More

    ಗೃಹಲಕ್ಷ್ಮೀ ಯೋಜನೆ ಮನೆ ಮನೆಗೆ ತಲುಪಿಸಿ: ಜಿಪಂಸಿಇಒ ರಾಹುಲ್ ರತ್ನಂ ಪಾಂಡೆಯ ಹೇಳಿಕೆ

    ಕನಕಗಿರಿ: ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ನೀಡುವ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯನ್ನು ಮನೆ ಮನೆಗೆ ತಲುಪಿಸಲು ಗ್ರಾಪಂ ಸಿಬ್ಬಂದಿ ಶ್ರಮಿಸಬೇಕು ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಹೇಳಿದರು.


    ಹುಲಿಹೈದರ ಗ್ರಾಪಂಗೆ ಗುರುವಾರ ದಿಢೀರ್ ಭೇಟಿ ನೀಡಿ, ಬಾಪೂಜಿ ಸೇವಾ ಕೇಂದ್ರದಲ್ಲಿ ಗೃಹಲಕ್ಷ್ಮೀ ಯೋಜನೆಯ ಅರ್ಜಿಗಳನ್ನು ನೋಂದಾಯಿಸುವ ಕುರಿತು ಪರಿಶೀಲಿಸಿ ಮಾತನಾಡಿದರು.

    ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಗೆ ನೋಂದಣಿಗೆ ಚಾಲನೆ: ಪ್ರಕ್ರಿಯೆ ವೀಕ್ಷಣೆ ಮಾಡಿದ ಡಿಸಿ ಡಾ.ಕುಮಾರ, ಎಡಿಸಿ ಡಾ.ಎಚ್.ಎಲ್.ನಾಗರಾಜು


    ಜು.19ರಿಂದ ಗೃಹಲಕ್ಷ್ಮೀ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಗ್ರಾಪಂ ಸಿಬ್ಬಂದಿ ಮತ್ತು ಅಂಗನವಾಡಿ ಕಾರ್ಯಕರ್ತರು ಯೋಜನೆಯ ಫಲಾನುಭವಿಗಳಾಗುವವರ ಪಟ್ಟಿ ಪಡೆದು ಅವರನ್ನು ಸಂಪರ್ಕಿಸಿ ಅರ್ಜಿಗಳನ್ನು ನೋಂದಾಯಿಸಬೇಕೆಂದು ಸೂಚಿಸಿದರು. ತಾಪಂ ಇಒ ಚಂದ್ರಶೇಖರ್ ಕಂದಕೂರು, ಅಮರೇಶ್ ರಾಥೋಡ್, ಅಂಗನವಾಡಿ ಮೇಲ್ವಿಚಾರಕಿ ಸುಕನ್ಯ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts