More

    Gruha Lakshmi Scheme: ಜು.19ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ; ಪ್ರಕ್ರಿಯೆ ಹೇಗೆ ನಡೆಯುತ್ತದೆ? ಇಲ್ಲಿದೆ ವಿವರ

    ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಮನೆಯೊಡತಿಗೆ ಮಾಸಿಕ ಎರಡು ಸಾವಿರ ರೂ ಭತ್ಯೆ ನೀಡುವ ಗೃಹಲಕ್ಷ್ಮಿ ಯೋಜನೆಗೆ ಜುಲೈ 17 ಅಥವಾ 19ರಂದು ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಚಾಲನೆ ನೀಡುವ ಸಾಧ್ಯತೆಗಳಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಒಂದು ವೇಳೆ ರಾಷ್ಟ್ರೀಯ ನಾಯಕರ ಲಭ್ಯತೆಯಿಲ್ಲದಿದ್ದರೆ ಜು.19ರ ಸಂಜೆ ಬ್ಯಾಂಕ್ವೆಟ್ ಹಾಲ್​​​​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ಆ್ಯಪ್ ಬಿಡುಗಡೆ ಮಾಡಲಿದ್ದು, ಅದೇ ದಿನದಿಂದ ಅರ್ಜಿಗಳು ಅಪ್ ಲೋಡ್ ಆಗಲಿವೆ ಎಂದು ಸ್ಪಷ್ಟಪಡಿಸಿದರು.

    ಹೀಗಿರಲಿದೆ ಪ್ರಕ್ರಿಯೆ…
    * ಮೊದಲನೆಯದಾಗಿ ಈಗಾಗಲೇ ರೇಷನ್ ಕಾರ್ಡಿನಲ್ಲಿ ಗುರುತಿಸಲಾಗಿರುವ ಪುತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಹಾಗೂ ನೊಂದಾವಣಿ ಮಾಡಿಸುವ ಸ್ಥಳದ ವಿವರಗಳನ್ನು SMS ಮೂಲಕ ತಿಳಿಸಲಾಗುವುದು.

    * ಗ್ರಾಮಾಂತರ ಪುದೇಶದಲ್ಲಿ ಅವರು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರವಾಗಿರುತ್ತದೆ. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್ ಬೆಂಗಳೂರು-ಒನ್,ಬಿಬಿಎಂಪಿ ವಾರ್ಡ್ ಕಛೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಛೇರಿಗಳು ಕೇಂದ್ರವಾಗಿರುತ್ತದೆ.

    *ರೇಷನ್ ಕಾರ್ಡ್ ನಲ್ಲಿ ಗುರುತಿಸಿದ ಪ್ರತಿ ಫಲಾನುಭವಿ ಮೊಬೈಲ್ ಸಂಖ್ಯೆಗೆ ನೋಂದಣಿಗೆ ನಿಗದಿಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು ಎಸ್ಎಂಎಸ್ ಮೂಲಕ ತಿಳಿಸಲಾಗುತ್ತದೆ.

    *ಏನಾದರೂ ಕೇಳುವುದು ಅಥವಾ ಮಾಹಿತಿ ಬೇಕಿದ್ದರೆ ಸಹಾಯವಾಣಿ ಸಂಖ್ಯೆ 1902ಗೆ ಕರೆ ಮಾಡಬಹುದು ಅಥವಾ 8147500500 ನಂಬರ್‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.

    *ಪರ್ಯಾಯವಾಗಿ “ಪುಜಾಪುತಿನಿಧಿ” (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ನೊಂದಾಯಿಸಿಕೊಳ್ಳಬಹುದು.

    *ಯೋಜನೆಯಡಿ ನೊಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಬುಕ್ ಆಧಾರ್ ನಂಬರ್ ಜೋಡಣೆಯಾಗಿರುವ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಸದರಿ ಬ್ಯಾಂಕ್‌ ಖಾತೆಯ ಪಾಸ್‌ ಬುಕ್), ಮಾಹಿತಿ ಅಗತ್ಯವಿರುತ್ತದೆ.

    *ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ- ಒನ್/ಬಾಪೂಜಿಕೇಂದ್ರ/ಕರ್ನಾಟಕ-ಒನ್/ಬೆಂಗಳೂರು-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ.

    *ಗ್ರಾಮ್-ಒನ್ / ಬಾಪೂಜಿಕೇಂದ್ರ / ಕರ್ನಾಟಕ-ಒನ್ / ಬೆಂಗಳೂರುಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡ ನೀಡಲಾಗುವುದು ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು. ಒಂದು ವೇಳೆ ಫಲಾನುಭವಿಯು ಗ್ರಾಮ್-ಒನ್ / ಬಾಪೂಜಿಕೇಂದ್ರ / ಕರ್ನಾಟಕ-ಒನ್ ನೊಂದಾಯಿಸಿಕೊಂಡಿದಲ್ಲಿ, ಆನಂತರ ಪ್ರಜಾಪ್ರತಿನಿಧಿ ಅವರ ಮನೆಗೆ ಭೇಟಿ ನೀಡಿ ನೊಂದಾಯಿಸಲು ಕೇಂದ್ರಗಳಲ್ಲಿ ಪ್ರಯತ್ನಿಸಿದರೆ ಈಗಾಗಲೇ ನೊಂದಾಯಿಸಿರುವ ಮಾಹಿತಿ ವ್ಯಕ್ತವಾಗುತ್ತದೆ. ಈಗಾಗಲೇ ಆಧಾರ್ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ತಿಂಗಳಿಗೆ ಡಿಬಿಟಿ ಮೂಲಕ ರೂ.2000 ಜಮೆ ಮಾಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ಅಥವಾ ಗ್ರಾಮ್-ಒನ್/ ಬಾಪೂಜಿಕೇಂದ್ರ/ ಕರ್ನಾಟಕ-ಒನ್ / ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಲ್ಲಿ ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್ ಎಂಎಸ್ ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನೆಯಾಗಲಿದೆ.

    *ರಾಜ್ಯದಲ್ಲಿ ಒಟ್ಟು 11 ಸಾವಿರ ಕೇಂದ್ರಗಳಿವೆ. ಪ್ರತಿದಿನ ಬೆಳಗ್ಗೆ ಮತ್ತು ಮಧ್ಯಾಹ್ನ ತಲಾ 30 ಜನರಿಗೆ ಹೆಸರು ನೋಂದಣಿಗೆ ಅವಕಾಶ ಕಲ್ಪಿಸುತ್ತಿದ್ದು, ಈ ಪ್ರಕಾರ ಪ್ರತಿದಿನ 6.50 ಹೆಸರುಗಳು ನೋಂದಣಿಯಾಗಲಿವೆ.

    *ಇದಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಸಮಿತಿ ಪ್ರತಿ ಸಾವಿರ ಜನರಿಗೆ ಇಬ್ಬರು ಪ್ರಜಾಪ್ರತಿನಿಧಿಗಳ ಆಯ್ಕೆಯಾಗಲಿದ್ದು, ಅವರೇ ನೇರವಾಗಿ ಫಲಾನುಭವಿಗಳ ಮನೆ ಬಾಗಿಲಿಗೆ ಹೆಸರು ನೋಂದಣಿ ಮಾಡಿಕೊಳ್ಳಲಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts