More

    ಹೊರಬಿತ್ತು ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಯ ಆಹ್ವಾನ ಪತ್ರಿಕೆ; ಯಾವ್ಯಾವ ಗಣ್ಯರು ಬರ್ತಾರೆ? ಇಲ್ಲಿದೆ ವಿವರ

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಂದು ಚಾಲನೆ ದೊರೆಯಲಿದ್ದು, ಕಾರ್ಯಕ್ರಮಕ್ಕೆ ಹಲವು ಗಣ್ಯರಿಗೆ ಆಹ್ವನ ನೀಡಲಾಗಿದೆ.

    ಜುಲೈ 19 ಸಂಜೆ 5 ಘಂಟೆ ಗೃಹಲಕ್ಷ್ಮಿ ಯೋಜನೆಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲಿನಲ್ಲಿ ಚಾಲನೆ ದೊರೆಯಲಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್​ ಯೋಜನೆಯ ಫಲಾನುಭವಿ ಮಂಜೂರಾತಿ ಆದೇಶ ಪ್ರತಿಯನ್ನು ಹಂಚಲಿದ್ದಾರೆ.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಯೋಜನೆಯ ಪೋಸ್ಟರ್​ ಮತ್ತು ಲಾಂಛನವನ್ನು ಅನಾವರಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಇ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್​ ಹಾಗೂ ರಾಜೀವ್​ ಚಂದ್ರಶೇಖರ್​ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    Gruha Lakshmi

    ಇದನ್ನೂ ಓದಿ: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಎಲ್ಲಾ ರೀತಿಯಲ್ಲಿ ತಯಾರು

    ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ನಮ್ಮ ಇಲಾಖೆಯು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಧಿಕಾರಿಗಳು, ಸಿಬ್ಬಂದಿಗೆ ತಳ ಹಂತದಿಂದ ತರಬೇತಿ ಕೊಟ್ಟಿದ್ದೇವೆ. ನಾಡಕಚೇರಿ, ಗ್ರಾಮ ಒನ್, ಬೆಂಗಳೂರು ಒನ್ ಸಿಬ್ಬಂದಿಗೂ ತರಬೇತಿ ನೀಡಲಾಗಿದೆ.

    ಮನೆ ಯಜಮಾನಿಗೆ ಎರು ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಪತಿಯ ಆಧಾರ್ ​​ಕಾರ್ಡ್ ಕೂಡ ಬೇಕಾಗುತ್ತೆ. ಆಧಾರ್​ ಜತೆಗೆ ಮೊಬೈಲ್ ಕೊಂಡೊಯ್ದರೆ ಸಾಕು, ಬೇರೇನೂ ಬೇಡ. ಬೇರೆ ಖಾತೆಗೆ ಹಣ ಹಾಕಿ ಎನ್ನುವವರು ಪಾಸ್​​ಬುಕ್ ಜೆರಾಕ್ಸ್ ಕೊಡಬೇಕು.

    ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ 8147500500 ಸಂಖ್ಯೆಗೆ ಪಡಿತರ ಚೀಟಿ ಸಂಖ್ಯೆಯನ್ನು SMS ಮಾಡಿ. ಕೂಡಲೇ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ಹೋಗುತ್ತೆ. ಯಾವುದೇ ಮಧ್ಯವರ್ತಿಗಳ ಮೊರೆ ಹೋಗುವ ಅಗತ್ಯವಿಲ್ಲ. ಗೊಂದಲವಿದ್ದರೆ 1902 ನಂಬರ್​ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ ಎಂದು ಮಾಹಿತಿ ನೀಡಿದ್ದಾರೆ.

    Gruha Lakshmi

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts