More

    ಅದ್ಧೂರಿ ಮದುವೆ; ರಾತ್ರಿ ಇಡೀ 28 ಕಿ.ಮೀ​ ನಡೆದು ಮಂಟಪಕ್ಕೆ ಬಂದ ವರ!

    ಒಡಿಶಾ: ಮದುವೆ ಎಂದರೆ ಸಂಭ್ರಮ. ವಧು,ವರರಿಗೆ ವಿಶೇಷ ದಿನವಾಗಿರುತ್ತದೆ. ವಿವಾಹದ ಕುರಿತಾಗಿ ಎಷ್ಟೋ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಆದರೆ ಇಲ್ಲೊಂದು ಕುಟುಂಬ ಮಗನ ಮದುವೆಯನ್ನು ಅದ್ಧೂರಿಯಾಗಿ ಮಾಡಲು ಎಲ್ಲಾ ವ್ಯವಸ್ಥೆ ಮಾಡಿಕೊಂಡಿತ್ತು. ಆದರೆ ಅಲ್ಲಿ ಆಗಿದ್ದೇ ಬೇರೆಯಾಗಿದೆ.

    ಒಡಿಶಾದ ರಾಯಗಡ ಜಿಲ್ಲೆಯ ವಧುವಿನ ಗ್ರಾಮಕ್ಕೆ ಮದುವೆಗಾಗಿ ವರ ನರೇಶ್ ಪ್ರಾಸ್ಕಾ ಮತ್ತು ಅವರ ಕುಟುಂಬ ಮದುವೆಯ ಅದ್ಧೂರಿ ಮೆರವಣಿಗೆಗಾಗಿ 4 ಕಾರು ವ್ಯವಸ್ಥೆ ಮಾಡಿದ್ದರು. ಆದರೆ ವರ ಹಾಗೂ ಆತನ ಕುಟುಂಬ ಸುಮಾರೂ 28 ಕಿ.ಮೀ ಅಂದರೆ ರಾತ್ರೀ ಪೂರ್ತಿ ನಡೆದು ಮರುದಿನ ಮುಂಜಾನೆ ವಧುವಿನ ಮನೆಗೆ ತಲುಪಿದ್ದಾರೆ.

    ಇದನ್ನೂ ಓದಿ: ಆಲಿಕಲ್ಲು ಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟ; ಓರ್ವ ರೈತ ಮೃತ್ಯು

    ಒಡಿಶಾದಲ್ಲಿ ಚಾಲಕರ ಮುಷ್ಕರ ನಡೆಯುತ್ತಿದ್ದ ಕಾರಣದಿಂದಾಗಿ ವಾಹನ ವ್ಯವಸ್ಥೆಗೆ ತಡೆಯಾಗಿದೆ. ವಿಮೆ, ಪಿಂಚಣಿ, ಕಲ್ಯಾಣ ಮಂಡಳಿ ರಚನೆ ಮತ್ತಿತರ ಸಮಾಜ ಕಲ್ಯಾಣ ಕ್ರಮಗಳಿಗೆ ಆಗ್ರಹಿಸಿ ಚಾಲಕ ಏಕತಾ ಮಹಾಸಂಘ ಬುಧವಾರದಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿತ್ತು. ಇದುವೇ ಈ ವರನ ಕುಟುಂಬಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

    ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿಯಲ್ಲಿ ಮುಸ್ಲಿಂ ಮಹಿಳೆಗೆ ಸಮಾನ ಪಾಲಿಲ್ಲ!; ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಮಹಿಳೆ!

    ಹಳ್ಳಿಗೆ ತಲುಪಲು ರಾತ್ರಿಯಿಡೀ ನಡೆದಿದ್ದೇವೆ. ನಮಗೆ ಬೇರೆ ದಾರಿ ಇರಲಿಲ್ಲ. ದ್ವಿಚಕ್ರ ವಾಹನಗಳಲ್ಲಿ ಮದುವೆಗೆ ಬೇಕಾದ ಸಾಮಗ್ರಿಗಳನ್ನು ಕಳುಹಿಸಲಾಗಿತ್ತು. ಕುಟುಂಬದ ಸದಸ್ಯರು, ಸಂಬಂಧಿಕರು ಮತ್ತು ಸ್ನೇಹಿತರು ಕಾಲ್ನಡಿಗೆಯಲ್ಲಿ ವಧುವಿನ ಮನೆಗೆ ಹೋಗಲು ನಿರ್ಧಾರ ಮಾಡಿದೇವು ಎಂದು ವರನ ಕುಟುಂಬದ ಸದಸ್ಯರೊಬ್ಬರು ಮಧ್ಯಮಗಳಿಗೆ ತಿಳಿಸಿದ್ದಾರೆ. ವರನ ಕುಟುಂಬದ ಸದಸ್ಯರು ರಾತ್ರಿಯಲ್ಲಿ ನಡೆದುಕೊಂಡು ಹೋಗುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ.

    ಈ ಜನರು ಭಕ್ತಿಯಿಂದ ತಲೆ ಮೇಲೆ ತೆಂಗಿನಕಾಯಿ ಒಡೆದುಕೊಳ್ಳುತ್ತಾರೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts