More

    ಗೃಹಲಕ್ಷ್ಮೀ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ; ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾಹಿತಿ

    ಧಾರವಾಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗಹಲಕ್ಷ್ಮೀ ಯೋಜನೆಗೆ ಬುಧವಾರ ಚಾಲನೆ ದೊರೆತಿದೆ. ಜಿಲ್ಲೆಯ ಅರ್ಹ ಲಾನುಭವಿಗಳು ನೊಂದಾಯಿಸಿಕೊಳ್ಳಲು ಅಗತ್ಯ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
    ಪ್ರಕಟಣೆ ನೀಡಿರುವ ಅವರು, ಯೋಜನೆ ಜಾರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ನೋಡಲ್ ಇಲಾಖೆಯಾಗಿದೆ. ನೋಂದಣಿಗೆ ಅಂತಿಮ ದಿನಾಂಕ ನಿಗದಿಗೊಳಿಸಿಲ್ಲ. ಪಡಿತರ ಚೀಟಿಯಲ್ಲಿ ಯಜಮಾನಿ ಎಂದು ಗುರುತಿಸಿರುವ ಮಹಿಳೆಯು  ಲಾನುಭವಿಯಾಗುತ್ತಾರೆ. ಆದರೆ, ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ಟಿ ಪಾವತಿದಾರರಾಗಿದ್ದರೆ ಅರ್ಹರಲ್ಲ.
    * ಜಿಲ್ಲೆಯ ಯಜಮಾನಿ ಮಹಿಳೆಯರು:
    ಹುಬ್ಬಳ್ಳಿ- ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ 1,83,107 ಪಡಿತರ ಚೀಟಿದಾರರಿದ್ದಾರೆ. ಗೃಹಲಕ್ಷ್ಮೀ ಯೋಜನೆಯಡಿ ಲಾನುಭವಿಗಳ ನೋಂದಣಿಗೆ ಮಹಾನಗರ ವ್ಯಾಪ್ತಿಯಲ್ಲಿ 25 ಕರ್ನಾಟಕ ಒನ್ ಕೇಂದ್ರಗಳಿವೆ. ಅಲ್ಲದೆ, ಪ್ರತಿ ವಲಯಕ್ಕೊಂದರಂತೆ 12 ಹೆಚ್ಚುವರಿ ನೋಂದಣಿ ಕೇಂದ್ರಗಳು ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ.
    ಜಿಲ್ಲಾ ಗ್ರಾಮೀಣ ಭಾಗ, ಪಟ್ಟಣ ಪಂಚಾಯಿತಿ, ಪುರಸಭೆ ಮತ್ತು ನಗರಸಭೆ ವ್ಯಾಪ್ತಿಗಳಲ್ಲಿ 2,33,475 ಪಡಿತರ  ಚೀಟಿದಾರರಿದ್ದಾರೆ. ಗೃಹಲಕ್ಷ್ಮೀ ನೋಂದಣಿಗೆ 177 ಗ್ರಾಮ ಒನ್ ಕೇಂದ್ರ, 145 ಬಾಪೂಜಿ ಸೇವಾ ಕೇಂದ್ರ, 6 ಕರ್ನಾಟಕ ಒನ್  ಹಾಗೂ 12 ಯು.ಎಲ್.ಬಿ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
    * ನೋಂದಣಿ ವಿಧಾನ: ಲಾನುಭವಿಯು ನೋಂದಣಿಯನ್ನು 2 ವಿಧಾನದಿಂದ ಮಾಡಿಸಬಹುದು. ರೇಶನ್ ಕಾರ್ಡ್‌ನಲ್ಲಿ ಗುರುತಿಸಲಾದ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು ಎಸ್‌ಎಂಎಸ್ ಮೂಲಕ ತಿಳಿಸಲಾಗುವುದು. ಗ್ರಾಮಾಂತರ ಪ್ರದೇಶದಲ್ಲಿ ಸಮೀಪದ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರವಾಗಿರುತ್ತದೆ. ನಗರ ಪ್ರದೇಶದಲ್ಲಿ  ಸಮೀಪದ ಕರ್ನಾಟಕ ಒನ್ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು ಕೇಂದ್ರವಾಗಿರುತ್ತವೆ. ಅಲ್ಲದೆ, ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು (ಪ್ರಜಾಪ್ರತಿನಿಧಿ) ಮನೆಗೆ ಭೇಟಿ ನೀಡಲಿದ್ದು, ಅವರಿಂದಲೂ ನೋಂದಾಯಿಸಿಕೊಳ್ಳಬಹುದು.
    * ಅಗತ್ಯ ದಾಖಲೆಗಳು:
    ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಯಜಮಾನಿಯ ಬ್ಯಾಂಕ್ ಖಾತೆಯ ಪಾಸ್‌ಬುಕ್ ಅಗತ್ಯ. ಯಜಮಾನಿಯು ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದರೆ ಆ ಬ್ಯಾಂಕ್ ಖಾತೆಯ ಪಾಸ್‌ಬುಕ್ ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಸದರಿ ಬ್ಯಾಂಕ್ ಖಾತೆಯ ಪಾಸ್‌ಬುಕ್ ತರಬೇಕು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts