ಗ್ರಿಲ್ಸ್ ಅಳವಡಿಕೆ ಗುಣಮಟ್ಟದಿಂದ ಕೂಡಿರಲಿ

ಹನೂರು: ಪಾದಚಾರಿ ಮಾರ್ಗದಲ್ಲಿ ಗ್ರಿಲ್ಸ್ ಅಳವಡಿಕೆ ಗುಣಮಟ್ಟದಿಂದ ಕೂಡಿರಬೇಕು, ದೀರ್ಘಕಾಲ ಬಾಳಿಕೆ ಬರುವ ನಿಟ್ಟಿನಲ್ಲಿ ಬಣ್ಣ ಬಳಿಯಬೇಕು, ಇಲ್ಲವಾದಲ್ಲಿ ಸಂಬಂಧಪಟ್ಟವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ಶಾಸಕ ಎಂ.ಆರ್.ಮಂಜುನಾಥ್ ಎಚ್ಚರಿಕೆ ನೀಡಿದರು.


ಪಟ್ಟಣದ ಆರ್.ಎಸ್ ದೊಡ್ಡಿ ಬಳಿ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಗ್ರಿಲ್ಸ್ ಕಾಮಗಾರಿಯನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿದ ಅವರು, ಕೆ-ಶಿಪ್ ಯೋಜನೆಯಡಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದು, ಬಹುತೇಕ ಪೂರ್ಣಗೊಂಡಿದೆ. ಈ ಮಾರ್ಗದ ಆಯಾ ಗ್ರಾಮಗಳಲ್ಲಿ ಪಾದಚಾರಿಗಳು ಸಂಚರಿಸುವ ಮಾರ್ಗದಲ್ಲಿ ಗ್ರಿಲ್ಸ್ ಅಳವಡಿಸಲಾಗಿದೆ. ಆದರೆ ಈಗಾಗಲೇ ಮಳೆಗೆ ತುಕ್ಕು ಹಿಡಿದಿದೆ. ಜತೆಗೆ ಸಮರ್ಪಕವಾಗಿ ಅಳವಡಿಸಿಲ್ಲ. ಹೀಗಿರುವಾಗ ಗ್ರಿಲ್ಸ್‌ಗೆ ಬಣ್ಣ ಬಳಿಯುವುದು ಎಷ್ಟರ ಮಟ್ಟಿಗೆ ಸರಿ? ಇದರಿಂದ ಗ್ರಿಲ್ಸ್ ಬೇಗನೇ ಹಾಳಾಗುವ ಸಾಧ್ಯತೆ ಇದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಆದ್ದರಿಂದ ಈ ಬಗ್ಗೆ ಕೂಡಲೇ ಕ್ರಮವಹಿಸಿ ಗ್ರಿಲ್ಸ್ ಅಳವಡಿಕೆ ಕಾರ್ಯ ಗುಣಮಟ್ಟದಿಂದ ಕೂಡಿರಬೇಕು. ಅಲ್ಲದೇ ಬಣ್ಣ ಬಳಿಯಬೇಕು. ಈ ಬಗ್ಗೆ ಗಮನಕ್ಕೆ ತರಬೇಕು ಎಂದರು


ಜತೆಗೆ ಪಟ್ಟಣದಲ್ಲಿ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಕೆ-ಶಿಪ್ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಅಧಿಕಾರಿಗಳು ಅಗತ್ಯ ಕ್ರಮವಹಿಸಿ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.


ಎಲ್ಲೇಮಾಳ ಗ್ರಾಪಂ ಸದಸ್ಯ ಚಿನ್ನವೆಂಕಟ, ಮುಖಂಡರಾದ ಚನ್ನಾಲಿಂಗನಹಳ್ಳಿಯ ವೆಂಕಟೇಶ್, ತಂಗವೇಲು, ಮುರುಗೇಶ್ ಇನ್ನಿತರರು ಇದ್ದರು.

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…