ಹಿಪ್ಪಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ

10ss1mla bhumipuje (1)
ಹಿಪ್ಪಲಿ-ಆಲೂರುಸಿದ್ದಾರ ರಸ್ತೆ ಹಿಪ್ಪಲಿ ಬಳಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್‌ಗೌಡ ಭೂಮಿಪೂಜೆ ಸುಧಾ, ಬಿ.ಕೆ.ಸತೀಶ್, ವೀರೇಂದ್ರಕುಮಾರ್, ಲೋಕೇಶ್, ಜಾರ್ನಾದನ್, ಎಸ್.ಕೆ.ವೀರಪ್ಪ ಇದ್ದರು.
Published on

ಶನಿವಾರಸಂತೆ: ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಆಶ್ವಾಸನೆಯಂತೆ ಗ್ಯಾರಂಟಿ ಯೋಜನೆಯನ್ನು ಜನರಿಗೆ ತಲುಪಿಸುತ್ತಿರುವ ಜತೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆ ಸೇರಿದಂತೆ ಸಮಗ್ರ ಅಭಿವೃದ್ಧಿ ಕಾರ್ಯ ಮಾಡುತ್ತಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಹೇಳಿದರು.

ಕೋಟಿ ರೂ. ವೆಚ್ಚದಲ್ಲಿ ಹಂಡ್ಲಿ ಗ್ರಾ.ಪಂ. ವ್ಯಾಪ್ತಿಯ ಹಿಪ್ಪಲಿ-ಆಲೂರುಸಿದ್ದಾಪುರ ರಸ್ತೆಯನ್ನು 406 ಮೀ. ದೂರದ ವರೆಗೆ ಕಾಂಕ್ರೀಟ್ ರಸ್ತೆಯಾಗಿ ವಿಸ್ತರಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರ ಗ್ರಾಮೀಣ ರಸ್ತೆ ಅಭಿವೃದ್ಧಿ, ಕಾಂಕ್ರೀಟ್ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಹಿಪ್ಪಲಿ-ಆಲೂರುಸಿದ್ದಾಪುರ ಕಾಂಕ್ರಿಟ್ ರಸ್ತೆ ಅಭಿವೃದ್ಧಿ ಸೇರಿದಂತೆ ಗ್ರಾಮೀಣ ಪ್ರದೇಶದ ಕಾಂಕ್ರೀಟ್ ರಸ್ತೆ ಅಭಿವೃದ್ಧಿಗಾಗಿ ಒಟ್ಟು 2. 5 ಕೋಟಿ ರೂ. ಅನುದಾನ ಎಂದು ಮಾಹಿತಿ ನೀಡಿದರು.

ಲೋಕೋಪಯೋಗಿ ಅಧಿಕಾರಿಗಳು, ಗುಣಮಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಾಮಸ್ಥರು ಸಹ ಕಳಪೆ ಕಾಮಗಾರಿ ನಡೆಯದಂತೆ ಮತ್ತು ಗುಣಮಟ್ಟದ ಕಾಮಗಾರಿ ನಡೆಯುವಂತೆ ಗಮನಹರಿಸಬೇಕು. ರಸ್ತೆ ವಿಸ್ತರಣೆ ಕಾಮಗಾರಿ ಸಂದರ್ಭ ರಸ್ತೆ ಬದಿಯ ತೋಟದ ಮಾಲೀಕರು ತಮ್ಮ ತೋಟದ ಬೇಲಿಯಲ್ಲಿರುವ ಮರದ ಕೊಂಬೆಗಳನ್ನು ತೆರವುಗೊಳಿಸುವ ಮೂಲಕ ಕಾಮಗಾರಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಹಂಡ್ಲಿ ಗ್ರಾ.ಪಂ. ಅಧ್ಯಕ್ಷೆ ಸುಧಾ ಈರೇಶ್ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ.ಸತೀಶ್, ಅಕ್ರಮ-ಸಕ್ರಮ ಸಮಿತಿ ಕಾರ್ಯದರ್ಶಿ ಜನಾರ್ದನ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಲೋಕೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜ್, ಹಿರಿಯ ಕಾಂಗ್ರೆಸ್ ಮುಖಂಡ ಎಸ್.ಕೆ.ವೀರಪ್ಪ, ಕೆಡಿಪಿ ಸದಸ್ಯ ಎಸ್.ಸಿ.ಶರತ್ ಶೇಖರ್, ಹಂಡ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೀರೇಂದ್ರಕುಮಾರ್, ಲೋಕೋಪಯೋಗಿ ಇಲಾಖೆ ಅಭಿಯಂತರರು, ಅಧಿಕಾರಿಗಳು ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net