ ಮುಂದಾಗಿರುವುದಾಗಿ ಹೇಳಿದರು.
ಕಳೆದ ಹಲವಾರು ವರ್ಷಗಳಿಂದಲೂ ನೆೆನಗುದಿಗೆ ಬಿದ್ದಿದ್ದ ಕರ್ನಾಟಕ ಪಬ್ಲಿಕ್ ಶಾಲೆಯ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುದಾನವನ್ನು ಬಿಡುಗಡೆಗೊಳಿಸಿ ತಿಂಗಳ ಅಂತ್ಯದಲ್ಲಿ ಶಾಲೆಯನ್ನು ಪ್ರಾರಂಭಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂದರು.
ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹವನ್ನು ಬದಿಗೊತ್ತಿ ಸುಸಜ್ಜಿತವಾದ ಕಟ್ಟಡವನ್ನು ಹೊಂದಿರುವ ಮತ್ತು ನುರಿತ ಶಿಕ್ಷಕರು ಹಾಗೂ ಹಲವಾರು ಸೌಲಭ್ಯಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುವುದರ ಮೂಲಕ ಶಾಲೆಗಳ ಉಳಿವಿಗೆ ಕ್ರಮ ವಹಿಸುವಂತೆ ಮನವಿ ಮಾಡಿದರು.
ತಾಲೂಕಿನ ಮಲ್ಲನಕುಪ್ಪೆ, ಕೊಕ್ಕರೆಬೆಳ್ಳೂರು ಗ್ರಾಮಗಳಲ್ಲಿ ಕೆ.ಪಿ.ಎಸ್ ಶಾಲೆಗಳನ್ನು ತೆರೆಯಲು ಈಗಾಗಲೇ ಮಂಜೂರಾತಿಗೆ ಸರ್ಕಾರಕ್ಕೆ ಪತ್ರ ವ್ಯವಹಾರ ನಡೆಸಿದ್ದು ಮುಂದಿನ ದಿನಗಳಲ್ಲೂ ಕಟ್ಟಡ ಕಾಮಗಾರಿಗೆ ಚಾಲನೆ ದೊರೆಯಲಿದ್ದು ಜತೆಗೆ ತಾಲೂಕಿನಾದ್ಯಂತ ಶಿಥಿಲಗೊಂಡಿರುವ ಶಾಲೆಗಳ ದುರಸ್ತಿ ಕಾರ್ಯಕ್ಕೂ ಅನುದಾನ ಬಿಡುಗಡೆಗೊಳಿಸುವಂತೆ ಸಚಿವರೊಟ್ಟಿಗೆ ಚರ್ಚಿಸಿರುವುದವಾಗಿ ಹೇಳಿದರು.
ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನೂತನ ಶಾಲಾ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು ಹಂತ ಹಂತವಾಗಿ ತಾಲೂಕಿನಾದ್ಯಂತ ಶಾಲೆಗಳ ಆಧುನೀಕರಣಕ್ಕೆ ಹೆಚ್ಚಿನ ಒತ್ತು ನೀಡಿದ್ದು ಮತ್ತು ಮೊರಾರ್ಜಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ, ಅಂಬೇಡ್ಕರ್ ವಸತಿ ಶಾಲೆಗಳಿಗೆ ನಿವೇಶನ ದೊರಕಿಸಿಕೊಟ್ಟು ಸ್ವಂತ ಸ್ಥಳದಲ್ಲಿ ವಸತಿ ನಿಲಯಗಳನ್ನು ನಿರ್ಮಿಸಲು ಕ್ರಮ ವಹಿಸಲಾಗಿದೆ ಎಂದರು.
ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಗ್ರಾ.ಪಂ. ಸದಸ್ಯರಾದ ಬಾಬು ಎಂ.ಆರ್.ಕಾಳೇಗೌಡ, ಪ್ರಸನ್ನ, ಮುರುಳಿ, ಮಂಜುನಾಥ್, ರವಿ, ಶೋಭಾ, ಹರೀಶ್, ಮುಖಂಡರಾದ ಬೆಸಗರಹಳ್ಳಿ ಗೋಪಿ, ಶರತ್, ಪ್ರಾಂಶುಪಾಲ ಬಂಗಾರನಾಯಕ್, ಮುಖ್ಯ ಶಿಕ್ಷಕ ತ್ರಿಮೂರ್ತಿ, ಲೋಕೋಪಯೋಗಿ ಇಲಾಖೆ ಎಇಇ ದೇವಾನಂದ, ಹನುಮಂತು ಹಾಜರಿದ್ದರು.

TAGGED:
Share This Article

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…

ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್​! Cardiac Arrest

Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…