ರಾಜಕೀಯ ದ್ವೇಷ: ಬಿಜೆಪಿ-ಪಕ್ಷೇತರ ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ಗುಂಪು ಘರ್ಷಣೆ, ಗಾಯಾಳು ಆಸ್ಪತ್ರೆಗೆ ದಾಖಲು

Damaged Roof
ಮನೆ ಮಾಡು ಧ್ವಂಸ
Published on

ಚಿತ್ರದುರ್ಗ: ರಾಜ್ಯದಲ್ಲಿ ಚುನಾವಣಾ ಕಾವೇರಿದ್ದು, ರಾಜಕೀಯ ಪಕ್ಷಗಳ ಬೆಂಬಲಿಗರ ಮಧ್ಯೆಯೂ ಪೈಪೋಟಿ ಯುದ್ಧೋತ್ಸಾಹವಾಗಿ ಪರಿಣಮಿಸಿದೆ. ಅದರಲ್ಲೂ ಇಲ್ಲೊಂದು ಕಡೆ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ಗುಂಪು ಘರ್ಷಣೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಯಾದಘಟ್ಟ ಗ್ರಾಮದಲ್ಲಿ ಎರಡು ಗುಂಪುಗಳ ಮಧ್ಯೆ ಈ ಘರ್ಷಣೆ ನಡೆದಿದೆ. ಪಕ್ಷೇತರ ಅಭ್ಯರ್ಥಿ ಗೂಳಿಹಟ್ಟಿ ಶೇಖರ್ ಬೆಂಬಲಿಗ ಗಿರೀಶ್ ಮತ್ತು ಬಿಜೆಪಿ ಅಭ್ಯರ್ಥಿ ಎಸ್.ಲಿಂಗಮೂರ್ತಿ ಬೆಂಬಲಿಗ ಓಂಕಾರಪ್ಪ ಗುಂಪುಗಳ ಮಧ್ಯೆ ಈ ಘರ್ಷಣೆ ನಡೆದಿದೆ.

ಗಿರೀಶ್ ಮನೆ ಬಳಿಗೆ ಬಂದಿದ್ದ ಓಂಕಾರಪ್ಪ ಮತ್ತಿತರರ ಗುಂಪು ಗಿರೀಶ್ ತಂದೆ ಮರುಳಪ್ಪಗೆ ದೊಣ್ಣೆ ಕಲ್ಲುಗಳಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಈ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀರಾಂಪುರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net