More

    ಹಸಿರೆಲೆ ಗೊಬ್ಬರ ಬಳಕೆಗೆ ಪ್ರಾಮುಖ್ಯತೆ ನೀಡಿ – ಕೃಷಿ ವಿಜ್ಞಾನಗಳ ವಿವಿ ಕುಲಪತಿ

    ರಾಯಚೂರು: ರೈತರು ಕೃಷಿ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಲು ಬೀಜೋತ್ಪಾದನೆಯಲ್ಲಿ ತೊಡಗುವುದು ಅವಶ್ಯವಾಗಿದೆ. ರೈತರು ಗುಣಮಟ್ಟದ ಬಿತ್ತನೆ ಬೀಜಗಳನ್ನು ಬಳಕೆ ಮಾಡಿದಾಗ ಹೆಚ್ಚಿನ ಇಳುವರಿ ಮತ್ತು ಆದಾಯ ಪಡೆದುಕೊಳ್ಳಲು ಸಾಧ್ಯ ಎಂದು ಕೃಷಿ ವಿಜ್ಞಾನಗಳ ವಿವಿ ಕುಲಪತಿ ಡಾ.ಎಂ.ಹನುಮಂತಪ್ಪ ಹೇಳಿದರು.

    ಕೃಷಿ ವಿಜ್ಞಾನಗಳ ವಿವಿಯ ಬೀಜ ಘಟಕದಲ್ಲಿ ಮುಂಗಾರು ಬೀಜ ದಿನೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದರು. ವಿವಿಯ ವಿಜ್ಞಾನಿಗಳು ರೈತರಿಗೆ ಸಲಹೆ ನೀಡುವುದರ ಜತೆಗೆ ಗುಣಮಟ್ಟದ ಬಿತ್ತನೆ ಬೀಜ ಒದಗಿಸುವ ಕೆಲಸ ಮಾಡುತ್ತಿದ್ದಾರೆ. 2023 ಅನ್ನು ಸಿರಿಧಾನ್ಯಗಳ ವರ್ಷ ಎಂದು ಆಚರಿಸಲಾಗುತ್ತಿದೆ.

    ಇದನ್ನೂ ಓದಿ: ಲಕ್ಷ ಎಕರೆ ಭೂಮಿ ಬರಡು: ರಾಜ್ಯದಲ್ಲಿ ರಸಗೊಬ್ಬರ, ಕ್ರಿಮಿನಾಶಕ ಬಳಕೆಯಿಂದ ಫಲವತ್ತತೆ ಕುಸಿತ

    ಸಿರಿಧಾನ್ಯಗಳ ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳನ್ನು ಹೆಚ್ಚಿಸಲು ಯೋಜನೆ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಸಿರೆಲೆ ಗೊಬ್ಬರ ಬಳಕೆ ಪ್ರಮುಖವಾಗಿದೆ ಎಂದು ಹೇಳಿದರು.

    ವಿವಿ ಆಡಳಿತಾಧಿಕಾರಿ ಡಾ.ಜಾಗೃತಿ ದೇಶಮಾನ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರು ವೈಜ್ಞಾನಿಕ ಪದ್ಧತಿ ಅಳವಡಿಕೆ ಮಾಡಿಕೊಂಡರೆ ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಿಕೊಳ್ಳಬಹುದಾಗಿದೆ. ಬಿತ್ತನೆ ಬೀಜಗಳನ್ನು ಖರೀದಿಸುವಾಗ ಗುಣಮಟ್ಟದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

    ಬೀಜ ಘಟಕದ ವಿಶೇಷಾಧಿಕಾರಿ ಡಾ.ಅರುಣಕುಮಾರ ಹೊಸಮನಿ ಮಾತನಾಡಿ, ಮುಂಗಾರು ಹಂಗಾಮು ಆರಂಭವಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗುವುದಕ್ಕಿಂತ ಮುಂಚೆ ಮುಂಗಾರು ಬೆಳೆಗಳ ತಾಂತ್ರಿಕ ಮಾಹಿತಿ, ಸುಧಾರಿತ ಬೀಜೋತ್ಪಾದನೆ ಬಗ್ಗೆ ಮಾಹಿತಿ ನೀಡುವುದಕ್ಕಾಗಿ ಮುಂಗಾರು ಬೀಜ ದಿನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಸುಧಾರಿತ ಬೀಜಗಳು, ಜೈವಿಕ ಪೀಡೆ ನಾಶಕಗಳು, ಸಾವಯವ ಕೃಷಿ, ಕೃಷಿ ಯಂತ್ರೋಪಕರಣ, ಸಂಸ್ಕರಣೆ ಪ್ರದರ್ಶನ ಏರ್ಪಡಿಸುವುದರ ಜತೆಗೆ ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ಮಾಹಿತಿ ನೀಡಲಾಯಿತು.

    ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಎಸ್.ಎಂ.ಸಿದ್ದಾರೆಡ್ಡಿ, ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯ ಡಿ.ಮಲ್ಲಿಕಾರ್ಜುನ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಉಪ ನಿರ್ದೇಶಕ ಜಿ.ಎಂ.ಗುರುಬಸವರಾಜ, ಪ್ರಾಧ್ಯಾಪಕರಾದ ಡಾ.ಎಸ್.ಆರ್.ದೊಡ್ಡಗೌಡರ್, ಡಾ.ಉಮೇಶ ಹಿರೇಮಠ, ಡಾ.ಇಮ್ತಿಯಾಜ್ ಅಹ್ಮದ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts